ಜನವರಿ 31ರಂದು ಸಂಸತ್ ಅಧಿವೇಶನ ಆರಂಭ ; ಫೆಬ್ರವರಿ1ಕ್ಕೆ ಕೇಂದ್ರ ಬಜೆಟ್ ಮಂಡನೆ-ವರದಿ

ನವದೆಹಲಿ: ವರದಿಯ ಪ್ರಕಾರ, ಸಂಸತ್ತಿನ ಬಜೆಟ್ ಅಧಿವೇಶನವು ಜನವರಿ 31ರಿಂದ ಪ್ರಾರಂಭವಾಗಿ ಏಪ್ರಿಲ್ 6 ರಂದು ಮುಕ್ತಾಯವಾಗುವ ಸಾಧ್ಯತೆಯಿದೆ. ಈ ಬಗ್ಗೆ ಸರ್ಕಾರ ಶೀಘ್ರದಲ್ಲೇ ಅಧಿಕೃತ ಪ್ರಕಟಣೆ ನೀಡುವ ನಿರೀಕ್ಷೆ ಇದೆ.
ಕೇಂದ್ರ ಬಜೆಟ್ 2023-24 ಅನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಫೆಬ್ರವರಿ 1 ರಂದು ಸಂಸತ್ತಿನಲ್ಲಿ ಮಂಡಿಸಲಿದ್ದು, ಬಜೆಟ್ ಅಧಿವೇಶನದ ಮೊದಲ ಭಾಗವು ಫೆಬ್ರವರಿ 10, 2023 ರವರೆಗೆ ಮುಂದುವರಿಯುವ ನಿರೀಕ್ಷೆಯಿದೆ.
ವರದಿಯ ಪ್ರಕಾರ, ಬಜೆಟ್ ಅಧಿವೇಶನದ ಮೊದಲ ದಿನದಂದು ಸಂಸತ್ತಿನ ಉಭಯ ಸದನಗಳಲ್ಲಿ ಆರ್ಥಿಕ ಸಮೀಕ್ಷೆಯನ್ನು ಸಹ ಮಂಡಿಸುವುದನ್ನು ನಿರೀಕ್ಷಿಸಲಾಗಿದೆ. ಇದರ ಜೊತೆಗೆ ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಭಾಷಣದೊಂದಿಗೆ ಅಧಿವೇಶನ ಪ್ರಾರಂಭವಾಗಬಹುದು.
ವರದಿಯ ಪ್ರಕಾರ, ಅಧಿವೇಶನದ ಎರಡನೇ ಭಾಗವು ಮಾರ್ಚ್ 6 ರಂದು ಪ್ರಾರಂಭವಾಗಿ ಏಪ್ರಿಲ್ 6, ರಂದು ಕೊನೆಗೊಳ್ಳುವ ಸಾಧ್ಯತೆಯಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement