ಪರ್ಯಾಯ ಸಮ್ಮೇಳನಕ್ಕೆ ಸಚಿವ ಸುನಿಲಕುಮಾರ ಆಕ್ಷೇಪ

ಹಾವೇರಿ: ಸರ್ಕಾರದ ವತಿಯಿಂದ ನಡೆಯುತ್ತಿರುವ ಸಮ್ಮೇಳನಕ್ಕೆ ವಿರುದ್ಧವಾಗಿ ಪರ್ಯಾಯ ಸಮ್ಮೇಳನ ಮಾಡುತ್ತಿರುವುದು ಒಳ್ಳೆಯ ಬೆಳವಣಿಗೆಯಲ್ಲ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲಕುಮಾರ ಹೇಳಿದ್ದಾರೆ.
ಈ ಸಂಬಂಧ ಹಾವೇರಿಯಲ್ಲಿ ಆರಂಭವಾಗಿರುವ 86ನೇ ಸಾಹಿತ್ಯ ಸಮ್ಮೇಳನದಲ್ಲಿ ಪಾಲ್ಗೊಳ್ಳುವುದಕ್ಕೂ ಮುನ್ನ ಮಾತನಾಡಿದ ಅವರು, ದೊಡ್ಡ ಕಾರ್ಯಕ್ರಮದಲ್ಲಿ ಸಣ್ಣಪುಟ್ಟ ವ್ಯತ್ಯಾಸವಾಗಬಹುದು. ಅದನ್ನು ಚರ್ಚಿಸಿ ಬಗೆಹರಿಸಿಕೊಳ್ಳಬೇಕು. ಭಾಷೆಯ ಬೆಳವಣಿಗೆಯ ದೃಷ್ಟಿಯಿಂದ ಮಹತ್ವವಾಗಿರುವ ಈ ಸಮ್ಮೇಳನ, ನಾಡಿನ ಜನತೆಗೆ ಒಳ್ಳೆಯ ಸಂದೇಶ ನೀಡಲಿದೆ ಎಂದು ತಿಳಿಸಿದರು.
ಕೆಲ ದಿನಗಳ ಹಿಂದಷ್ಟೇ ಕನ್ನಡ ಸಾಹಿತ್ಯ ಪರಿಷತ್ತು, ಸಮ್ಮೇಳನದಲ್ಲಿ ಭಾಗವಹಿಸುವ ಸಾಹಿತಿಗಳು ಮತ್ತು ಕವಿಗಳ ಹೆಸರನ್ನು ಪ್ರಕಟಿಸಿತ್ತು. ಈ ವೇಳೆ ಕನ್ನಡ ಬರಹಗಾರರ ಒಂದು ವಿಭಾಗವು ರಾಜ್ಯದಲ್ಲಿ ನೂರಾರು ಮುಸ್ಲಿಂ ಕನ್ನಡ ಲೇಖಕರಿದ್ದು, ಸಮ್ಮೇಳನಕ್ಕೆ ಕೆಲವರನ್ನು ಮಾತ್ರ ಪರಿಗಣಿಸಲಾಗಿದೆ ಎಂದು ಆಕ್ಷೇಪಿಸಿದ್ದರು.

5 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement