ವಿಧಾನಸಭೆ ಚುನಾವಣೆಗೆ ತಯಾರಿ: ಕೇಂದ್ರ ಚುನಾವಣಾಧಿಕಾರಿಗಳಿಂದ ಪೂರ್ವ ತಯಾರಿ ಪರಿವೀಕ್ಷಣೆ

posted in: ರಾಜ್ಯ | 0

ಬೆಂಗಳೂರು: ಮುಂಬರುವ ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ವತಿಯಿಂದ ಹಮ್ಮಿಕೊಳ್ಳಲಾಗಿರುವ ಪೂರ್ವತಯಾರಿ ಕಾರ್ಯಗಳನ್ನು ಭಾರತ ಚುನಾವಣಾ ಆಯೋಗದ ಉಪ ಚುನಾವಣಾ ಆಯುಕ್ತರಾದ ಅಜಯ್ ಭಾದೂ ಹಾಗೂ ಕಾರ್ಯದರ್ಶಿ ಬಿ.ಸಿ. ಪಾತ್ರ ಅವರು ಪರಿವೀಕ್ಷಣೆ ಮಾಡಿದರು.
2023ರ ರಾಜ್ಯ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಪೂರ್ವತಯಾರಿ ಕಾರ್ಯಗಳನ್ನು ಪರಿವೀಕ್ಷಿಸಲು ಎರಡು ದಿನಗಳ ಭೇಟಿಗೆ ಜನವರಿ 2 ರಂದು ರಾಜ್ಯಕ್ಕೆ ಆಗಮಿಸಿರುವ ಅವರು ಮೊದಲ ದಿನ ಮುಖ್ಯ ಚುನಾವಣಾಧಿಕಾರಿಗಳ ಕಚೇರಿಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
ಎರಡನೇ ದಿನ ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಅವರ ಸಂಬಂಧಿಸಿದ ಅಧಿಕಾರಿಗಳ ತಂಡಗಳ ಜೊತೆ ವರ್ಚ್ಯುಯಲ್ ಸಭೆ ನಡೆಸಿ ಮಾಹಿತಿ ಪಡೆದರು.
ಸಭೆಯಲ್ಲಿ ಮುಖ್ಯವಾಗಿ ಇದೇ ತಿಂಗಳು ಪ್ರಕಟವಾಗಲಿರುವ ಪರಿಷ್ಕೃತ ಅಂತಿಮ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಮುಖ್ಯವಾಗಿ ಅಂತಿಮ ಮತದಾರರ ಪಟ್ಟಿ ತಯಾರಿಕೆಯಲ್ಲಿ ಮೃತರ ಹೆಸರುಗಳನ್ನು ತೆಗೆದು ಹಾಕುವುದು, ವಿಳಾಸ ಬದಲಾದವರ ಹೆಸರುಗಳ ವರ್ಗಾವಣೆ ಮತ್ತು ಹೊಸ ಯುವ ಮತದಾರರ ಹೆಸರು ಸೇರ್ಪಡೆ ಕುರಿತು ಒತ್ತು ನೀಡುವಂತೆ ಹಾಗೂ ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಪಾಲಿಸುವಂತೆ ಜಿಲ್ಲಾಧಿಕಾರಿಗಳಿಗೆ ತಿಳಿಸಿದರು.
ಅಂತಿಮ ಮತದಾರರ ಪಟ್ಟಿಯಲ್ಲಿ ಮುಖ್ಯವಾಗಿ ಸಾರ್ವಜನಿಕರ ಮಾಹಿತಿ ಸರಿಯಾಗಿರಬೇಕು.ಇರುವವರ ಹೆಸರುಗಳನ್ನು ಕೈ ಬಿಡದಂತೆ ಜಾಗೃತಿವಹಿಸಬೇಕು, ಜಿಲ್ಲಾ ಚುನಾವಣಾಧಿಕಾರಿಗಳು ತಮ್ಮ ವ್ಯಾಪ್ತಿಯ ಜಿಲ್ಲೆಗಳಲ್ಲಿ ಖುದ್ದು ಭೇಟಿ ನೀಡಿ ಪರಿಶೀಲಿಸಬೇಕು ಎಂದು ಹೇಳಿದರು.
ಅಂತಿಮ ಮತದಾರರ ಪಟ್ಟಿಯ ತಯಾರಿಯಲ್ಲಿ ತಮ್ಮ ಜಿಲ್ಲಾ ವ್ಯಾಪ್ತಿಗಳ ವಿಧಾನಸಭಾ ಕ್ಷೇತ್ರಗಳಲ್ಲಿ ಅತ್ಯಂತ ಕಡಿಮೆ ಸೇರ್ಪಡೆಗೊಂಡಿರುವ (Addition) ಮತ್ತು ತೆಗೆದುಹಾಕಿರುವ (Deletion) 10 ಮತಕೇಂದ್ರಗಳನ್ನು ಗುರುತಿಸಿ ಅವುಗಳಿಗೆ ಸಕಾರಾಣಗಳನ್ನು ಗುರುತಿಸಿ ಸರಿಮಾಡುವಂತೆ ಸೂಚಿಸಿದರು. ಕಳೆದ ಚುನಾವಣೆಯಲ್ಲಿ ಅತ್ಯಂತ ಕಡಿಮೆ ಮತದಾನವಾಗಿರುವ ವಿಧಾನಸಭಾ ಕ್ಷೇತ್ರಗಳಲ್ಲಿ ಈ ಬಾರಿ ಶೇಕಡಾವಾರು ಮತದಾನವನ್ನು ಹೆಚ್ಚಿಸಲು ಸೂಕ್ತ ಕ್ರಮಕೈಗೊಳ್ಳುವ ಕುರಿತು ಸಲಹೆ ನೀಡಿದರು.
ಈ ಎರಡು ದಿನಗಳ ಸಭೆಯಲ್ಲಿ ಮುಖ್ಯ ಚುನಾವಣಾಧಿಕಾರಿ ಮನೋಜಕುಮಾರ ಮೀನಾ, ಅಪರ ಮುಖ್ಯ ಚುನಾವಣಾಧಿಕಾರಿಗಳಾದ ವೆಂಕಟೇಶಕುಮಾರ, ಪಿ. ರಾಜೇಂದ್ರ ಚೋಳನ್ ಸೇರಿದಂತೆ ಹಿರಿಯ ಅಧಿಕಾರಿಗಳು ಇದ್ದರು.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಇಂದಿನ ಪ್ರಮುಖ ಸುದ್ದಿ :-   ಕಡಬ: ದೈವ ನರ್ತನ ಮಾಡುತ್ತಿರುವಾಗಲೇ ಕುಸಿದು ಬಿದ್ದು ಮೃತಪಟ್ಟ ದೈವನರ್ತಕ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

5 / 5. ಒಟ್ಟು ವೋಟುಗಳು 2

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement