ಬೆಂಕಿ ಹೊತ್ತಿಕೊಂಡು ಬಸ್ಸು ಸುಟ್ಟು ಕರಕಲಾದ ಬಸ್‌

ಬೆಳಗಾವಿ : ರಾಜ್ಯ ಸಾರಿಗೆ ಸಂಸ್ಥೆಯ ಬಸ್ಸಿಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಬಸ್ಸು ಸಂಪೂರ್ಣವಾಗಿ ಸುಟ್ಟು ಕರಕಲಾಗಿರುವ ಘಟನೆ ಜಿಲ್ಲೆಯ ಹತ್ತರಗಿ ಟೋಲ್ ನಾಕಾ ಸಮೀಪ ಪುಣೆ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ಸಂಜೆ ನಡೆದಿದೆ.
ಕೊಲ್ಲಾಪುರ ಕಡೆಯಿಂದ ಬೆಳಗಾವಿ ಕಡೆಗೆ ಗುರುವಾರ ಸಂಜೆ ವೇಳೆ ರಾಜ್ಯ ಸಾರಿಗೆ ಸಂಸ್ಥೆಯ ಬಸ್ಸು ಹುಕ್ಕೇರಿ ತಾಲೂಕಿನ ಹಂಚಿನಾಳ ಕ್ರಾಸ್ ಬಳಿ ಇರುವ ಗುಲಾಬಶಾವಲಿ ದರ್ಗಾ ಬಳಿಯ ಪುಣೆ- ಬೆಂಗಳೂರು ರಾಷ್ಟ್ರೀಯ-4ರಲ್ಲಿ ಸಂಚರಿಸುತ್ತಿರುವಾಗ ಆಕಸ್ಮಿಕವಾಗಿ ಬಸ್ಸಿಗೆ ಬೆಂಕಿ ತಗುಲಿಕೊಂಡಿದೆ. ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರು ಬಸ್ಸಿನಿಂದ ಕೆಳಗೆ ಇಳಿದಿದ್ದಾರೆ. ಅದೃಷ್ಟವಶಾತ್ ಯಾವುದೇ ಸಾವು-ನೋವು ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.
ವಿಷಯ ತಿಳಿದ ಅಗ್ನಿಶಾಮಕದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬಸ್ಸಿನ ಬೆಂಕಿ ನಂದಿಸುವಷ್ಟರಲ್ಲಿ ಬಸ್ಸು ಸಂಪೂರ್ಣ ಸುಟ್ಟು ಕರಕಲಾಗಿದೆ. ಯಮಕನಮರಡಿ ಸಿಪಿಐ ರಮೇಶ ಛಾಯಾಗೋಳ ಮತ್ತು ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement