ಡೆತ್ ನೋಟ್ ಪ್ರಕರಣ: ಕಾನೂನು ಪ್ರಕಾರ ಕ್ರಮ-ಸಿಎಂ ಬೊಮ್ಮಾಯಿ

ಬೆಂಗಳೂರು: ಉದ್ಯಮಿ ಪ್ರದೀಪ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಪ್ರಕರಣದಲ್ಲಿ ಮಾಜಿ ಸಚಿವ ಅರವಿಂದ ಲಿಂಬಾವಳಿ ಸೇರಿದಂತೆ ಆರು ಜನರ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಪ್ರದೀಪ (47) ಡೆತ್ ನೋಟ್ ಬರೆದಿಟ್ಟು ಪ್ರದೀಪ ಅವರು ಬೆಂಗಳೂರು ದಕ್ಷಿಣದ ನೆಟ್ಟಿಗೆರೆ ಬಳಿ ಭಾನುವಾರ ಸಂಜೆ ತಲೆಗೆ ಗುಂಡು ಹಾರಿಸಿಕೊಂಡು ಕಾರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಪ್ರದೀಪ ಪತ್ನಿ ನೀಡಿದ ದೂರಿನ ಅನ್ವಯ ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಕಾನೂನು ಪ್ರಕಾರವೇ ತನಿಖೆ ನಡೆಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.
ಕಾನೂನು ಪ್ರಕಾರವೇ ತನಿಖೆ ನಡೆಯುವುದರಿಂದ ಸರ್ಕಾರ ಮಧ್ಯಪ್ರವೇಶ ಮಾಡುವ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು. ನಿಷ್ಪಕ್ಷಪಾತದ ತನಿಖೆ ನಡೆಯಲಿದ್ದು, ಇದರಲ್ಲಿ ಯಾರೇ ಇದ್ದರೂ ಕಾನೂನು ಪ್ರಕಾರ ಶಿಕ್ಷೆಯಾಗಲಿದೆ ಎಂದು ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೃತರ ಪತ್ನಿ ನೀಡಿದ ದೂರಿನನ್ವಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ದೇಶದ ಕಾನೂನು ಎಲ್ಲರಿಗೂ ಒಂದೇ. ನಿಷ್ಪಕ್ಷಪಾತದ ತನಿಖೆ ನಡೆಯಲಿದ್ದು, ಇದರಲ್ಲಿ ಯಾರೇ ಇದ್ದರೂ ಕಾನೂನು ಪ್ರಕಾರ ಶಿಕ್ಷೆಯಾಗಲಿದೆ ಎಂದು ಹೇಳಿದರು.

ಪ್ರಮುಖ ಸುದ್ದಿ :-   ಸುಳ್ಳು ಚುನಾವಣಾ ಅಫಿಡವಿಟ್‌ ಪ್ರಕರಣ : ಬಿಜೆಪಿ ಶಾಸಕ ಗರುಡಾಚಾರಗೆ ವಿಧಿಸಿದ್ದ ಜೈಲು ಶಿಕ್ಷೆ ರದ್ದುಮಾಡಿದ ಹೈಕೋರ್ಟ್

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement