ಹಾಡಹಗಲೇ ಕಾಲೇಜಿನಲ್ಲಿ ವಿದ್ಯಾರ್ಥಿನಿಗೆ ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ

ಬೆಂಗಳೂರು: ಹಾಡಹಗಲೇ ಕಾಲೇಜಿನ ಆವರಣದಲ್ಲೇ ವಿದ್ಯಾರ್ಥಿನಿಯೊಬ್ಬಳಿಗೆ ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಗರದ ರಾಜಾನುಕುಂಟೆ ಬಳಿ ಖಾಸಗಿ ಕಾಲೇಜಿನಲ್ಲಿ ನಡೆದಿದೆ. ನಂತರ ಕೊಲೆ ಮಾಡಿದ ವಿದ್ಯಾರ್ಥಿ ತಾನೂ ಇರಿದುಕೊಂಡಿದ್ದಾನೆ.
ಮೃತ ವಿದ್ಯಾರ್ಥಿಯನ್ನು 19 ವರ್ಷದ ಲಯಸ್ಮಿತಾ ಎಂದು ಗುರುತಿಸಲಾಗಿದ್ದು, ಪ್ರೆಸಿಡೆನ್ಸಿ ವಿಶ್ವವಿದ್ಯಾಲಯದಲ್ಲಿ ಬಿಟೆಕ್ (B Tech) ಮೊದಲ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದಳು ಎಂದು ಹೇಳಲಾಗಿದೆ. ಚಾಕುವಿನಿಂದ ಇರಿದು ಕೊಲೆ ಮಾಡಿದ ವಿದ್ಯಾರ್ಥಿಯನ್ನು ಪವನ ಕಲ್ಯಾಣ ಎಂದು ಗುರುತಿಸಲಾಗಿದೆ. ವಿದ್ಯಾರ್ಥಿನಿಯ ಹೊಟ್ಟೆ, ಎದೆ ಭಾಗ, ಕೈಗಳಿಗೆ ಚುಚ್ಚಿ ಕೊಲೆ ಮಾಡಿದ ವಿದ್ಯಾರ್ಥಿ ಪವನ ಕಲ್ಯಾಣ ನಂತರ ತಾನೂ ಇರಿದುಕೊಂಡಿದ್ದಾನೆ.
ಇಂದು, ಸೋಮವಾರ ಮಧ್ಯಾಹ್ನ 12ರ ಸುಮಾರಿಗೆ ಈ ಘಟನೆ ನಡೆದಿದೆ ಎಂದು ವರದಿಯಾಗಿದ್ದು, ತೀವ್ರ ರಕ್ತಸ್ರಾವದಿಂದ ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ. ತೀವ್ರವಾಗಿ ಗಾಯಗೊಂಡ ವಿದ್ಯಾರ್ಥಿನಿಯನ್ನು ತಕ್ಷಣವೇ ಆಸ್ಪತ್ರೆಗೆ ಒಯ್ಯಲಾಯಿತಾದರೂ ಅವಳು ತೀವ್ರರಕ್ತಸ್ರಾವದಿಂದ ಮೃತಪಟ್ಟಿದ್ದಾಳೆ. ಪವನ ಕಲ್ಯಾಣ ನೃಪತುಂಗ ಯೂನಿವರ್ಸಿಟಿಯ ಮೊದಲ ವರ್ಷದ ಬಿಸಿಎ ವಿದ್ಯಾರ್ಥಿ ಎನ್ನಲಾಗಿದೆ. ಇಬ್ಬರೂ ವಿದ್ಯಾರ್ಥಿಗಳು ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನವರು ಎಂದು ಹೇಳಲಾಗಿದೆ. ಘಟನೆಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಪ್ರೇಮದ ವಿಷಯ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಸ್ಥಳಕ್ಕೆ ರಾಜಾನುಕುಂಟೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನಾ ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಎಸ್​ಪಿ ಮಲ್ಲಿಕಾರ್ಜುನ ಬಾಲದಂಡಿ ಕೂಡ ಭೇಟಿ ನೀಡಿದ್ದಾರೆ.

ಪ್ರಮುಖ ಸುದ್ದಿ :-   ಧರ್ಮಸ್ಥಳ ಪ್ರಕರಣ; ಚಿನ್ನಯ್ಯ ನನಗೆ ಕರೆ ಮಾಡಿದ್ದ, ಆದರೆ ಎಸ್‌ಐಟಿ ಸಂಪರ್ಕಿಸಲು ಹೇಳಿದ್ದೆ- ನಟ ಪ್ರಕಾಶ್ ರಾಜ

 

3 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement