ವೈಎಸ್‌ವಿ ದತ್ತ ಕಾಂಗ್ರೆಸ್​ ಸೇರ್ಪಡೆಗೆ ಮುಹೂರ್ತ ಫಿಕ್ಸ್

ಚಿಕ್ಕಮಗಳೂರು:: ಜನವರಿ 15ರ ಬಳಿಕ ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಕಾಂಗ್ರೆಸ್‌ ಸೇರ್ಪಡೆಯಾಗುವುದಾಗಿ ಎಂದು ಮಾಜಿ ಶಾಸಕ ವೈ.ಎಸ್.ವಿ. ದತ್ತಾ ಪ್ರಕಟಿಸಿದ್ದಾರೆ.
ಕಡೂರು ತಾಲೂಕಿನ ಸ್ವಗ್ರಾಮ ಯುಗಟಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಐವತ್ತು ವರ್ಷಗಳಿಂದ ಮಾಜಿ ಪ್ರಧಾನಿ ದೇವೇಗೌಡರು-ನನ್ನದು ತಂದೆ ಮಕ್ಕಳ ಸಂಬಂಧ ಆಗಿದೆ. ನಾನು ಎಲ್ಲೇ ಇದ್ದರೂ ಅವರ ಹಾರೈಕೆ ನನ್ನ ಮೇಲೆ ಇದ್ದೇ ಇರುತ್ತದೆ. ನಾನು ಅನಿವಾರ್ಯ ಕಾರಣಗಳಿಂದಾಗಿ ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಯಾಗುತ್ತಿದ್ದೇನೆ. ನನ್ನ ಪರಿಸ್ಥಿತಿಯನ್ನು ಅವರು ಅರ್ಥಮಾಡಿಕೊಳ್ಳುತ್ತಾರೆ ಎಂದು ಭಾವಿಸಿದ್ದೇನೆ ಎಂದು ಹೇಳಿದ್ದಾರೆ.
ನನ್ನನ್ನು ವಿಧಾನ ಪರಿಷತ್ ಸದಸ್ಯನನ್ನಾಗಿ ಮಾಡಿದ್ದು ದೇವೇಗೌಡರು. ಇದು ನನ್ನ ರಾಜಕೀಯ ಜೀವನಕ್ಕೆ ಸಿಕ್ಕ ತಿರುವಾಗಿದೆ. ಆದರೆ ಈಗ ಅನಿವಾರ್ಯ ಕಾರಣಗಳಿಗಾಗಿ ಕಾಂಗ್ರೆಸ್‌ಗೆ ಸೇರ್ಪಡೆಯಾಗುತ್ತಿದ್ದೇನೆ. ಇದನ್ನ ಅವರಿಗೆ ಹೇಳಲು ಒಂದು ರೀತಿ ಮುಜುಗರವಾಗುತ್ತದೆ. ಆದರೆ, ದೇವೇಗೌಡರು ನನ್ನ ಪರಿಸ್ಥಿತಿಯನ್ನು ಅರ್ಥ ಮಾಡಿಕೊಳ್ಳುತ್ತಾರೆ ಎಂಬುದು ನನ್ನ ಭಾವನೆ ಆಗಿದೆ ಎಂದು ಹೇಳುವ ಮೂಲಕ ಭಾವುಕರಾದರು.
ಕಡೂರಿನಲ್ಲಿ ನಿರಂತರ ಜನರ ಸಂಪರ್ಕದಲ್ಲಿದ್ದೇನೆ. ತಾಲೂಕಿನಲ್ಲಿ ಎಲ್ಲೇ ಹೋದರೂ ಕಾಂಗ್ರೆಸ್ ಸೇರಬೇಕೆಂಬ ಸಾರ್ವತ್ರಿಕ ಅಭಿಪ್ರಾಯ ವ್ಯಕ್ತವಾಗುತ್ತಿತ್ತು. ಹಾಗಾಗಿ, ಜನಾಭಿಪ್ರಾಯ, ಅಭಿಮಾನಿಗಳು ಹಾಗೂ ಕಾರ್ಯಕರ್ತರ ಅಭಿಪ್ರಾಯದಂತೆ ನನ್ನ ಸಮಾನ ಮನಸ್ಕ ಸ್ನೇಹಿತರಿರುವ ಕಾಂಗ್ರೆಸ್ ಪಕ್ಷಕ್ಕೆ ಸೇರುವ ನಿರ್ಧಾರ ಮಾಡಿದ್ದೇನೆ ಎಂದು ಹೇಳಿದ್ದಾರೆ.

ಪ್ರಮುಖ ಸುದ್ದಿ :-   ಗಡಿ ಉಸ್ತುವಾರಿ ಸಚಿವರಾಗಿ ಹೆಚ್‌.ಕೆ ಪಾಟೀಲ ನೇಮಕ

4 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement