ರಜೌರಿ: ಹಿಂದೂಗಳ ಮನೆಗಳಿಗೆ ನುಗ್ಗಿದ ಭಯೋತ್ಪಾದಕರು, ಗುರುತು ದೃಢಪಡಿಸಿಕೊಂಡು ನಾಲ್ವರನ್ನು ಗುಂಡಿಟ್ಟುಕೊಂದ ಉಗ್ರರು

ರಜೌರಿ: ಭಾನುವಾರ ಜಮ್ಮು ಮತ್ತು ಕಾಶ್ಮೀರದ ರಜೌರಿಯಲ್ಲಿ ನಿರ್ದಿಷ್ಟ ಸಮುದಾಯದ ಮನೆಗಳಿಗೆ ಬಂದೂಕುಧಾರಿ ಉಗ್ರರು ದಾಳಿ ಮಾಡಿದ ನಂತರ ನಾಲ್ವರು ನಾಗರಿಕರು ಸಾವಿಗೀಡಾಗಿದ್ದಾರೆ. ದಾಳಿಯಲ್ಲಿ ಇಬ್ಬರು ಉಗ್ರರು ಭಾಗಿಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಭಾನುವಾರ ರಾತ್ರಿ 7 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಇಬ್ಬರು ಉಗ್ರರು ಅರಣ್ಯದ ಮೂಲಕ ಸಾಗಿ ಹಿಂದೂ ಸಮುದಾಯದ ಮೂರು ಮನೆಗಳಿಗೆ ನುಗ್ಗಿದ್ದಾರೆ. ಮನೆಯೊಳಗಿದ್ದವರ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಭಯೋತ್ಪಾದಕರು ಮೊದಲು ಆಧಾರ್ ಕಾರ್ಡ್ ಮೂಲಕ ಜನರ ಗುರುತನ್ನು ದೃಢಪಡಿಸಿಕೊಂಡ ನಂತರ ಗುಂಡು ಹಾರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇದು ಕಳೆದ ಹಲವು ವರ್ಷಗಳಲ್ಲಿ ಶಾಂತಿಯುತವಾಗಿರುವ ಜಮ್ಮು ಪ್ರದೇಶದಲ್ಲಿ ನಡೆದ ಮೊದಲ ದಾಳಿಯಾಗಿದೆ ಮತ್ತು ಹೊಸ ವರ್ಷದ ಮೊದಲ ದಿನ ನಡೆದಿದೆ.
ದಾಳಿಯ ಕುರಿತು ಪ್ರತಿಕ್ರಿಯಿಸಿದ ಅಧಿಕಾರಿಯೊಬ್ಬರು, “10 ನಿಮಿಷಗಳಲ್ಲಿ ಗುಂಡಿನ ದಾಳಿ ಕೊನೆಗೊಂಡಿತು. ಮೊದಲು ಅವರು ಅಪ್ಪರ್ ಡ್ಯಾಂಗ್ರಿಯಲ್ಲಿನ ಮನೆಯೊಂದರ ಮೇಲೆ ದಾಳಿ ಮಾಡಿದರು ಮತ್ತು ನಂತರ ಅವರು 25 ಮೀಟರ್ ದೂರಕ್ಕೆ ತೆರಳಿ ಅಲ್ಲಿದ್ದ ಹಲವರಿಗೆ ಗುಂಡು ಹಾರಿಸಿದರು. ಅವರು ಹಳ್ಳಿಯಿಂದ ಓಡಿಹೋಗುವಾಗ 25 ಮೀಟರ್ ದೂರದಲ್ಲಿರುವ ಮತ್ತೊಂದು ಮನೆಯ ಮೇಲೂ ಗುಂಡು ಹಾರಿಸಿದ್ದಾರೆ. ಎಂದು ತಿಳಿಸಿದ್ದಾರೆ.
ಒಟ್ಟು 10 ಜನರಿಗೆ ಗುಂಡುಗಳು ತಗುಲಿದವು ಮತ್ತು ಅವರಲ್ಲಿ ಮೂವರು ರಾಜೌರಿಯ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಘೋಷಿಸಲಾಯಿತು. ತೀವ್ರವಾಗಿ ಗಾಯಗೊಂಡಿದ್ದ ಮತ್ತೊಬ್ಬ ನಾಗರಿಕನನ್ನು ವಿಮಾನದಲ್ಲಿ ಜಮ್ಮುವಿಗೆ ಸಾಗಿಸುವಾಗ ಸಾವಿಗೀಡಾದರು.
ಮೃತರನ್ನು ಸತೀಶಕುಮಾರ (45), ದೀಪಕಕುಮಾರ (23), ಪ್ರೀತಂ ಲಾಲ (57) ಮತ್ತು ಶಿಶುಪಾಲ (32) ಎಂದು ಗುರುತಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗಾಯಗೊಂಡವರನ್ನು ಪವನಕುಮಾರ (38), ರೋಹಿತ ಪಂಡಿತ (27), ಸರೋಜ ಬಾಲಾ (35), ರಿದಮ್ ಶರ್ಮಾ (17) ಮತ್ತು ಪವನ್ ಕುಮಾರ್ (32) ಎಂದು ಗುರುತಿಸಲಾಗಿದೆ.
ಭಾನುವಾರ ರಾತ್ರಿ 7 ಗಂಟೆ ಸುಮಾರಿಗೆ ಗುಂಡಿನ ಸದ್ದು ಕೇಳಿಬಂದಿದ್ದು, ಸ್ವಲ್ಪ ಸಮಯದ ನಂತರ ಅವುಗಳ ತೀವ್ರತೆ ಹೆಚ್ಚಾಯಿತು. ನಂತರ, ಭಯೋತ್ಪಾದಕರು ಗುಂಡಿನ ದಾಳಿ ನಡೆಸುತ್ತಿದ್ದಾರೆ ಎಂದು ನನಗೆ ಕರೆಗಳು ಬಂದವು ಎಂದು ಡ್ಯಾಂಗ್ರಿಯ ಸರಪಂಚ ಧೀರಜಕುಮಾರ ಹೇಳಿದ್ದಾರೆ.
ಜಮ್ಮು ವಲಯದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಮುಖೇಶ್ ಸಿಂಗ್, ರಾಜೌರಿ ಪಟ್ಟಣದಿಂದ ಸುಮಾರು ಎಂಟು ಕಿಲೋಮೀಟರ್ ದೂರದಲ್ಲಿರುವ ಅಪ್ಪರ್ ಡ್ಯಾಂಗ್ರಿ ಗ್ರಾಮದಲ್ಲಿ ದಾಳಿಯ ಹಿಂದಿರುವ ಇಬ್ಬರು ಶಸ್ತ್ರಸಜ್ಜಿತ ವ್ಯಕ್ತಿಗಳನ್ನು ಸೆರೆಹಿಡಿಯಲು ಸೇನೆ ಮತ್ತು ಸಿಆರ್‌ಪಿಎಫ್‌ನೊಂದಿಗೆ ಪೊಲೀಸರು ಬೃಹತ್ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ ಎಂದು ಹೇಳಿದರು.
ಇಂದು, ಸೋಮವಾರ ರಾಜೌರಿ ಜಿಲ್ಲೆಯಲ್ಲಿ ವ್ಯಾಪಾರಸ್ಥರ ಸಂಘಟನೆಗಳು ಸೇರಿದಂತೆ ಹಲವಾರು ಸಂಘಟನೆಗಳು ಸಾರ್ವತ್ರಿಕ ಮುಷ್ಕರಕ್ಕೆ ಕರೆ ನೀಡುವುದರೊಂದಿಗೆ ಪ್ರತಿಭಟನೆಗಳನ್ನು ನಡೆಸಲಾಯಿತು.
ಕಾನೂನು ಸುವ್ಯವಸ್ಥೆ ಕಾಪಾಡಲು ಮುನ್ನೆಚ್ಚರಿಕೆ ಕ್ರಮವಾಗಿ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚುವರಿ ಪಡೆಗಳನ್ನು ನಿಯೋಜನೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಜಿಎಂಸಿ ಆಸ್ಪತ್ರೆ ರಾಜೌರಿಯ ಹೊರಗೆ ಜಮಾಯಿಸಿದ ಜನರ ಗುಂಪು, ಅಮಾಯಕರ ಹತ್ಯೆಗಾಗಿ ಪಾಕಿಸ್ತಾನ ಮತ್ತು ಭಯೋತ್ಪಾದಕರ ವಿರುದ್ಧ ಘೋಷಣೆಗಳನ್ನು ಕೂಗಿದರು. ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದಕರ ಬೆದರಿಕೆಯನ್ನು ಪರಿಣಾಮಕಾರಿಯಾಗಿ ನಿಭಾಯಿಸದ ಲೆಫ್ಟಿನೆಂಟ್ ಗವರ್ನರ್ ಆಡಳಿತ ಮತ್ತು ಭದ್ರತಾ ಏಜೆನ್ಸಿಗಳ ವಿರುದ್ಧ ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗಿದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಸುಪ್ರೀಂ ಕೋರ್ಟ್ ತರಾಟೆ ನಂತರ ದೊಡ್ಡದಾಗಿ ಕ್ಷಮೆಯಾಚನೆ ಪ್ರಕಟಿಸಿದ ಪತಂಜಲಿ ಸಂಸ್ಥೆ

ಜಮ್ಮು ಮತ್ತು ಕಾಶ್ಮೀರದ ಪ್ರಮುಖ ರಾಜಕೀಯ ಪಕ್ಷಗಳು ಭಯೋತ್ಪಾದಕ ದಾಳಿಯನ್ನು ಖಂಡಿಸಿವೆ. ಕೇಂದ್ರಾಡಳಿತ ಪ್ರದೇಶದಿಂದ ಭಯೋತ್ಪಾದನೆ ನಿರ್ಮೂಲನೆಗೆ ಬಿಜೆಪಿ ಪಣ ತೊಟ್ಟಿದ್ದರೆ, ಭದ್ರತಾ ವಿಷಯದಲ್ಲಿ ಆಡಳಿತ ವಿಫಲವಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಆಡಳಿತ ಮೊದಲು ಕಾಶ್ಮೀರದಲ್ಲಿ ಮತ್ತು ಈಗ ಜಮ್ಮುವಿನಲ್ಲಿ ಅಲ್ಪಸಂಖ್ಯಾತ ಸಮುದಾಯವನ್ನು ರಕ್ಷಿಸಲು ವಿಫಲರಾಗಿದ್ದಾರೆ” ಎಂದು ಕಾಂಗ್ರೆಸ್ ವಕ್ತಾರರು ಆಡಳಿತವನ್ನು ಟೀಕಿಸಿದ್ದಾರೆ.
“ನಾನು ಈ ಹೇಯ ದಾಳಿಯನ್ನು ನಿಸ್ಸಂದಿಗ್ಧವಾಗಿ ಖಂಡಿಸುತ್ತೇನೆ ಮತ್ತು ಮೃತರ ಕುಟುಂಬಗಳಿಗೆ ನನ್ನ ಸಂತಾಪವನ್ನು ಸೂಚಿಸುತ್ತೇನೆ. ಈ ದಾಳಿಯಲ್ಲಿ ಗಾಯಗೊಂಡವರು ಶೀಘ್ರವಾಗಿ ಮತ್ತು ಸಂಪೂರ್ಣ ಚೇತರಿಸಿಕೊಳ್ಳುತ್ತಾರೆ ಎಂದು ನಾನು ಭಾವಿಸುತ್ತೇನೆ” ಎಂದು ಓಮರ್‌ ಅಬ್ದುಲ್ಲಾ ಹೇಳಿದರು.
ಜಮ್ಮು ಮತ್ತು ಕಾಶ್ಮೀರ ಕಾಂಗ್ರೆಸ್ ಮುಖ್ಯ ವಕ್ತಾರ ರವೀಂದರ್ ಶರ್ಮಾ, “ರಾಜೌರಿಯಲ್ಲಿ ಅಲ್ಪಸಂಖ್ಯಾತ ಸಮುದಾಯದ ಮೇಲೆ ಪಾಕಿಸ್ತಾನಿ ಬೆಂಬಲಿತ ಭಯೋತ್ಪಾದಕರು ನಡೆಸಿದ ಭಯೋತ್ಪಾದಕ ದಾಳಿಯನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ. ಇದು ಅವರ ವಿರುದ್ಧದ ಪಿತೂರಿಯಾಗಿದೆ ಎಂದು ಹೇಳಿದ್ದಾರೆ.
ಮೃತರ ಕುಟುಂಬಕ್ಕೆ ತಲಾ 50 ಲಕ್ಷ ಪರಿಹಾರ ಹಾಗೂ ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ನೀಡಬೇಕು ಎಂದು ಒತ್ತಾಯಿಸಿದರು.

ಪ್ರಮುಖ ಸುದ್ದಿ :-   ಮೈಸೂರು ಅನಂತಸ್ವಾಮಿ ಧಾಟಿಯಲ್ಲಿ ನಾಡಗೀತೆ : ರಾಜ್ಯ ಸರ್ಕಾರದ ಆದೇಶ ಎತ್ತಿ ಹಿಡಿದ ಹೈಕೋರ್ಟ್‌ ; ದಶಕಗಳ ಸಮಸ್ಯೆಗೆ ತೆರೆ

J&K ಬಿಜೆಪಿ ಅಧ್ಯಕ್ಷ ರವೀಂದರ್ ರೈನಾ ಅವರು ಘಟನೆಯನ್ನು ಖಂಡಿಸಿದರು ಮತ್ತು ಇದು ಪಾಕಿಸ್ತಾನಿ ಭಯೋತ್ಪಾದಕರ “ಸಂಪೂರ್ಣ ಹೇಡಿತನ” ಎಂದು ಕರೆದರು ಮತ್ತು ಅವರನ್ನು ಮತ್ತು ಅವರ ಬೆಂಬಲಿಗರನ್ನು ನಾಶಮಾಡುವುದಾಗಿ ವಾಗ್ದಾನ ಮಾಡಿದರು.
ಪಾಕಿಸ್ತಾನ ಮತ್ತು ಅದರ ಪ್ರಾಯೋಜಿತ ಭಯೋತ್ಪಾದಕರು ಈ ಘೋರ ಕೃತ್ಯಗಳನ್ನು ನಡೆಸುವ ಮೂಲಕ ತಮ್ಮ ಅಸ್ತಿತ್ವವನ್ನು ತೋರಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಅವರು ಹೇಳಿದರು.
ಡೆಮಾಕ್ರಟಿಕ್ ಆಜಾದ್ ಪಕ್ಷ ಕೂಡ ದಾಳಿಯನ್ನು ಖಂಡಿಸಿದೆ. ರಾಜೌರಿಯ ಧಂಗ್ರಿಯಲ್ಲಿ ನಡೆದ ಕ್ರೂರ ಭಯೋತ್ಪಾದಕ ದಾಳಿಯಲ್ಲಿ ಮೂವರು ನಾಗರಿಕರು ಸಾವನ್ನಪ್ಪಿದ ಭಯೋತ್ಪಾದಕ ದಾಳಿಯನ್ನು ನಾನು ಬಲವಾಗಿ ಖಂಡಿಸುತ್ತೇನೆ” ಎಂದು ಹೊಸದಾಗಿ ರಚನೆಯಾದ ಡಿಎಪಿ ಮುಖ್ಯಸ್ಥ ಗುಲಾಂ ನಬಿ ಆಜಾದ್ ಹೇಳಿದ್ದಾರೆ.

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement