ಹಾಡಹಗಲೇ ಕಾಲೇಜಿನಲ್ಲಿ ವಿದ್ಯಾರ್ಥಿನಿಗೆ ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ

ಬೆಂಗಳೂರು: ಹಾಡಹಗಲೇ ಕಾಲೇಜಿನ ಆವರಣದಲ್ಲೇ ವಿದ್ಯಾರ್ಥಿನಿಯೊಬ್ಬಳಿಗೆ ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಗರದ ರಾಜಾನುಕುಂಟೆ ಬಳಿ ಖಾಸಗಿ ಕಾಲೇಜಿನಲ್ಲಿ ನಡೆದಿದೆ. ನಂತರ ಕೊಲೆ ಮಾಡಿದ ವಿದ್ಯಾರ್ಥಿ ತಾನೂ ಇರಿದುಕೊಂಡಿದ್ದಾನೆ. ಮೃತ ವಿದ್ಯಾರ್ಥಿಯನ್ನು 19 ವರ್ಷದ ಲಯಸ್ಮಿತಾ ಎಂದು ಗುರುತಿಸಲಾಗಿದ್ದು, ಪ್ರೆಸಿಡೆನ್ಸಿ ವಿಶ್ವವಿದ್ಯಾಲಯದಲ್ಲಿ ಬಿಟೆಕ್ (B Tech) ಮೊದಲ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದಳು ಎಂದು … Continued

ಹುಬ್ಬಳ್ಳಿ-ಧಾರವಾಡ ಮಹಾನಗರಕ್ಕೆ ರಮಣ ಗುಪ್ತಾ ನೂತನ ಪೊಲೀಸ್‌ ಕಮಿಶನರ್‌

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡದ ಪೊಲೀಸ್ ಆಯುಕ್ತರಾಗಿದ್ದ ಲಾಬೂರಾಮ್ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಲಾಬೂರಾಮ್ ಅವರನ್ನು ರಾಜ್ಯ ಗುಪ್ತ ವಾರ್ತೆಗೆ ವರ್ಗಾವಣೆ ಮಾಡಲಾಗಿದ್ದು, ಅವರ ಸ್ಥಾನಕ್ಕೆ ಬೆಳಗಾವಿ ಉತ್ತರ ವಲಯ ಐಜಿಪಿ ಆಗಿದ್ದ ರಮಣ ಗುಪ್ತಾ ಅವರು ನಿಯುಕ್ತಿ ಮಾಡಲಾಗಿದೆ. 2020 ಅಕ್ಟೋಬರ್ ತಿಂಗಳಲ್ಲಿ ಅಧಿಕಾರ ವಹಿಸಿಕೊಂಡಿದ್ದ ಲಾಬೂರಾಮ್ ಅವರು ಹುಬ್ಬಳ್ಳಿ-ಧಾರವಾಡ ಪೊಲೀಸ್‌ ಆಯುಕ್ತರಾಗಿ … Continued

ಈ 49 ಸ್ಮಾರ್ಟ್‌ಫೋನ್‌ಗಳಲ್ಲಿ ವಾಟ್ಸಾಪ್‌ ಸ್ಥಗಿತವಾಗಲಿದೆ : ಸ್ಮಾರ್ಟ್‌ಫೋನ್‌ಗಳ ಪಟ್ಟಿ ಇಲ್ಲಿದೆ…

ಮೆಟಾ-ಮಾಲೀಕತ್ವದ ಇನ್‌ಸ್ಟೆಂಟ್ ಮೆಸೇಜಿಂಗ್ ಪ್ಲಾಟ್‌ಫಾರ್ಮ್ ವಾಟ್ಸಾಪ್‌ (WhatsApp) ಜನವರಿ 1, 2023 ರಿಂದ ಆಪಲ್, ಸ್ಯಾಮ್‌ಸಂಗ್, ಹುವಾವೇ, ಎಲ್ಜಿ ಮತ್ತು ಇತರ ಹಳೆಯ ಸ್ಮಾರ್ಟ್‌ಫೋನ್‌ಗಳಲ್ಲಿ ಕಾರ್ಯನಿರ್ವಹಣೆ ಸ್ಥಗಿತಗೊಳಿಸಿದೆ. ಈ ಪಟ್ಟಿಯು ಹಳತಾದ ಆಪರೇಟಿಂಗ್ ಸಿಸ್ಟಮ್‌ಗಳಲ್ಲಿ ಕಾರ್ಯನಿರ್ವಹಿಸುವ 49 ಫೋನ್‌ಗಳನ್ನು ಒಳಗೊಂಡಿದೆ. ವಾಟ್ಸಾಪ್‌ (WhatsApp)ನ ಅಧಿಕೃತ ವೆಬ್‌ಸೈಟ್ ಪ್ರಕಾರ, ಓಎಸ್ ಆವೃತ್ತಿ 4.1 (OS version 4.1 … Continued

ನೋಟು ಅಮಾನ್ಯೀಕರಣದ ನಿರ್ಧಾರವನ್ನು 4:1 ಬಹುಮತದೊಂದಿಗೆ ಎತ್ತಿ ಹಿಡಿದ ಸುಪ್ರೀಂ ಕೋರ್ಟ್

ನವದೆಹಲಿ: 2016ರಲ್ಲಿ ಕೇಂದ್ರ ಸರ್ಕಾರ 500 ಮತ್ತು 1000 ರೂಪಾಯಿ ಮುಖಬೆಲೆಯ ನೋಟುಗಳನ್ನು ಅಮಾನ್ಯಗೊಳಿಸುವ ನಿರ್ಧಾರವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. ₹ 1,000 ಮತ್ತು ₹ 500 ರ ನೋಟುಗಳನ್ನು ಅಮಾನ್ಯಗೊಳಿಸುವ ಕೇಂದ್ರ ಸರ್ಕಾರದ 2016 ರ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳನ್ನು ಸುಪ್ರೀಂ ಕೋರ್ಟ್‌ನ ಐವರು ನ್ಯಾಯಾಧೀಶರ ಪೀಠ ಸೋಮವಾರ ವಜಾಗೊಳಿಸಿದೆ. ನ್ಯಾಯಮೂರ್ತಿಗಳಾದ … Continued

ಭಾರತದ ನಿರುದ್ಯೋಗ ದರ ಡಿಸೆಂಬರ್‌ನಲ್ಲಿ 16 ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ಹೆಚ್ಚಳ : ಶೇಕಡ 8.30ಕ್ಕೆ ಏರಿಕೆ

ನವದೆಹಲಿ: ಡಿಸೆಂಬರ್‌ನಲ್ಲಿ ಭಾರತದ ನಿರುದ್ಯೋಗ ದರವು 16 ತಿಂಗಳಲ್ಲೇ ಗರಿಷ್ಠ ಮಟ್ಟ 8.30%ಕ್ಕೆ ಏರಿದೆ. ನವೆಂಬರ್‌ ತಿಂಗಳಲ್ಲಿ ನಿರುದ್ಯೋಗ ದರವು 8%ರಷ್ಟು ಇತ್ತು ಎಂದು ಸೆಂಟರ್ ಫಾರ್ ಮಾನಿಟರಿಂಗ್ ಇಂಡಿಯನ್ ಎಕಾನಮಿ (CMIE)ಯ ದತ್ತಾಂಶವು ಜನವರಿ 1 ರಂದು ತೋರಿಸಿದೆ. ಸಿಎಂಐಇ(CMIE) ದತ್ತಾಂಶವು ನಗರ ನಿರುದ್ಯೋಗ ದರವು ಹಿಂದಿನ ತಿಂಗಳಿನ 8.96%ದಿಂದ ಡಿಸೆಂಬರ್‌ನಲ್ಲಿ 10.09 ಶೇಕಡಾಕ್ಕೆ … Continued

ರಜೌರಿ: ಹಿಂದೂಗಳ ಮನೆಗಳಿಗೆ ನುಗ್ಗಿದ ಭಯೋತ್ಪಾದಕರು, ಗುರುತು ದೃಢಪಡಿಸಿಕೊಂಡು ನಾಲ್ವರನ್ನು ಗುಂಡಿಟ್ಟುಕೊಂದ ಉಗ್ರರು

ರಜೌರಿ: ಭಾನುವಾರ ಜಮ್ಮು ಮತ್ತು ಕಾಶ್ಮೀರದ ರಜೌರಿಯಲ್ಲಿ ನಿರ್ದಿಷ್ಟ ಸಮುದಾಯದ ಮನೆಗಳಿಗೆ ಬಂದೂಕುಧಾರಿ ಉಗ್ರರು ದಾಳಿ ಮಾಡಿದ ನಂತರ ನಾಲ್ವರು ನಾಗರಿಕರು ಸಾವಿಗೀಡಾಗಿದ್ದಾರೆ. ದಾಳಿಯಲ್ಲಿ ಇಬ್ಬರು ಉಗ್ರರು ಭಾಗಿಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಭಾನುವಾರ ರಾತ್ರಿ 7 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಇಬ್ಬರು ಉಗ್ರರು ಅರಣ್ಯದ ಮೂಲಕ ಸಾಗಿ ಹಿಂದೂ ಸಮುದಾಯದ ಮೂರು … Continued

ಕಾಶ್ಮೀರದ: ರಾಜೌರಿಯ ಡ್ಯಾಂಗ್ರಿ ಗ್ರಾಮದಲ್ಲಿ ಗುಂಡಿನ ದಾಳಿ: ಮೂವರು ನಾಗರಿಕರು ಸಾವು, 7 ಜನರಿಗೆ ಗಾಯ

ಶ್ರೀನಗರ: ಭಾನುವಾರ ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯ ಡ್ಯಾಂಗ್ರಿ ಗ್ರಾಮದಲ್ಲಿ ಗುಂಡಿನ ದಾಳಿಯ ನಂತರ ಮೂವರು ನಾಗರಿಕರು ಸಾವಿಗೀಡಾಗಿದ್ದಾರೆ ಮತ್ತು ಏಳು ಮಂದಿ ಗಾಯಗೊಂಡರು. ಮೂಲಗಳ ಪ್ರಕಾರ, ಇಬ್ಬರು ಶಸ್ತ್ರಸಜ್ಜಿತ ವ್ಯಕ್ತಿಗಳು ಗುಂಡು ಹಾರಿಸಿದ್ದು ಸಾವು ನೋವುಗಳಿಗೆ ಕಾರಣವಾಯಿತು. ಈ ಮಧ್ಯೆ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮತ್ತು ಸೇನೆ ಶೋಧ ಕಾರ್ಯಾಚರಣೆ ಆರಂಭಿಸಿದೆ. … Continued