ಓಲಾ, ಉಬರ್‌ ಆಟೋ ಸೇವೆಗೆ ಶೇ.5 ಸೇವಾ ಶುಲ್ಕ ಸೇರಿಸಿ ಪ್ರಯಾಣ ದರ ನಿಗದಿ: ಸರ್ಕಾರದ ಆದೇಶಕ್ಕೆ ಹೈಕೋರ್ಟ್‌ ತಡೆ

ಬೆಂಗಳೂರು: ಪರವಾನಗಿ ಹೊಂದಿರುವ ಓಲಾ, ಉಬರ್‌ ಸಂಸ್ಥೆಗಳಿಗೆ ರಾಜ್ಯದ ಎಲ್ಲ ಪ್ರಾದೇಶಿಕ ಸಾರಿಗೆ ಪ್ರಾಧಿಕಾರಗಳು ನಿಗದಿಪಡಿಸಿರುವ ಆಟೋರಿಕ್ಷಾ ಪ್ರಯಾಣ ದರಗಳ ಮೇಲೆ ಶೇ.5 ಸೇವಾ ಶುಲ್ಕ ಹಾಗೂ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಸೇರಿಸಿ ಅಂತಿಮ ಪ್ರಯಾಣ ದರ ನಿಗದಿಪಡಿಸಲು ನಿರ್ದೇಶಿಸಿ ರಾಜ್ಯ ಸರ್ಕಾರ 2022ರ ನವೆಂಬರ್‌ 25ರಂದು ಹೊರಡಿಸಿದ್ದ ಅಧಿಸೂಚನೆಗೆ ಕರ್ನಾಟಕ ಹೈಕೋರ್ಟ್‌ ಬುಧವಾರ ಮಧ್ಯಂತರ ತಡೆ ನೀಡಿದೆ.
ಆ್ಯಪ್ ಆಧರಿತ ಓಲಾ ಮತ್ತು ಉಬರ್ ಆಟೋರಿಕ್ಷಾ ಸೇವೆ ಸ್ಥಗಿತಗೊಳಿಸಬೇಕು ಎಂಬ ರಾಜ್ಯ ಸರ್ಕಾರದ ಆದೇಶ ರದ್ದುಪಡಿಸಬೇಕು ಎಂದು ಎಎನ್‌ಐ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್, ಉಬರ್ ಇಂಡಿಯಾ ಸಿಸ್ಟಮ್ಸ್‌ ಪ್ರೈವೇಟ್ ಲಿಮಿಟೆಡ್ ಮತ್ತು ರೊಪ್ಪೆನ್‌ ಟ್ರಾನ್ಸ್‌ಪೋರ್ಟೇಶನ್‌ ಸರ್ವೀಸಸ್‌ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದವು. ಸಮಸ್ಯೆಯನ್ನು ಸೌಹಾರ್ದಯುತವಾಗಿ ಬಗೆಹರಿಸುವುದಾಗಿ ಹೇಳಿದ್ದ ಸರ್ಕಾರ ಪರವಾನಗಿ ಹೊಂದಿರುವ ಆಟೋರಿಕ್ಷಾ ಸೇವೆ ಒದಗಿಸುವ ಸಂಸ್ಥೆಗಳಿಗೆ ಶೇ.5 ಸೇವಾ ಶುಲ್ಕ ಮತ್ತು ಜಿಎಸ್‌ಟಿ ವಿಧಿಸಲು ಅನುಮತಿಸಿ ಅಧಿಸೂಚನೆ ಹೊರಡಿಸಿತ್ತು. ಇದಕ್ಕೆ ಓಲಾ ಮತ್ತು ಉಬರ್‌ ಸಂಸ್ಥೆಗಳು ಆಕ್ಷೇಪ ವ್ಯಕ್ತಪಡಿಸಿತ್ತು. ಮಧ್ಯಪ್ರವೇಶ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಿ ಎಂ ಪೂಣಚ್ಚ ಅವರ ನೇತೃತ್ವದ ಏಕಸದಸ್ಯ ಪೀಠವು ಮಧ್ಯಂತರ ತಡೆ ನೀಡಿದೆ.

ಪ್ರಮುಖ ಸುದ್ದಿ :-   ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು; ಏಪ್ರಿಲ್‌ 19 ರಿಂದ ಮೂರು ದಿನ ಈ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

 

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement