ಜನಾರ್ದನ ರೆಡ್ಡಿಗೆ ಸೇರಿದ ಹೆಚ್ಚುವರಿ ಆಸ್ತಿ ಜಪ್ತಿ ಪ್ರಕ್ರಿಯೆ ಅನುಮತಿಗೆ ವಿಳಂಬ; ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ ಸಿಬಿಐ

ಬೆಂಗಳೂರು: ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರಿಗೆ ಸೇರಿದ ಹೆಚ್ಚುವರಿ ಆಸ್ತಿಗಳ ಜಪ್ತಿಗೆ ಸಂಬಂಧಿಸಿದಂತೆ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲು ಅನುಮತಿ ಕೋರಿ ಸಲ್ಲಿಸಿರುವ ಮನವಿಯನ್ನು ತುರ್ತಾಗಿ ಪರಿಗಣಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಕೇಂದ್ರೀಯ ತನಿಖಾ ದಳವು (ಸಿಬಿಐ) ಬುಧವಾರ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ ಎಂದು ಬಾರ್‌ & ಬೆಂಚ್‌ ವರದಿ ಮಾಡಿದೆ.
ವರದಿ ಪ್ರಕಾರ, ಕ್ರಿಮಿನಲ್‌ ಕಾನೂನು ತಿದ್ದುಪಡಿ ಸುಗ್ರೀವಾಜ್ಞೆ 1944ರ ವಿವಿಧ ನಿಬಂಧನೆಗಳ ಅಡಿ ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳಲ್ಲಿ ಜನಾರ್ದನ ರೆಡ್ಡಿ ಗಳಿಸಿರುವ ಹೆಚ್ಚುವರಿ ಆಸ್ತಿಗಳನ್ನು ಜಪ್ತಿ ಮಾಡಲು ವಿಶೇಷ ನ್ಯಾಯಾಲಯದ ಮೆಟ್ಟಿಲೇರಲು ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ಅನುಮತಿ ಕೋರಿ 2022ರ ಆಗಸ್ಟ್‌ 30ರಂದು ಮನವಿ ಮಾಡಲಾಗಿದೆ ಎಂದು ಸಿಬಿಐ ಅರ್ಜಿಯಲ್ಲಿ ತಿಳಿಸಿದೆ.
ತಮ್ಮ ಮತ್ತು ಕುಟುಂಬ ಸದಸ್ಯರಿಗೆ ಸೇರಿದ ಕರ್ನೂಲ್‌, ಹೈದರಾಬಾದ್‌ ಮತ್ತು ರಂಗಾ ರೆಡ್ಡಿ ಜಿಲ್ಲೆಗಳಲ್ಲಿ ಗುರುತಿಸಲಾಗಿರುವ ಸುಮಾರು 19.14 ಕೋಟಿ ರೂಪಾಯಿ ಬೆಲೆ ಬಾಳುವ ಆಸ್ತಿಗಳನ್ನು ಮಾರಾಟ ಮಾಡಲು ಜನಾರ್ದನ ರೆಡ್ಡಿ ಸಾಕಷ್ಟು ಪ್ರಯತ್ನ ಮಾಡುತ್ತಿದ್ದಾರೆ. ಈ ವಿಚಾರದಲ್ಲಿ ಕರ್ನಾಟಕ ಸರ್ಕಾರವು ಕ್ರಮಕೈಗೊಳ್ಳಲು ವಿಫಲವಾಗಿದೆ. ಜನಾರ್ದನ ರೆಡ್ಡಿ ಅಕ್ರಮವಾಗಿ ಆಸ್ತಿ ಮಾರಾಟ ಮಾಡಲು ಮುಂದಾಗುತ್ತಿದ್ದು, ಅವುಗಳ ನೋಂದಣಿ ಮಾಡದಂತೆ ತೆಲಂಗಾಣದ ರಂಗಾ ರೆಡ್ಡಿ ಜಿಲ್ಲೆಯ ರಿಜಿಸ್ಟ್ರಾರ್‌ ಅವರಿಗೆ ಮನವಿ ಮಾಡಲಾಗಿದೆ ಎಂದು ಸಿಬಿಐ ಅರ್ಜಿಯಲ್ಲಿ ಉಲ್ಲೇಖಿಸಿದೆ.

ಪ್ರಮುಖ ಸುದ್ದಿ :-   ಹತ್ಯೆಗೀಡಾದ ನೇಹಾ ಹಿರೇಮಠ ಮನೆಗೆ ಸಿಎಂ ಸಿದ್ದರಾಮಯ್ಯ ಭೇಟಿ ; ಕುಟುಂಬಸ್ಥರಿಗೆ ಸಾಂತ್ವನ

 

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement