ಕನ್ನಡಕ್ಕೆ ಯಾವತ್ತಿಗೂ ಕುತ್ತು ತರಲು ಸಾಧ್ಯವಿಲ್ಲ : ಸಿಎಂ ಬೊಮ್ಮಾಯಿ

ಹಾವೇರಿ: ಕನ್ನಡ ಅತ್ಯಂತ ಶ್ರೀಮಂತ ಭಾಷೆಯಾಗಿದ್ದು, ಇದಕ್ಕೆ ಆಪತ್ತು ತರುವ ಶಕ್ತಿ ವಿಶ್ವದಲ್ಲಿ ಎಲ್ಲಿಯೂ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟಿದ್ದಾರೆ.
ಹಾವೇರಿಯಲ್ಲಿ ಶುಕ್ರವಾರದಿಂದ ಆರಂಭವಾದ 86ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, , ಭಾರತ ದೇಶದಲ್ಲಿ ಕನ್ನಡಕ್ಕೆ ಮಾತ್ರ ಎಂಟು ಜ್ಞಾನಪೀಠ ಪ್ರಶಸ್ತಿಗಳು ದೊರೆತಿವೆ. ದೇಶದ ಬೇರೆ ಯಾವ ಭಾಷೆಗೆ ಸಹ ಇಷ್ಟು ಜ್ಞಾನಪೀಠ ಪ್ರಶಸ್ತಿಗಳು ದೊರೆತಿಲ್ಲ. ಒಂದು ಭಾಷೆ ಒಂದು ಸಂಸ್ಕೃತಿ ಬೆಳೆಯಬೇಕಾದರೆ ಅದು ಇದುವರೆಗೆ ನಡೆದು ಬಂದ ದಾರಿಯ ಸಿಂಹಾವಲೋಕನ ಮಾಡಬೇಕಾಗುತ್ತದೆ. ಆಗ ಅದು ಮುಂದಿನ ದಾರಿಯನ್ನು ನಿರ್ಧರಿಸುತ್ತದೆ ಎಂದರು.
ಕನ್ನಡ ಇಡೀ ಜಗತ್ತಿನ ಪ್ರಾಚೀನ ಭಾಷೆಗಳಲ್ಲೊಂದು. ಇದರರ್ಥ ಕನ್ನಡಿಗರ ಬದುಕು ಪುರಾತನ ಕನ್ನಡ ಸಂಸ್ಕೃತಿ ಪುರಾತನ. ಇಂಥ ಕನ್ನಡದ ಭವ್ಯ ಸಂಸ್ಕೃತಿ ಹಾಗೂ ಪರಂಪರೆಯನ್ನು ಮತ್ತೆ ಹೆಮ್ಮರವಾಗಿ ಬೆಳೆಸಬೇಕಾದ ಜವಾಬ್ದಾರಿ ನಮ್ಮ ಮೇಲಿದೆ ಎಂದು ಹೇಳಿದರು.

ವಿಶೇಷ ಅಂಚೆ ಲಕೋಟೆ ಬಿಡುಗಡೆ
ಸಮ್ಮೇಳನದ ಅಂಗವಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ವಿಶೇಷ ಅಂಚೆ ಲಕೋಟೆ ಬಿಡುಗಡೆಗೊಳಿಸಿದರು. ಸಮ್ಮೇಳನ ಕಾರ್ಯಕ್ರಮಕ್ಕೆ ಚಾಲನೆ ನೀಡುವ ಮೊದಲು ಸೋಮವಾರ ಲಿಂಗೈಕ್ಯರಾದ ಸಿದ್ದೇಶ್ವರ ಶ್ರೀಗಳಿಗೆ ಮೌನಾಚರಣೆ ಮಾಡುವ ಮೂಲಕ ಗೌರವ ಸಲ್ಲಿಸಲಾಯಿತು.
ನಿಕಟ ಪೂರ್ವ ಸಮ್ಮೇಳನಾಧ್ಯಕ್ಷ ಡಾ. ಎಚ್‌.ಎಸ್‌. ವೆಂಕಟೇಶಮೂರ್ತಿ ನೂತನ ಅಧ್ಯಕ್ಷ ಡಾ. ದೊಡ್ಡರಂಗೇಗೌಡ ಅವರಿಗೆ ಧ್ವಜ ಹಸ್ತಾಂತರಿಸಿ ಮಾತನಾಡಿ, ಕರ್ನಾಟಕದಲ್ಲಿ ಕನ್ನಡ ಶಾಲೆಗಳ ಸಂಖ್ಯೆ ದಿನದಿಂದ ದಿನಕ್ಕೆ ಕಡಿಮೆ ಆಗುತ್ತಿದೆ. ಇದು ಕನ್ನಡಕ್ಕೆ ಇರುವ ಬಹುದೊಡ್ಡ ಆಪತ್ತು ಎಂದು ಎಚ್ಚರಿಸಿದರು. ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ಇದ್ದರು.
ಜನಪದ ಕಲೆಗಳ ಜೊತೆಗೆ ಅಧ್ಯಕ್ಷರ ಮೆರವಣಿಗೆ ಶ್ರೀ ಪುರಸಿದ್ದೇಶ್ವರ ದೇವಸ್ಥಾನ ಮುಂಭಾಗದ ಶ್ರೀ ಹುಕ್ಕೇರಿ ಮಠದ ಸನ್ನಿಧಿಯಲ್ಲಿ ಅಖಿಲ ಭಾರತ 86 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸಮ್ಮೇಳನಾಧ್ಯಕ್ಷ ಡಾ. ದೊಡ್ಡರಂಗೇಗೌಡರ ಮೆರವಣಿಗೆಗೆ ನಡೆಯಿತು. ತಾಯಿ ಭುವನೇಶ್ವರಿ ಭಾವಚಿತ್ರ ಹೊತ್ತ ರಥ ಮೆರವಣಿಗೆಗೆ ವಿಶೇಷ ಮೆರಗು ನೀಡಿತು.

ಪ್ರಮುಖ ಸುದ್ದಿ :-   ಎಸ್ ಎಸ್ ಎಲ್ ಸಿ ಪರೀಕ್ಷೆ ವಿದ್ಯಾರ್ಥಿಗಳ ಮಾರಾಮಾರಿ : ಚಾಕು ಇರಿತ

 

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement