ಅಪ್ರಾಪ್ತ ವಿದ್ಯಾರ್ಥಿನಿ ಜೊತೆ ತಿರುಗಾಡುತ್ತಿದ್ದ ಅನ್ಯಕೋಮಿನ ಯುವಕನಿಗೆ ಥಳಿತ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ‘ನೈತಿಕ ಪೊಲೀಸ್ ಗಿರಿ’ ಪ್ರಕರಣ ವರದಿಯಾಗಿದ್ದು, ಗುರುವಾರ ಸಂಜೆ ಸುಬ್ರಹ್ಮಣ್ಯದಲ್ಲಿ ಗುಂಪೊಂದು 20 ವರ್ಷದ ಮುಸ್ಲಿಂ ಯುವಕನ ಮೇಲೆ ಹಲ್ಲೆ ನಡೆಸಿದೆ ಎಂದು ವರದಿಯಾಗಿದೆ.
ಸುಳ್ಯ ತಾಲೂಕಿನ ಕಲ್ಲುಗುಂಡಿ ನಿವಾಸಿ ಅಫೀದ್ ಎಂಬ ಯುವಕ 17 ವರ್ಷದ ಹಿಂದೂ ಯುವತಿಯನ್ನು ಬಸ್ ನಿಲ್ದಾಣದಲ್ಲಿ ಭೇಟಿ ಮಾಡುತ್ತಿದ್ದ ಎನ್ನಲಾಗಿದೆ. ಸುಬ್ರಹ್ಮಣ್ಯದ ಕಾಲೇಜೊಂದರ ವಿದ್ಯಾರ್ಥಿನಿಯಾಗಿರುವ ಬಾಲಕಿ ಬಸ್‌ ನಿಲ್ದಾಣಕ್ಕೆ ಆಗಮಿಸಿ ಅಫೀದ್‌ ಜತೆ ಮಾತನಾಡುತ್ತಿದ್ದಾಗ ಅಪರಿಚಿತ ವ್ಯಕ್ತಿಗಳು ಜೀಪಿನಲ್ಲಿ ಬಂದು ಅಫಿದ್‌ ನನ್ನು ಕರೆದೊಯ್ದು ಹಲ್ಲೆ ನಡೆಸಿದ್ದಾರೆ ಎಂದು ಹೇಳಲಾಗಿದೆ. 10 ರಿಂದ 12 ಜನ ಹಲ್ಲೆ ನಡೆಸಿದ್ದಾರೆ ಎಂದು ಹೇಳಲಾಗಿದ್ದು, ಯುವಕನ ದೂರಿನ ಆಧಾರದ ಮೇಲೆ ಜಿಲ್ಲಾ ಪೊಲೀಸರು ದಾಳಿಕೋರರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಅಪ್ರಾಪ್ತ ಬಾಲಕಿಯ ತಂದೆ ಸಹ ಯುಕನ ವಿರುದ್ಧ ದೂರು ನೀಡಿದ್ದು, ಅಫಿದ್ ತನ್ನ ಮಗಳಿಗೆ ಸಂಬಂಧ ಬೆಳೆಸುವಂತೆ ಒತ್ತಾಯಿಸಿದ್ದಾನೆ ಎಂದು ಆರೋಪಿಸಿದ್ದಾರೆ. ಈ ದೂರಿನ ಆಧಾರದ ಮೇಲೆ ಅಫಿದ್ ವಿರುದ್ಧ ಈಗ ಪೋಕ್ಸೊ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ದಾಳಿಕೋರರನ್ನು ಶೀಘ್ರದಲ್ಲಿಯೇ ಬಂಧಿಸಲಾಗುವುದು ಮತ್ತು ದಾಳಿಕೋರರು ಯಾವ ಸಂಘಟನೆಗೆ ಸೇರಿದವರು ಎಂಬುದು ಇನ್ನೂ ಖಚಿತವಾಗಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷಿಕೇಶ್ ಸೋನವಾನೆ ತಿಳಿಸಿದ್ದಾರೆ ಎಂದು ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದೆ.

ಪ್ರಮುಖ ಸುದ್ದಿ :-   ಗದಗ: ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿ ನಾಲ್ವರ ಭೀಕರ ಹತ್ಯೆ

4 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement