ಈ ತಿಂಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ‌ ಮೊದಲ ಪಟ್ಟಿ ಬಿಡುಗಡೆ: ಸಿದ್ದರಾಮಯ್ಯ

ಹೊಸಪೇಟೆ : ಮುಂಬರುವ ಕರ್ನಾಟಕದ ವಿಧಾನಸಭಾ ಚುನಾವಣೆಗೆ ಈ ತಿಂಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಗೊಳಿಸುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ’ ಎಂದು ರಾಜ್ಯ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದರು.
ಮಂಗಳವಾರ ಶಾಸಕ ಭೀಮ ನಾಯ್ಕ ಏರ್ಪಡಿಸಿರುವ ಸಾರ್ಥಕ ನಮನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಹಗರಿಬೊಮ್ಮನಹಳ್ಳಿ ಹೊರವಲಯದ ಹೆಲಿಪ್ಯಾಡ್ ಗೆ ಬಂದಿಳಿದ ಅವರು ಮಾಧ್ಯಮದವರೊಂದಿಗೆ ಮಾತನಾಡಿದ ಅವರು,ರಾಜ್ಯದಲ್ಲಿಕಾಂಗ್ರೆಸ್ ಪಕ್ಷದ ಪರ ಅಲೆ ಇರುವುದರಿಂದಲೇ ಈ ಸಲ‌ ಚುನಾವಣೆಗೆ ಎಲ್ಲ ಕ್ಷೇತ್ರಗಳಲ್ಲಿ ಟಿಕೆಟ್ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗಿದೆ ಎಂದು ಹೇಳಿದರು.
ಯಾರೇ ಹೊಸ ಪಕ್ಷ ಸ್ಥಾಪಿಸಲಿ ಅಥವಾ ಇನ್ನೇನಾದರೂ ಅವರು ಹೇಳಿಕೊಳ್ಳಲಿ, ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸ್ವಂತ ಬಲದ ಮೇಲೆ ನೂರಕ್ಕೆ ನೂರರಷ್ಟು ಅಧಿಕಾರಕ್ಕೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಈ ಹಿಂದೆ ರಾಜ್ಯದಲ್ಲಿ ಹಲವರು ಪಕ್ಷ ಕಟ್ಟಿದ್ದರು. ಏನಾಗಿದೆ ಎನ್ನುವುದು ಎಲ್ಲರಿಗೂ ಅದರ ಇತಿಹಾಸ ಗೊತ್ತಿದೆ. ನಾನು ಪಕ್ಷ ಕಟ್ಟಿದವರ ಬಗ್ಗೆ ಲಘುವಾಗಿ ಮಾತನಾಡುತ್ತಿದ್ದೇನೆ ಎಂದು ಹೇಳಿಕೆ ಅರ್ಥವಲ್ಲ, ಪ್ರಜಾಪ್ರಭುತ್ವದಲ್ಲಿ ಅಂತಿಮವಾಗಿ ಮತದಾರರು ನಿರ್ಧಾರ ತೆಗೆದುಕೊಳ್ಳುವವರು ಎಂದು ಹೇಳಿದರು.

ಪ್ರಮುಖ ಸುದ್ದಿ :-   ಸುಳ್ಳು ಚುನಾವಣಾ ಅಫಿಡವಿಟ್‌ ಪ್ರಕರಣ : ಬಿಜೆಪಿ ಶಾಸಕ ಗರುಡಾಚಾರಗೆ ವಿಧಿಸಿದ್ದ ಜೈಲು ಶಿಕ್ಷೆ ರದ್ದುಮಾಡಿದ ಹೈಕೋರ್ಟ್

3 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement