ಬೆಂಗಳೂರು: ರೈಲ್ವೇ ಸ್ಟೇಷನ್‌ ಪ್ಲಾಸ್ಟಿಕ್‌ ಡ್ರಮ್‌ನಲ್ಲಿ ಯುವತಿಯ ಶವ ಪತ್ತೆ

posted in: ರಾಜ್ಯ | 0

ಬೆಂಗಳೂರು : ಯಶವಂತಪುರ ರೈಲ್ವೇ ನಿಲ್ದಾಣದಲ್ಲಿ ಪ್ಲಾಸ್ಟಿಕ್‌ ಡ್ರಮ್‌ ಒಂದರಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿದೆ. ದುರ್ವಾಸನೆ ಬರುತ್ತಿದ್ದ ಹಿನ್ನೆಲೆಯಲ್ಲಿ ಸ್ವಚ್ಛತಾ ಕೆಲಸ ಮಾಡುವ ಸಿಬ್ಬಂದಿ ಪೊಲೀಸರಿಗೆ ದೂರು ನೀಡಿದ ನಂತರ ಡ್ರಮ್‌ ಪರಿಶೀಲನೆ ಮಾಡಿದ ವೇಳೆ ಕೊಳೆತ ಸ್ಥಿತಿಯಲ್ಲಿರುವ ಯುವತಿ ದೇಹ ಪತ್ತೆಯಾಗಿದೆ.
ಯಶವಂತಪುರ ರೈಲ್ವೇ ನಿಲ್ದಾಣದ ಗೂಡ್ಸ್ ಪ್ಲಾಟ್ ಫಾರ್ಮ್ ನ ಬಾಕ್ಸ್ ಒಂದರಲ್ಲಿ ಶವ ಪತ್ತೆಯಾಗಿದ್ದು, ಅಂದಾಜು 20ರಿಂದ 25 ವರ್ಷದ ಯುವತಿ ಇರಬಹುದು ಎಂದು ಅಂದಜಿಸಲಾಗಿದೆ. ಆರೋಪಿಗಳು ಸಾಕ್ಷ್ಯ ನಾಶಪಡಿಸುವ ಉದ್ದೇಶದಿಂದ ಯುವತಿಯನ್ನು ಕೊಲೆ ಮಾಡಿ ಪ್ಲಾಸ್ಟಿಕ್ ಕವರ್ ಒಂದರಲ್ಲಿ ಸೀಲ್ ಮಾಡಿಟ್ಟಿದ್ದರು. ಇಂದು, ಬುಧವಾರ ಅದರಿಂದ ವಾಸನೆ ಬಂದ ನಂತರ ರೈಲ್ವೇ ಪೊಲೀಸರು ತೆಗೆದು ನೋಡಿದಾಗ ಮೃತದೇಹ ಪತ್ತೆಯಾಗಿದೆ.
ರೈಲು ನಿಲ್ದಾಣದಲ್ಲಿ ಸ್ವಚ್ಛತಾ ಕೆಲಸ ಮಾಡುವ ಸಿಬ್ಬಂದಿ ಪ್ಲಾಸ್ಟಿಕ್ ಡ್ರಮ್ ನಲ್ಲಿ ಶವದ ವಾಸನೆ ಬರುತ್ತಿದ್ದನ್ನ ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ನಂತರ ಪೊಲೀಸರು ಡ್ರಮ್ ಪರಿಶೀಲನೆ ನಡೆಸಿದಾಗ ಶವ ಪತ್ತೆಯಾಗಿದೆ. ಶವದ ಕುತ್ತಿಗೆಯಲ್ಲಿ ಬಿಳಿ ಬಣ್ಣದ ದುಪ್ಪಟ್ಟದಿಂದ ಗಂಟು ಬಿಗಿದಿರುವುದು ಪತ್ತೆಯಾಗಿದೆ. ಡ್ರಮ್ ಅನ್ನು ಬಟ್ಟೆಯಿಂದ ಮುಚ್ಚಲಾಗಿತ್ತು ಮತ್ತು ಅದರ ಮುಚ್ಚಳವು ಮೇಲಿತ್ತು. ಸುಳಿವಿಗಾಗಿ ವಿಧಿವಿಜ್ಞಾನ ತಜ್ಞರು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಸದ್ಯ ಪ್ರಕರಣ ದಾಖಲಿಸಿಕೊಂಡ ರೈಲ್ವೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಇಂದಿನ ಪ್ರಮುಖ ಸುದ್ದಿ :-   ಸೈದಾಪುರ; ಅಗ್ನಿ ದುರಂತ, ದಂಪತಿ ಸಜೀವ ದಹನ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

4 / 5. ಒಟ್ಟು ವೋಟುಗಳು 1

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement