ಬೆಂಗಳೂರಿನಲ್ಲಿ ರಾಜ್ಯದ ಪ್ರಥಮ ವನ್ಯಜೀವಿ ವಿಧಿ ವಿಜ್ಞಾನಗಳ ಪ್ರಯೋಗಾಲಯ

ಬೆಂಗಳೂರು: ರಾಜ್ಯದ ಪ್ರಥಮ ವನ್ಯಜೀವಿ ವಿಧಿ ವಿಜ್ಞಾನಗಳ ಪ್ರಯೋಗಾಲಯ ಬೆಂಗಳೂರಿನಲ್ಲಿ ಸ್ಥಾಪನೆಯಾಗಲಿದೆ. ಮಾರ್ಚ್‌ನಿಂದ ಈ ಪ್ರಯೋಗಾಲಯ ಕಾರ್ಯಾರಂಭ ಮಾಡಲಿದ್ದು, ಇದಕ್ಕೆ ರಾಜ್ಯ ಸರ್ಕಾರ ₹2.7 ಕೋಟಿ ಅನುದಾನ ನೀಡಲು ಒಪ್ಪಿದೆ.
ಕಳೆದ ಒಂದು ದಶಕದಿಂದ ಪ್ರಯೋಗಾಲಯ ಸ್ಥಾಪನೆಯ ಪ್ರಸ್ತಾವನೆ ಚರ್ಚೆಯಲ್ಲಿದ್ದು, ರಾಜ್ಯ ಸರ್ಕಾರ ಇತ್ತೀಚೆಗಷ್ಟೇ ಒಪ್ಪಿಗೆ ನೀಡಿದೆ.
ವನ್ಯಜೀವಿಗಳ ಮೇಲಿನ ಅಪರಾಧಗಳ ಬಗ್ಗೆ ತನಿಖೆ ನಡೆಸಲು ಈ ಪ್ರಯೋಗಾಲಯ ನೆರವಾಗಲಿದೆ.
ಈಗ ಸ್ಯಾಂಪಲ್‌ಗಳನ್ನು ಡೆಹರಾಡೂನ್ ಅಥವಾ ಹೈದರಾಬಾದ್‌ಗಳಲ್ಲಿರುವ ಪ್ರಯೋಗಾಲಯಗಳಿಗೆ ಕಳುಹಿಸಲಾಗುತ್ತಿದೆ. ಇದರಿಂದ ಬಹಳಷ್ಟು ಅಪರಾಧಗಳ ಪ್ರಕರಣಗಳಲ್ಲಿ ತನಿಖೆ ತಡವಾಗುತ್ತಿದೆ. ಮುಂದೆ ಈ ಸಮಸ್ಯೆ ಬಗೆಹರಿಯಲಿದೆ. ಇದರಿಂದ ಅಪರಾಧಿಗಳಿಗೆ ಶಿಕ್ಷೆ ಕೊಡಿಸಲು ನೆರವಾಗಲಿದೆ ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ಹೇಳಿದ್ದಾರೆ ಎಂದು ತಿಳಿಸಿದ್ದಾರೆ.

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಸಿಎಂ ಸಿದ್ದರಾಮಯ್ಯ ಹೇಳಿಕೆಯಿಂದ ನಮ್ಮ ಮನೆತನದ ಗೌರವ ಹಾಳಾಗುತ್ತಿದೆ : ನೇಹಾ ತಂದೆ ನಿರಂಜನ ಹಿರೇಮಠ

ನಿಮ್ಮ ಕಾಮೆಂಟ್ ಬರೆಯಿರಿ

advertisement