ರೈತನ ಮೇಲೆ ಆನೆ ದಾಳಿ: ಗಂಭೀರ ಗಾಯ

posted in: ರಾಜ್ಯ | 0

ಚಾಮರಾಜನಗರ : ಜಮೀನಿನಲ್ಲಿ ರೈತರೊಬ್ಬರ ಮೇಲೆ ಒಂಟಿ ಸಲಗ ದಾಳಿ ಮಾಡಿದ್ದು, ರೈತ ತೀವ್ರವಾಗಿ ಗಾಯಗೊಂಡ ಘಟನೆ ಬಂಡೀಪುರ ಅಭಯಾರಣ್ಯದ ಗುಂಡ್ಲುಪೇಟೆ ಬಫರ್ ಝೋನ್ ವ್ಯಾಪ್ತಿಯ ಬೆಟ್ಟದಮಾದಹಳ್ಳಿ ಗ್ರಾಮದಲ್ಲಿ ನಡೆದಿದೆ.
ಬೆಟ್ಟದಮಾದಹಳ್ಳಿ ಗ್ರಾಮದ ರೈತ ದೇವರಾಜಪ್ಪ ತಮ್ಮ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಒಂಟಿ ಸಲಗ ದಾಳಿ ಮಾಡಿದೆ. . ರೈತನ ಚೀರಾಟ ಮತ್ತು ಕೂಗಾಟ ಕೇಳಿ ಆಗಮಿಸಿದ ನೆರೆಹೊರೆ ಹೊಲಗಳ ರೈತರು ದೇವರಾಜ್‌ನನ್ನು ಕೂಡಲೇ ಆಸ್ಪತ್ರೆಗೆ ಕರೆದಯಕೊಂಡು ಹೋಗಿ ಚಿಕಿತ್ಸೆಗೆ ದಾಖಲಿಸಿದ್ದಾರೆ. ನಂತರ ಮೈಸೂರಿನ ಜೆಎಸ್‌ಎಸ್ ಆಸ್ಪತ್ರೆಗೆ ಒಯ್ಯಲಾಗಿದೆ.
ಆನೆಯು ಬೆಟ್ಟದಮಾದಹಳ್ಳಿ ವ್ಯಾಪ್ತಿಯ ರೈತರ ಜಮೀನಿನ ಬಾಳೆ ಸೇರಿದಂತೆ ಹಲವು ಬೆಳೆಗಳಿಗೆ ಆನೆ ಲಗ್ಗೆಯಿಟ್ಟಿದ್ದು, ಹಲವು ಜಮೀನುಗಳಲ್ಲಿ ಅಳವಡಿಕೆ ಮಾಡಿದ್ದ ತಂತಿ ಬೇಲಿಯನ್ನು ತುಳಿದು ಕಿತ್ತು ಹಾಕಿದೆ ಎನ್ನಲಾಗಿದೆ. ಒಂಟಿ ಸಲಗ ಬಾಳೆ ತೋಟದಲ್ಲಿ ಬೀಡು ಬಿಟ್ಟ ಕಾರಣ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದಾರೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

ಇಂದಿನ ಪ್ರಮುಖ ಸುದ್ದಿ :-   ಒಳಮೀಸಲು ವಿರೋಧಿಸಿ ಪ್ರತಿಭಟನೆ: ಶಿಕಾರಿಪುರದಲ್ಲಿ ಯಡಿಯೂರಪ್ಪ ಮನೆಯ ಮೇಲೆ ಕಲ್ಲು ತೂರಾಟ, ಲಾಠಿ ಚಾರ್ಜ್

0 / 5. ಒಟ್ಟು ವೋಟುಗಳು 0

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement