ಮಹದಾಯಿ ನೀರು ನಿರ್ವಹಣಾ ಪ್ರಾಧಿಕಾರ ರಚನೆ ಮಾಡುವಂತೆ ಕೇಂದ್ರಕ್ಕೆ ಒತ್ತಾಯಿಸಿದ ಗೋವಾ

posted in: ರಾಜ್ಯ | 0

ಪಣಜಿ: ಮಹದಾಯಿ ನದಿಯಿಂದ ಕರ್ನಾಟಕವು ನೀರು ತಿರುಗಿಸುವುದನ್ನು ತಡೆಯಲು ಮಹದಾಯಿ ನೀರು ನಿರ್ವಹಣಾ ಪ್ರಾಧಿಕಾರವನ್ನು ರಚಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಲು ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ್ ನೇತೃತ್ವದ ಸಚಿವ ಸಂಪುಟವು ಇಂದು, ಸೋಮವಾರ ನಿರ್ಧರಿಸಿದೆ.
ಕಳಸಾ-ಬಂಡೂರಿ ನೀರಿನ ಯೋಜನೆಗೆ ಕರ್ನಾಟಕದ ವಿವರವಾದ ಯೋಜನಾ ವರದಿ(ಡಿಪಿಆರ್‌)ಗೆ ನೀಡಲಾದ ಎನ್‍ಒಸಿಯನ್ನು ತಕ್ಷಣವೇ ಹಿಂಪಡೆಯುವಂತೆ ಒತ್ತಾಯಿಸಿ ಕೇಂದ್ರಕ್ಕೆ ಪತ್ರ ಬರೆಯಲು ಸಚಿವ ಸಂಪುಟ ನಿರ್ಧರಿಸಿದೆ.
ಮುಖ್ಯಮಂತ್ರಿ ಪ್ರಮೋದ ಸಾವಂತ್ ನೇತೃತ್ವದಲ್ಲಿ ಸೋಮವಾರ ಪಣಜಿಯಲ್ಲಿ ವಿಶೇಷ ಸಚಿವ ಸಂಪುಟ ಸಭೆ ನಡೆಯಿತು. ಸಂಪುಟ ಸಭೆಯ ನಂತರ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಪ್ರಮೋದ ಸಾವಂತ್, ಮಹದಾಯಿ ನದಿಯಿಂದ ಅಕ್ರಮವಾಗಿ ನೀರು ತಿರುಗಿಸುವುದನ್ನು ತಡೆಯಲು ಮಹದಾಯಿ ನೀರು ನಿರ್ವಹಣಾ ಪ್ರಾಧಿಕಾರವನ್ನು ರಚಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಲು ನಿರ್ಧರಿಸಲಾಯಿತು. ಮಹದಾಯಿ ವಿಚಾರವಾಗಿ ಗೋವಾ ಕೇಂದ್ರ ಹಾಗೂ ನೆರೆಯ ಕರ್ನಾಟಕ ರಾಜ್ಯದೊಂದಿಗೆ ಹೋರಾಟ ಮುಂದುವರಿಸಲಿದೆ ಎಂದು ಹೇಳಿದರು.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಮಹದಾಯಿ ನದಿಯ ಕುಡಿವ ನೀರಿನ ಕಳಸಾ-ಬಂಡೂರಿ (ಕಾಲುವೆ) ಯೋಜನೆಯ ವಿವರವಾದ ಯೋಜನಾ ವರದಿ (ಡಿಪಿಆರ್) ಪ್ರತಿಯನ್ನು ನೀಡುವಂತೆ ಕೇಂದ್ರ ಸರ್ಕಾರವನ್ನು ಕೋರಿದ್ದೇವೆ. ಯೋಜನೆ ಯೋಜನಾ ವರದಿಗೆ ನೀಡಿರುವ ಎನ್‍ಒಸಿಯನ್ನು ತಕ್ಷಣವೇ ಹಿಂಪಡೆಯಲು ನಾವು ಕೇಂದ್ರಕ್ಕೆ ಪತ್ರ ಬರೆಯಲಾಗುವುದು. ಅಗತ್ಯವಿದ್ದರೆ, ಗೋವಾಕ್ಕೆ ಯಾವುದೇ ಅನ್ಯಾಯವಾಗದಂತೆ ನೋಡಿಕೊಳ್ಳಲು ಎಲ್ಲಾ ಶಾಸಕಾಂಗ ಪಕ್ಷದ ನಿಯೋಗವು ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ಜಲಶಕ್ತಿ ಸಚಿವರನ್ನು ಭೇಟಿ ಮಾಡಲಿದೆ ಎಂದು ತಿಳಿಸಿದರು.
ನ್ಯಾಯಾಧಿಕರಣದ ಆದೇಶ ಕಾರ್ಯಗತಗೊಳಿಸುವುದನ್ನು ಮೇಲ್ವಿಚಾರಣೆ ಮಾಡಲು ಸಂಬಂಧಿಸಿದ ಮೂರು ರಾಜ್ಯಗಳಾದ ಗೋವಾ, ಕರ್ನಾಟಕ, ಮಹಾರಾಷ್ಟ್ರದ ಸದಸ್ಯರನ್ನು ಒಳಗೊಂಡಿರುವ ಮಹದಾಯಿ ಪ್ರಾಧಿಕಾರವನ್ನು ಕೇಂದ್ರ ಸರ್ಕಾರವು ರಚಿಸಬೇಕು ಎಂದು ಅವರು ಒತ್ತಾಯಿಸಿದರು.

ಇಂದಿನ ಪ್ರಮುಖ ಸುದ್ದಿ :-   ಅಂಬಲಿ ಹಳಸೀತು ಕಂಬಳಿ ಬೀಸಿತಲೇ ಪರಾಕ್’; ಕಾರಣಿಕ ವಾಣಿ

.

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

/ 5. ಒಟ್ಟು ವೋಟುಗಳು

ನಿಮ್ಮ ಕಾಮೆಂಟ್ ಬರೆಯಿರಿ

advertisement