ಹಾವೇರಿ : 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ

ಹಾವೇರಿ: ಏಲಕ್ಕಿ ಕಂಪಿನ ನಗರಿ ಹಾವೇರಿಯಲ್ಲಿ ಇಂದಿನಿಂದ ಮೂರು ದಿನಗಳ ಕಾಲ ನಡೆಯಲಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ರಾಷ್ಟ್ರ ಧ್ವಜ, ನಾಡ ಧ್ವಜ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಧ್ವಜಾರೋಹಣ ಮಾಡುವುದರ ಮೂಲಕ ಚಾಲನೆ ನೀಡಲಾಯಿತು.
ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿ ರಸ್ತೆಯ 130 ಎಕರೆ ವಿಸ್ತೀರ್ಣದ ಜಾಗದಲ್ಲಿ ನಿರ್ಮಿಸಲಾಗಿರುವ ಕನಕ-ಶರೀಫ-ಸರ್ವಜ್ಞ ಪ್ರಧಾನ ವೇದಿಕೆ ಮುಂಭಾಗದಲ್ಲಿ ಮುಂಜಾನೆ 7 ಗಂಟೆಗೆ ಧ್ವಜಾರೋಹಣ ನೆರವೇರಿಸುವ ಮೂಲಕ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ ನೀಡಲಾಯಿತು.
ಹಾವೇರಿ ಜಿಲ್ಲಾ ಉಸ್ತವಾರಿ ಸಚಿವ ಅರೆಬೈಲು ಶಿವರಾಮ ಹೆಬ್ಬಾರ ಅವರು ರಾಷ್ಟ್ರಧ್ವಜಾರೋಹಣ, ಸಾಹಿತ್ಯ ಪರಿಷತ್ತಿನ ಧ್ವಜವನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ‌.ಮಹೇಶ ಜೋಶಿ, ಜಿಲ್ಲಾ ಸಾಹಿತ್ಯ ಪರಿಷತ್ ಅಧ್ಯಕ್ಷ ಲಿಂಗಯ್ಯ ಬಿ‌ ಹಿರೇಮಠ‌ ‌ನಾಡ ಧ್ವಜದ ಧ್ವಜಾರೋಹಣ ನೆರವೇರಿಸಿದರು.
ನಂತರ ಮಾಧ್ಯಮದವರ ಜೊತೆ ಮಾತನಾಡಿದ ಸಚಿವ ಶಿವರಾಮ ಹೆಬ್ಬಾರ, ‘ನ ಭೂತೋ ನ ಭವಿಷ್ಯತಿಃ ಎನ್ನುವ ರೀತಿಯಲ್ಲಿ ಹಾವೇರಿ ಸಾಹಿತ್ಯ ಸಮ್ಮೇಳನನ್ನು ಕನ್ನಡಿಗರು ಹಾಗೂ ಸಾಹಿತ್ಯ ಆಸಕ್ತರ ನೆನಪಿನಲ್ಲಿ ಉಳಿಯುವಂತೆ ಆಯೋಜಿಸಲಾಗಿದೆ. ನಾಡು ನುಡಿ ವಿಚಾರದಲ್ಲಿ ಯಾವುದೇ ಕಾರಣಕ್ಕೂ ರಾಜಿಯಾಗುವ ಪ್ರಶ್ನೆಯೇ ಇಲ್ಲ ಎಂದರು.

ಪ್ರಮುಖ ಸುದ್ದಿ :-   ಹುಬ್ಬಳ್ಳಿ : ಕಾಲೇಜ್‌ ಕ್ಯಾಂಪಸ್‌ ನಲ್ಲೇ ಚಾಕುವಿನಿಂದ ಇರಿದು ಕಾರ್ಪೊರೇಟರ್ ಪುತ್ರಿಯ ಹತ್ಯೆ ; ಯುವಕನ ಬಂಧನ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನೀಲಕುಮಾರ ಮಾತನಾಡಿ, ಹಾವೇರಿಗೆ ಆಗಮಿಸಿದ ಸಮ್ಮೇಳಾನಧ್ಯಕ್ಷರನ್ನು ಜಿಲ್ಲಾಡಳಿತದ ವತಿಯಿಂದ ಅದ್ದೂರಿಯಾಗಿ ಸ್ವಾಗತಿಸಿಕೊಳ್ಳಲಾಗಿದೆ. ಸಮ್ಮೇಳನದ ಕಾರ್ಯಗಳು ಸುಗಮವಾಗಿ ಜರುಗಲಿ ಎಂಬ ಉದ್ದೇಶದಿಂದ, ನಿಗದಿತ ಸಮಯಕ್ಕೆ ಸರಿಯಾಗಿ‌ ಧ್ವಜಾರೋಹಣ ನಡೆಸಲಾಗಿದೆ. ಸಮ್ಮೇಳನಕ್ಕೆ ಯಾವುದೇ ಕೊರತೆಯಾಗದಂತೆ ಸರ್ಕಾರ ಹಾಗೂ ಜಿಲ್ಲಾಡಳಿತದಿಂದ ಸಾಕಷ್ಟು ಎಚ್ಚರಿಕೆ‌ ವಹಿಸಿ, ಉತ್ತಮ ವ್ಯವಸ್ಥೆ ಕಲ್ಪಿಸಲಾಗಿದೆ. ಈ ಸಾಹಿತ್ಯ ಸಮ್ಮೇಳನದ ಮೂಲಕ ಯುವ ಪ್ರತಿಭೆಗಳಿಗೆ ಅವಕಾಶ ನೀಡಲಾಗುತ್ತಿದೆ. ನಾಡು ನುಡಿಯ ವಿಚಾರವಾಗಿ ಭಿನ್ನತೆಗಳನ್ನು ಮರೆತು ಎಲ್ಲರೂ ಒಗ್ಗಟ್ಟು ಪ್ರದರ್ಶಸಬೇಕು ಎಂದರು‌.

ಪೊಲೀಸ್, ಎನ್.ಸಿ.ಸಿ, ಸೇವದಾಳ, ಸ್ಕೌಟ್ ಮತ್ತು ಗೈಡ್ಸ್ ತಂಡಗಳು ಗೌರವ ವಂದನೆ ಸಲ್ಲಿಸಿದವು. ಹೇಮಂತ್ ಎಸ್.ಕೆ. ಸ್ವಾಗತಿಸಿದರು. ನಾಗರಜ ಇಚ್ಚಂಗಿ ನಿರೂಪಿಸಿದರು. ಎ.ಎಲ್.ಶೇಖಸುರನುಗಿ ವಂದಿಸಿದರು. ಅರುಣ್ ಕಾಳಪ್ಪನವರು ಕಾರ್ಯಕ್ರಮ ನಿರ್ವಹಿಸಿದರು.
ಸಂಸದ ಶಿವಕುಮಾರ್ ಉದಾಸಿ, ಶಾಸಕ ನೇಹರು ಓಲೆಕಾರ, ಜಿಲ್ಲಾಧಿಕಾರಿ ರಘುನಂದನ್ ಮೂರ್ತಿ, ಜಿ.ಪಂ. ಸಿಇಓ ಮಹಮದ್ ರೋಷನ್, ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ, ಸೇರಿದಂತೆ ಮತ್ತಿತರು ಇದ್ದರು.
ಹಾವೇರಿಯ ಹೊರವಲಯದ ಅಜ್ಜಯ್ಯ ಗುಡಿಯ ಹತ್ತಿರ ಬೃಹತ್ ವೇದಿಕೆ ನಿರ್ಮಾಣ ಮಾಡಲಾಗಿದೆ. ಜರ್ಮನ್ ತಂತ್ರಜ್ಞಾನ ಬಳಸಿ ಪ್ರಧಾನ ವೇದಿಕೆ ಹಾಗೂ ಪುಸ್ತಕ ಮಳಿಗೆ, ವಸ್ತು ಪ್ರದರ್ಶನ ಮಾಡಲಾಗಿದೆ. ಸಮ್ಮೆಳನಕ್ಕೆ ಬರುವ ಲಕ್ಷಾಂತರ ಜನರಿಗೆ ಊಟ ಹಾಗೂ 70 ಸಾವಿರ ಜನರಿಗೆ ಉಪಾಹಾರ ವ್ಯವಸ್ಥೆ ಮಾಡಲಾಗಿದೆ. 1.5 ಲಕ್ಷ ಜನರಿಗೆ ಮಧ್ಯಾಹ್ನ ಊಟ, ಶೇಂಗಾ ಹೋಳಿಗೆ, ಬದನೆಕಾಯಿ ಪಲ್ಯಾ, ಚಪಾತಿ, ಅನ್ನ, ಮೊಸರು, ಸಾಂಬಾರ್, ಉಪ್ಪಿನ ಕಾಯಿ, ಶೇಂಗಾ ಚಟ್ನಿ ನೀಡಲಾಗುತ್ತಿದೆ.

ಪ್ರಮುಖ ಸುದ್ದಿ :-   ಕುಣಿಗಲ್ : ರಾಮನವಮಿ ಪಾನಕ ಸೇವಿಸಿದ 42 ಮಂದಿ ಅಸ್ವಸ್ಥ

4.3 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement