ನಡೆದಾಡುವ ದೇವರು ಖ್ಯಾತಿಯ ವಿಜಯಪುರ ಜ್ಞಾನ ಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮೀಜಿ ಲಿಂಗೈಕ್ಯ

ವಿಜಯಪುರ: ನಡೆದಾಡುವ ದೇವರು ಎಂದೇ ಖ್ಯಾತರಾಗಿದ್ದ ಜ್ಞಾನಯೋಗಿ ಆಶ್ರಮದ ಸಿದ್ದೇಶ್ವರ ಸ್ವಾಮೀಜಿ(82) ವಿಧಿವಶರಾಗಿದ್ದಾರೆ. ಇಂದು ಸೋಮವಾರ ಸಂಜೆ 6:05ಕ್ಕೆ ಸ್ವಾಮೀಜಿ ಲಿಂಗೈಕ್ಯರಾದರು.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಸಿದ್ದೇಶ್ವರ ಶ್ರೀಗಳ ಆರೋಗ್ಯದಲ್ಲಿ ಏರುಪೇರು ಉಂಟಾಗಿ ಆಶ್ರಮದ ಕೊಠಡಿಯಲ್ಲೇ ಚಿಕಿತ್ಸೆ ನಡೆದಿತ್ತು. ಜಿಲ್ಲಾಧಿಕಾರಿ ಡಾ. ವಿಜಯ ಮಾಂತೇಶ ದಾನಮನ್ನವರ, ಎಸ್ಪಿ ಎಚ್. ಡಿ.ಆನಂದ್ ಕುಮಾರ್ ಹಾಗೂ ಹಲವು ಮಠಾಧೀಶರು ಆಶ್ರಮದ ಆವರಣದಲ್ಲಿ ಬೀಡು ಬಿಟ್ಟಿದ್ದರು. ಆದರೆ ಚಿಕಿತ್ಸೆ ಫಲಿಸದೇ ಆದರೆ ಚಿಕಿತ್ಸೆ ಫಲಿಸದೇ  ಇಂದು ಸಂಜೆ 6:05ಕ್ಕೆ ಸ್ವಾಮೀಜಿ ಲಿಂಗೈಕ್ಯರಾದರು.
ಕಳೆದ ಕೆಲ ಸಿದ್ದೇಶ್ವರ ಸ್ವಾಮೀಜಿ ಅನಾರೋಗ್ಯದಿಂದ ಬಳಲುತ್ತಿದ್ದರು. ಸಿದ್ದೇಶ್ವರ ಸ್ವಾಮೀಜಿ ಆರೋಗ್ಯ ಸ್ಥಿರವಾಗಿತ್ತು. ಆದರೆ ಮಧ್ಯಾಹ್ನ ಮತ್ತು ಸಂಜೆಯ ಹೆಲ್ತ್ ಬುಲೆಟಿನ್‍ನಲ್ಲಿ ಸ್ವಾಮೀಜಿಗೆ ಉಸಿರಾಟ ತೊಂದರೆ ಜಾಸ್ತಿಯಾಗಿದೆ. ಆಮ್ಲಜನಕ ಹಾಗೂ ರಕ್ತದೊತ್ತಡ ಸ್ವಲ್ಪ ಕಡಿಮೆಯಾಗಿದೆ. ಆಮ್ಲಜನಕದ ಬೆಂಬಲ ನೀಡಲಾಗಿದೆ. ಆಹಾರ ತೆಗೆದುಕೊಳ್ಳುತ್ತಿಲ್ಲ. ನಾವು ನಮ್ಮ ಶಕ್ತಿ ಮೀರಿ ಪ್ರಯತ್ನ ಪಡುತ್ತಿದ್ದೇವೆ. ಸ್ವಾಮೀಜಿ ಆಸ್ಪತ್ರೆಗೆ ಬರಲು ಒಪ್ಪುತ್ತಿಲ್ಲ. ಆಶ್ರಮದಲ್ಲಿಯೇ ಚಿಕಿತ್ಸೆ ಕೊಡಿ ಸ್ವಾಮೀಜಿ ಹೇಳಿದ್ದರು ಎಂದು ವೈದ್ಯರು ತಿಳಿಸಿದ್ದರು.
ಡಿಸೆಂಬರ್‌ 31ರಂದು ಭೇಟಿ ನೀಡಿದ್ದ ಸಿಎಂ ಬಸವರಾಜ ಬೊಮ್ಮಾಯಿ ಶ್ರೀಗಳ ದರ್ಶನ ಪಡೆದಿದ್ದರು. ಸಿದ್ದೇಶ್ವರ ಸ್ವಾಮೀಜಿ ಅವರ ಆರೋಗ್ಯ ವಿಚಾರಿಸಿದ್ದರು. ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು, ಪ್ರಧಾನಿ ಮೋದಿ ಅವರನ್ನು ಶ್ರೀಗಳ ಜತೆ ಫೋನಿನಲ್ಲಿ ಮಾತನಾಡಿಸಿದ್ದರು. ಉನ್ನತ ಚಿಕಿತ್ಸೆ ನೀಡುವುದರ ಬಗ್ಗೆ ಪ್ರಧಾನಿಯವರು ಚರ್ಚಿಸಿದಾಗ ಕೈ ಮುಗಿದು ಅದಕ್ಕೆ ಧನ್ಯವಾದ ಅರ್ಪಿಸಿದ್ದರು.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಇಂದಿನ ಪ್ರಮುಖ ಸುದ್ದಿ :-   ಏಪ್ರಿಲ್ 1 ರಿಂದ ₹ 2,000 ಕ್ಕಿಂತ ಹೆಚ್ಚಿನ ಯುಪಿಐ(UPI) ವಹಿವಾಟಿಗೆ 1.1% ಶುಲ್ಕ...ಆದರೆ ಗ್ರಾಹಕರಿಗಿಲ್ಲ ಹೊರೆ

ಸಿದ್ದೇಶ್ವರ ಶ್ರೀಗಳ ಇಚ್ಛೆಯಂತೆ ಅಗ್ನಿಸ್ಪರ್ಶ ಮಾಡಿ ಅಂತ್ಯಕ್ರಿಯೆ ನಡೆಸಲಾಗುತ್ತದೆ. ತಮ್ಮ ಚಿತಾಭಸ್ಮವನ್ನು ನದಿ ಅಥವಾ ಸಾಗರದಲ್ಲಿ ವಿಸರ್ಜಿಸಲು ಸೂಚಿಸಿದ್ದಾರೆ. ಇಷ್ಟೇ ಅಲ್ಲ ಶ್ರೀಗಳ ಇಚ್ಛೆಯಂತೆ ಅಂತಿಮ ವಿಧಿವಿಧಾನ ನೆಯಲಿದೆ.
ವಿಜಯಪುರ ಜಿಲ್ಲಾಧಿಕಾರಿ ವಿಜಯ ಮಹಾಂತೇಶ್ ದಾನಮ್ಮನವರ್ ಅವರು, ನಾಳೆ ಸಂಜೆ 5 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ. ಮಧ್ಯಾಹ್ನ 3 ಗಂಟೆ ವರೆಗೆ ಸಾರ್ವಜನಿಕರ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಇನ್ನು ಸಂಜೆ 4 ಗಂಟೆಗೆ ಸರ್ಕಾರದಿಂದ ಗಾಡ್ ಆಫ್ ಹಾನರ್ ನೀಡಲಾಗುತ್ತದೆ. ಸಂಜೆ 5 ಗಂಟೆಗೆ ಸೈನಿಕ್ ಸ್ಕೂಲ್‌ನಿಂದ ಆಶ್ರಮಕ್ಕೆ ಪಾರ್ಥಿವ ಶರೀರವನ್ನು ತರಲಾಗುತ್ತದೆ. ನಾಳೆ 5 ರಿಂದ 10 ಲಕ್ಷ ಭಕ್ತರು ಅಂತಿಮ ದರ್ಶನಕ್ಕೆ ಬರವು ನಿರೀಕ್ಷೆ ಇದೆ. ಸೈನಿಕ್ ಸ್ಕೂಲ್‌ನಲ್ಲಿ ಸಾರ್ವಜನಿಕ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ. ನಾಳೆ ಬೆಳ್ಗಗೆ 6 ಗಂಟೆಯಿಂದ 3 ಗಂಟೆ ವರೆಗೆ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದ ನಂತರ ಸ್ನಾತಕೋತ್ತರ ವಿದ್ಯಾಭ್ಯಾಸಕ್ಕೆ ಕೊಲ್ಲಾಪುರ ವಿಶ್ವವಿದ್ಯಾನಿಲಯದಿಂದ ತತ್ವಶಾಸ್ತ ವಿಷಯದಲ್ಲಿ ಎಂ.ಎ ಪದವಿಯನ್ನು ಉನ್ನತ ಶ್ರೇಣಿಯಲ್ಲಿ ಪಡೆದರು.
ಸಿದ್ದೇಶ್ವರರ ಪ್ರವಚನ ಕೇಳಿದವರು ಅದರಲ್ಲೇ ತಲ್ಲೀನರಾಗಿಬಿಡುತ್ತಾರೆ. ಅಂಥ ಮಾತ್ರಿಕ ಶಕ್ತಿ ಅವರ ಪ್ರವಚನದಲ್ಲಿತ್ತು. ಎಲ್ಲೇ ಪ್ರವಚನ ಕಾರ್ಯಕ್ರಮ ಇದ್ದರೂ ಅಲ್ಲಿ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಸೇರುತ್ತಿದ್ದರು. ಪ್ರವಚನದಲ್ಲಿ ಅವರು ಬಳಸುವ ಭಾಷೆ, ಪ್ರದಪ್ರಯೋಗ, ಉದಾಹಣೆಗಳ ಸಹಿತ ವಿವರಿಸುವ ಕ್ರಮ, ಸರಳ ಭಾಷೆಯ ಬಳಕೆ ಅದ್ಭುತವಾಗಿತ್ತು. ಶ್ರೀ ಸಿದ್ದೇಶ್ವರ ಸ್ವಾಮೀಜಿಯವರು ಜೀವಂತ ದೇವರಿಗೆ ಹೋಲಿಸಬಹುದಾದ ಮಹಾನ್‌ ಜ್ಞಾನಿ.

ಇಂದಿನ ಪ್ರಮುಖ ಸುದ್ದಿ :-   ನಟಿ ಆಕಾಂಕ್ಷಾ ದುಬೆ ಸಾವಿನ ಪ್ರಕರಣ: ಸಾವಿಗೂ ಮುನ್ನ ಅವರ ರೂಮಿಗೆ ಬಂದಿದ್ದ ವ್ಯಕ್ತಿಯ ಪತ್ತೆಗೆ ಪೊಲೀಸರ ಹುಡುಕಾಟ

ದೇಶದ ಅತ್ಯುನ್ನತ ಪ್ರಶಸ್ತಿ ಹಿಂದಿರುಗಿಸಿದ್ದ ಸ್ವಾಮೀಜಿ
ತಮ್ಮ ಸರಳ ಜೀವನ ಹಾಗೂ ಪ್ರವಚನದ ಮೂಲಕ ನಾಡದಾಡುವ ನಿಜ ದೇವರು ಎಂದೇ ಭಕ್ತರಿಂದ ಕರೆಯುತ್ತಿದ್ದ ವಿಜಯಪುರ ಜ್ಞಾನ ಯೋಗಾನಂದಾ ಸಿದ್ದೇಶ್ವರ ಸ್ವಾಮೀಜಿ ಅವರು ನಡೆದಾಡುವ ವಿಶ್ವಕೋಶ. ದೇಶದ ತ್ಯುನ್ನತ ನಾಗರಿಕ ಗೌರವ ಪ್ರಶಸ್ತಿಯಾದ ಪದ್ಮಶ್ರೀ, ಕರ್ನಾಟಕ ವಿಶ್ವವಿದ್ಯಾನಿಲಯದಿಂದ ಗೌರವ ಡಾಕ್ಟರೇಟ್ ಹೀಗೆ ತಮಗೆ ಸಂದ ಎಲ್ಲ ಪ್ರಶಸ್ತಿ ಮತ್ತು ಪುರಸ್ಕಾರಗಳನ್ನು ಅವರು ವಿನಮ್ರವಾಗಿಯೇ ನಿರಾಕರಿಸಿದ್ದರು.
ತಮ್ಮ ಗುರುಗಳಾದ ಶ್ರೀ ಮಲ್ಲಿಕಾರ್ಜುನ ಸ್ವಾಮಿಗಳು ಮಾಡಿದ ಪ್ರವಚನಗಳನ್ನು ಒಂದುಗೂಡಿಸಿ “ಸಿದ್ದಾಂತ ಶಿಖಾಮಣಿ “ಎಂಬ ಪುಸ್ತಕ ಬರೆದು ಗುರುಗಳ ಹೆಸರಿನಲ್ಲೇ ಪ್ರಕಟಿಸಿದ್ದರು. ಆಗ ಅವರಿಗೆ ಕೇವಲ 19 ವರ್ಷ ಆಗಿತ್ತು.

ವಿಜಯಪುರ ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ
ವಿಜಯಪುರದ ಜ್ಞಾನ ಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮೀಜಿ (82) ಸೋಮವಾರ (ಜನವರಿ 02) ದೈವಾಧೀನರಾಗಿದ್ದಾರೆ. ಈ ಹಿನ್ನೆಲೆ ವಿಜಯಪುರ ಜಿಲ್ಲೆಯಾದ್ಯಂತ ನಾಳೆ (ಜನವರಿ 3) ರಂದು ಸರ್ಕಾರಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಜಿಲ್ಲಾಧಿಕಾರಿ ವಿಜಯ್ ಮಹಾಂತೇಶ್ ದಾನಮ್ಮನವರ್ ಆದೇಶ ಹೊರಡಿಸಿದ್ದಾರೆ.

 

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

4.7 / 5. ಒಟ್ಟು ವೋಟುಗಳು 3

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement