ಸೋನಿಯಾ ಗಾಂಧಿ ದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ದಾಖಲು

ನವದೆಹಲಿ: ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ದೆಹಲಿಯ ಸರ್ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂಲಗಳ ಪ್ರಕಾರ ಆಕೆಯ ಪುತ್ರಿ ಪ್ರಿಯಾಂಕಾ ವಾದ್ರಾ ಆಕೆಯೊಂದಿಗೆ ಆಸ್ಪತ್ರೆಗೆ ತೆರಳಿದ್ದಾರೆ.
ಸರ್ ಗಂಗಾ ರಾಮ್ ಆಸ್ಪತ್ರೆಯ ಅಧ್ಯಕ್ಷ (ನಿರ್ವಹಣಾ ಮಂಡಳಿ) ಡಾ. ಅಜಯ್ ಸ್ವರೂಪ್ ಪ್ರಕಾರ, ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಇಂದು, ಬುಧವಾರ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರನ್ನು ಡಾ. ಅರೂಪ್ ಬಸು ಮತ್ತು ಅವರ ತಂಡದ ಆರೈಕೆಯಲ್ಲಿ ಚೆಸ್ಟ್ ಮೆಡಿಸಿನ್ ವಿಭಾಗದಲ್ಲಿ ದಾಖಲಿಸಲಾಗಿದೆ. ವೈರಲ್ ಉಸಿರಾಟದ ಸೋಂಕಿನ ವೀಕ್ಷಣೆ ಮತ್ತು ಚಿಕಿತ್ಸೆಗಾಗಿ ಅವರನ್ನು ದಾಖಲಿಸಲಾಗಿದೆ.
ಕಾಂಗ್ರೆಸ್‌ ಪಕ್ಷದ ಮಾಜಿ ಮುಖ್ಯಸ್ಥೆ ಸೋನಿಯಾ ಗಾಂಧಿ, ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ಪತಿ ರಾಬರ್ಟ್ ವಾದ್ರಾ ಇತ್ತೀಚೆಗೆ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಂಡಿದ್ದರು.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement