ರಾಷ್ಟ್ರೀಯ ಹಸಿರು ಹೈಡ್ರೋಜನ್ ಮಿಷನ್‌ಗೆ ₹19,744 ಕೋಟಿ ನೀಡಲು ಕೇಂದ್ರ ಸಚಿವ ಸಂಪುಟ ಅನುಮೋದನೆ

ನವದೆಹಲಿ: ರಾಷ್ಟ್ರೀಯ ಹಸಿರು ಹೈಡ್ರೋಜನ್ ಮಿಷನ್ ಅನುಷ್ಠಾನಕ್ಕೆ ₹19,744 ಕೋಟಿ ವೆಚ್ಚಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಬುಧವಾರ ತಿಳಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟವು ರಾಷ್ಟ್ರೀಯ ಹಸಿರು ಹೈಡ್ರೋಜನ್ ಮಿಷನ್ ಅನ್ನು ಅನುಮೋದಿಸಿದೆ” ಎಂದು … Continued

ಯೋಗಿ ಸರ್ಕಾರಕ್ಕೆ ದೊಡ್ಡ ರಿಲೀಫ್: ಒಬಿಸಿ ಮೀಸಲು ಇಲ್ಲದೆ ಉತ್ತರ ಪ್ರದೇಶ ಸ್ಥಳೀಯ ಸಂಸ್ಥೆ ಚುನಾವಣೆಗೆ ಅವಕಾಶ ನೀಡಿದ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್‌ ತಡೆಯಾಜ್ಞೆ

ನವದೆಹಲಿ: ಇತರೆ ಹಿಂದುಳಿದ ವರ್ಗಗಳಿಗೆ (ಒಬಿಸಿ) ಮೀಸಲಾತಿ ಇಲ್ಲದೆ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಸೂಚಿಸಿದ್ದ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ಬುಧವಾರ ತಡೆ ನೀಡಿದೆ. ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಉತ್ತರ ಪ್ರದೇಶ ಸರ್ಕಾರದ ಮನವಿಯ ಮೇಲೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿತು ಮತ್ತು ಪ್ರತಿಕ್ರಿಯೆ ಸಲ್ಲಿಸಲು … Continued

ಸಿಸಿಐ ವಿಧಿಸಿದ್ದ ₹1,337 ಕೋಟಿ ದಂಡದಲ್ಲಿ ಶೇ.10ರಷ್ಟು ಠೇವಣಿ ಇರಿಸಲು ಗೂಗಲ್‌ಗೆ ಸೂಚಿಸಿದ ಎನ್‌ಸಿಎಲ್‌ಎಟಿ

ನವದೆಹಲಿ: ಭಾರತೀಯ ಸ್ಪರ್ಧಾ ಆಯೋಗವು ತನ್ನ ಮೇಲೆ ವಿಧಿಸಿದ್ದ ₹ 1,337 ಕೋಟಿ ದಂಡದ ಆದೇಶದ ವಿರುದ್ಧ ಗೂಗಲ್‌ ಸಲ್ಲಿಸಿರುವ ಮನವಿ ಆಲಿಸುವ ಮುನ್ನ ದಂಡದ ಮೊತ್ತದ ಶೇ.10ರಷ್ಟು ಹಣ ಠೇವಣಿ ಇರಿಸುವಂತೆ ರಾಷ್ಟ್ರೀಯ ಕಂಪನಿ ಕಾನೂನು ಮೇಲ್ಮನವಿ ನ್ಯಾಯಮಂಡಳಿಯು ಗೂಗಲ್‌ಗೆ ಬುಧವಾರ ಆದೇಶಿಸಿದೆ. ಆಂಡ್ರಾಯ್ಡ್‌ ಮೊಬೈಲ್‌ ಮಾರುಕಟ್ಟೆಯಲ್ಲಿ ತನ್ನ ಪ್ರಭಾವಿ ಸ್ಥಾನವನ್ನು ದುರುಪಯೋಗಪಡಿಸಿಕೊಂಡ ಕಾರಣಕ್ಕಾಗಿ … Continued

ಸೋನಿಯಾ ಗಾಂಧಿ ದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ದಾಖಲು

ನವದೆಹಲಿ: ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ದೆಹಲಿಯ ಸರ್ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂಲಗಳ ಪ್ರಕಾರ ಆಕೆಯ ಪುತ್ರಿ ಪ್ರಿಯಾಂಕಾ ವಾದ್ರಾ ಆಕೆಯೊಂದಿಗೆ ಆಸ್ಪತ್ರೆಗೆ ತೆರಳಿದ್ದಾರೆ. ಸರ್ ಗಂಗಾ ರಾಮ್ ಆಸ್ಪತ್ರೆಯ ಅಧ್ಯಕ್ಷ (ನಿರ್ವಹಣಾ ಮಂಡಳಿ) ಡಾ. ಅಜಯ್ ಸ್ವರೂಪ್ ಪ್ರಕಾರ, ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಇಂದು, ಬುಧವಾರ ಆಸ್ಪತ್ರೆಗೆ ದಾಖಲಾಗಿದ್ದಾರೆ. … Continued

ಮಹಿಳೆಯ ಮೇಲೆ ಮೂತ್ರ ವಿಸರ್ಜನೆ ಮಾಡಿದ ಏರ್ ಇಂಡಿಯಾ ಪ್ರಯಾಣಿಕನಿಗೆ 30 ದಿನಗಳ ನಿಷೇಧ ಹೇರಿದ ಏರ್‌ಲೈನ್ಸ್

ನವದೆಹಲಿ: ನವೆಂಬರ್‌ನಲ್ಲಿ ಏರ್ ಇಂಡಿಯಾ ವಿಮಾನದ ಬ್ಯುಸಿನೆಸ್ ಕ್ಲಾಸ್‌ನಲ್ಲಿ ಕುಡಿದ ಮತ್ತಿನಲ್ಲಿ ಮಹಿಳೆಯೊಬ್ಬರ ಮೇಲೆ ಮೂತ್ರ ವಿಸರ್ಜಿಸಿ ವ್ಯಕ್ತಿಯನ್ನು 30 ದಿನಗಳ ಕಾಲ ವಿಮಾನಯಾನ ಸಂಸ್ಥೆಯಿಂದ ನಿಷೇಧಿಸಲಾಗಿದೆ ಎಂದು ಕಂಪನಿ ಬುಧವಾರ ತಿಳಿಸಿದೆ. ಘಟನೆ ನಡೆದು ವಾರದ ನಂತರ, ಏರ್ ಇಂಡಿಯಾ ಕೂಡ ಪ್ರಕರಣವನ್ನು ದಾಖಲಿಸಿದೆ ಮತ್ತು ಅಶಿಸ್ತಿನ ಪ್ರಯಾಣಿಕನನ್ನು ನೊ-ಫ್ಲೈ ಲಿಸ್ಟ್‌ಗೆ ಸೇರಿಸಲು ಶಿಫಾರಸು … Continued

ಬೆಂಗಳೂರು: ರೈಲ್ವೇ ಸ್ಟೇಷನ್‌ ಪ್ಲಾಸ್ಟಿಕ್‌ ಡ್ರಮ್‌ನಲ್ಲಿ ಯುವತಿಯ ಶವ ಪತ್ತೆ

ಬೆಂಗಳೂರು : ಯಶವಂತಪುರ ರೈಲ್ವೇ ನಿಲ್ದಾಣದಲ್ಲಿ ಪ್ಲಾಸ್ಟಿಕ್‌ ಡ್ರಮ್‌ ಒಂದರಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿದೆ. ದುರ್ವಾಸನೆ ಬರುತ್ತಿದ್ದ ಹಿನ್ನೆಲೆಯಲ್ಲಿ ಸ್ವಚ್ಛತಾ ಕೆಲಸ ಮಾಡುವ ಸಿಬ್ಬಂದಿ ಪೊಲೀಸರಿಗೆ ದೂರು ನೀಡಿದ ನಂತರ ಡ್ರಮ್‌ ಪರಿಶೀಲನೆ ಮಾಡಿದ ವೇಳೆ ಕೊಳೆತ ಸ್ಥಿತಿಯಲ್ಲಿರುವ ಯುವತಿ ದೇಹ ಪತ್ತೆಯಾಗಿದೆ. ಯಶವಂತಪುರ ರೈಲ್ವೇ ನಿಲ್ದಾಣದ ಗೂಡ್ಸ್ ಪ್ಲಾಟ್ ಫಾರ್ಮ್ … Continued

ಓಲಾ, ಉಬರ್‌ ಆಟೋ ಸೇವೆಗೆ ಶೇ.5 ಸೇವಾ ಶುಲ್ಕ ಸೇರಿಸಿ ಪ್ರಯಾಣ ದರ ನಿಗದಿ: ಸರ್ಕಾರದ ಆದೇಶಕ್ಕೆ ಹೈಕೋರ್ಟ್‌ ತಡೆ

ಬೆಂಗಳೂರು: ಪರವಾನಗಿ ಹೊಂದಿರುವ ಓಲಾ, ಉಬರ್‌ ಸಂಸ್ಥೆಗಳಿಗೆ ರಾಜ್ಯದ ಎಲ್ಲ ಪ್ರಾದೇಶಿಕ ಸಾರಿಗೆ ಪ್ರಾಧಿಕಾರಗಳು ನಿಗದಿಪಡಿಸಿರುವ ಆಟೋರಿಕ್ಷಾ ಪ್ರಯಾಣ ದರಗಳ ಮೇಲೆ ಶೇ.5 ಸೇವಾ ಶುಲ್ಕ ಹಾಗೂ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಸೇರಿಸಿ ಅಂತಿಮ ಪ್ರಯಾಣ ದರ ನಿಗದಿಪಡಿಸಲು ನಿರ್ದೇಶಿಸಿ ರಾಜ್ಯ ಸರ್ಕಾರ 2022ರ ನವೆಂಬರ್‌ 25ರಂದು ಹೊರಡಿಸಿದ್ದ ಅಧಿಸೂಚನೆಗೆ ಕರ್ನಾಟಕ ಹೈಕೋರ್ಟ್‌ … Continued

ರಾಜಕೀಯ ನಿವೃತ್ತಿ ಬಗ್ಗೆ ಮಾತನಾಡಿದ ಮಾಜಿ ಸಿಎಂ ಎಸ್‌.ಎಂ.ಕೃಷ್ಣ

ಬೆಂಗಳೂರು ; ಕರ್ನಾಟಕದ ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕ ಎಸ್. ಎಂ. ಕೃಷ್ಣ ರಾಜಕೀಯ ನಿವೃತ್ತಿಯಾಗುವುದಾಗಿ ಹೇಳಿದ್ದಾರೆ. ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆಗೆ ಕೆಲವೇ ದಿನಗಳು ಇರುವಾಗ ಅವರು ರಾಜಕೀಯ ನಿವೃತ್ತಿಯಾಗುವ ಮಾತನ್ನಾಡಿದ್ದಾರೆ. ಬುಧವಾರ ಎಸ್. ಎಂ. ಕೃಷ್ಣ ಹೊಸ ವರ್ಷದ ಶುಭಾಶಯಗಳನ್ನು ಕೋರಿದ್ದಾರೆ. ಅದರ ಜೊತೆಗೆ ಸಕ್ರಿಯ ರಾಜಕಾರಣದಿಂದ ನಿವೃತ್ತಿಯಾಗುವ ಇಂಗಿತವವನ್ನೂ ವ್ಯಕ್ತಪಡಿಸಿದ್ದಾರೆ. ನಮ್ಮ ವಯಸ್ಸಿನ … Continued

ಉತ್ತರ ಕನ್ನಡ ಜಿಲ್ಲೆಯ 12 ತಾಪಂಗಳ ಕ್ಷೇತ್ರ ಮರುವಿಂಗಡಣೆಯಲ್ಲಿ ಒಟ್ಟು121 ತಾಪಂ ಕ್ಷೇತ್ರಗಳ ರಚನೆ

ಕಾರವಾರ: ಜಿಲ್ಲೆಯ ಹನ್ನೆರಡು ತಾಲೂಕುಗಳ ತಾಲೂಕು ಪಂಚಾಯತ ಕ್ಷೇತ್ರಗಳ ಮರುವಿಂಗಡೆ ಮಾಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಒಟ್ಟು 12 ತಾಲೂಕುಗಳಲ್ಲಿ ಒಟ್ಟು 121 ಕ್ಷೇತ್ರಗಳನ್ನು ವಿಂಗಡಣೆ ಮಾಡಲಾಗಿದೆ. ರಾಜ್ಯ ಸರ್ಕಾರದ ಕರ್ನಾಟಕ ಪಂಚಾಯತ್‌ ರಾಜ್‌ ಸೀಮಾ ನಿರ್ಣಯ ಆಯೋಗವು ಈ ಬಗ್ಗೆ ರಾಜ್ಯಪತ್ರ ಪ್ರಕಟಿಸಿದೆ. ಉತ್ತರ ಕನ್ನಡ ತಾಲೂಕು ಪಂಚಾಯತ ಚುನಾಯಿತ ಸದಸ್ಯರ ಸಂಖ್ಯೆ ಹಾಗೂ … Continued

ಉತ್ತರ ಕನ್ನಡ ಜಿಲ್ಲೆ ಜಿಪಂ ಕ್ಷೇತ್ರಗಳ ಮರುವಿಂಗಡಣೆ : ಹೆಚ್ಚುವರಿ 15 ಕ್ಷೇತ್ರಗಳ ರಚನೆ, ಆಕ್ಷೇಪಣೆಗೆ ಅವಕಾಶ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ 39 ಜಿಲ್ಲಾ ಪಂಚಾಯತ ಕ್ಷೇತ್ರಗಳ ಮರುವಿಂಗಡಣೆಯಲ್ಲಿ 15 ಹೆಚ್ಚುವರಿ ಕ್ಷೇತ್ರಗಳನ್ನು ರಚನೆ ಮಾಡಿ ಒಟ್ಟು ಕ್ಷೇತ್ರಗಳನ್ನು 54ಕ್ಕೆ ಏರಿಸಿ ರಾಜ್ಯ ಸರ್ಕಾರದ ಕರ್ನಾಟಕ ಪಂಚಾಯತ್‌ ಸೀಮಾ ನಿರ್ಣಯ ಆಯೋಗವು ರಾಜ್ಯಪತ್ರ ಹೊರಡಿಸಿದೆ. ಜೊಯಿಡಾ ತಾಲೂಕಿನಲ್ಲಿ ರಾಮನಗರ, ಜಗಲಬೇಟ ಹಾಗೂ ಜೋಯಿಡಾ ಸೇರಿ ಮೂರು ಜಿಲ್ಲಾ ಪಂಚಾಯತ ಕ್ಷೇತ್ರವನ್ನು ರಚನೆ ಮಾಡಲಾಗಿದೆ. … Continued