ಕೈಗಾರಿಕೆಗಳ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಶೇ.80 ರಷ್ಟು ಪ್ರಾಶಸ್ತ್ಯ: ಸಿಎಂ ಬೊಮ್ಮಾಯಿ

posted in: ರಾಜ್ಯ | 0

ಹಾವೇರಿ: ಸಮಗ್ರ ಭಾಷಾ ಅಭಿವೃದ್ಧಿಗೆ ಕಾನೂನಿನ ಸ್ವರೂಪ ನೀಡಿ, ಕನ್ನಡಿಗರಿಗೆ ಕೈಗಾರಿಗಳ ಉದ್ಯೋಗದಲ್ಲಿ ಶೇ.80 ರಷ್ಟು ಆದ್ಯತೆ ನೀಡಲಾಗುವುದು‌. ಗಡಿ ಭಾಗದ ಹಾಗೂ ಗಡಿ ಆಚೆಗಿನ ಕನ್ನಡಿಗರ ಹಿತ ಕಾಯಲು ಸರ್ಕಾರ ಬದ್ಧವಾಗಿದೆ. ಗಡಿ ಅಭಿವೃದ್ಧಿಗೆ ವಿಶೇಷ ಅನುದಾನ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
86 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಅವರು, ಎಲ್ಲ ಕ್ಷೇತ್ರಗಳಲ್ಲಿ ಕನ್ನಡತನವನ್ನು ಉಳಿಸಬೇಕು, ಬೆಳೆಸಬೇಕು ಎಂಬ ಆಶಯದಿಂದ ಸಮಗ್ರವಾದ ಕಾನೂನು ರೂಪಿಸಲಾಗುತ್ತಿದೆ. ರಾಜ್ಯದ ಕಾನೂನು ಆಯೋಗವು ಈಗಾಗಲೇ ಕರಡು ಸಿದ್ಧಪಡಿಸಿದೆ. ಇನ್ನಷ್ಟು ವಿಸ್ತೃತ ಮತ್ತು ವ್ಯಾಪಕ ಚರ್ಚೆಗಳಾದ ಕೂಡಲೇ ಈ ಕಾನೂನು ಜಾರಿಗೊಳ್ಳುತ್ತದೆ. ಕೈಗಾರಿಕೆಗಳ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಶೇ.80 ರಷ್ಟು ಪ್ರಾಶಸ್ತ್ಯ ದೊರೆತು ಎಲ್ಲ ಕನ್ನಡಿಗರ ಕೈಗಳಿಗೆ ಕೆಲಸ ನೀಡುವ ಉದ್ಯೋಗ ನೀತಿಯ ತೀರ್ಮಾನವನ್ನು ರಾಜ್ಯದ ಸಚಿವ ಸಂಪುಟದಲ್ಲಿ ಕೈಗೊಳ್ಳಲಾಗುವುದು ಎಂದರು.
ಕನ್ನಡ ಅತ್ಯಂತ ಪ್ರಾಚೀನ ಭಾಷೆ. ಕನ್ನಡದ ಸಂಸ್ಕೃತಿಯಲ್ಲಿ ಸಾಹಿತ್ಯದ ಪಾತ್ರ ದೊಡ್ಡದಿದ್ದು ಕನ್ನಡದ ಕಂಪನ್ನು ಮತ್ತೊಮ್ಮೆ ಎಲ್ಲೆಡೆ ಪಸರಿಸಬೇಕು. ಕನ್ನಡವನ್ನು ಆಳವಾಗಿ ಬಿತ್ತಬೇಕು. ಅದು ಬೆಳೆದು ಹೆಮ್ಮರವಾಗಿ ಬೆಳೆಯಬೇಕು. ಈ ಉದ್ದೇಶ ಇಟ್ಟುಕೊಂಡು ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿದೆ ಎಂದರು.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಇಂದಿನ ಪ್ರಮುಖ ಸುದ್ದಿ :-   2022ರಲ್ಲಿ ಬೆಂಗಳೂರು ವಿಮಾನ ನಿಲ್ದಾಣದಿಂದ 2.75 ಕೋಟಿ ಮಂದಿ ಪ್ರಯಾಣ

ತಮ್ಮ ಹೆಸರಿನಂತೆಯೇ ಸಾಹಿತ್ಯ, ಸಾಂಸ್ಕೃತಿಕ ರಂಗಗಳಲ್ಲಿ ದೊಡ್ಡ ಸಾಧನೆ ಮಾಡಿರುವ ಪ್ರೊ. ದೊಡ್ಡರಂಗೇಗೌಡರು ಹೆಸರಿಗೆ ಅನ್ವರ್ಥವಾಗುವಂತಹ ವ್ಯಕ್ತಿತ್ವ ಹೊಂದಿದವರು. ಅವರು ಮಾನವೀಯತೆಯ ಸೂಕ್ಷ್ಮತೆಗಳನ್ನು ಅರ್ಥ ಮಾಡಿಕೊಂಡು ಜನಸಾಮಾನ್ಯರಿಗೆ ಅರ್ಥವಾಗುವ ಭಾಷೆಯಲ್ಲಿ ಮಾರ್ಮಿಕವಾಗಿ ತಿಳಿಸುವ ಕೆಲಸವನ್ನು ಅವರ ಸಾಹಿತ್ಯ, ಕವಿತೆಗಳಲ್ಲಿ, ಹಾಡುಗಳಲ್ಲಿ ಕಂಡುಬರುತ್ತದೆ ಎಂದರು.

ಏಕೀಕರಣ ಹೋರಾಟ
ಕರ್ನಾಟಕ ಏಕೀಕರಣ ಹೋರಾಟ ಮಾಡಿದ ಮಹನೀಯರು ಕನ್ನಡವನ್ನು ಒಂದು ಮಾಡಿದ್ದಾರೆ. ಹಾವೇರಿಯ ಸಿದ್ದಪ್ಪ ಹೊಸಮನಿ, ಅಂಗಾರಪ್ಪ ದೊಡ್ಡಮೇಟಿ, ಗುದ್ಲೆಪ್ಪ ಹಳ್ಲಿಕೇರಿ, ಮಾಜಿ ಮುಖ್ಯಮಂತ್ರಿ ಎಸ್.ನಿಜಲಿಂಗಪ್ಪ, ಇವರೆಲ್ಲರೂ ಮುಂಚೂಣಿಯಲ್ಲಿದ್ದವರು. ಇವರೆಲ್ಲರ ಹೋರಾಟದ ಪರಿಣಾಮವಾಗಿ ಇಂದು ಕನ್ನಡ ಭಾಷೆ, ಕನ್ನಡ ಒಂದಾಗಿದೆ. ಈ ಹೋರಾಟಸ್ವಾತಂತ್ರ್ಯ ಹೋರಾಟದ ಹಿನ್ನೆಲೆಯಿಂದ ಬಂದಿದೆ. ಹಾವೇರಿಯ ಮೈಲಾರ ಮಹದೇವಪ್ಪನವರ ಹೋರಾಟ, ತ್ಯಾಗ, ಬಲಿದಾನ ಎಂದೂ ಮರೆಯಲು ಸಾಧ್ಯವಿಲ್ಲ. ಈ ಮಹನೀಯರ ಭಾವನೆಗಳನ್ನು ನಮ್ಮ ಮನದಾಳದಲ್ಲಿ ಇರಿಸಿಕೊಂಡು ಮುಂದುವರೆಯುತ್ತಿದ್ದೇವೆ ಎಂದರು.
ಸಮ್ಮೇಳನಾಧ್ಯಕ್ಷ ಡಾ.ದೊಡ್ಡರಂಗೇಗೌಡ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ವಿ.ಸುನೀಲಕುಮಾರ, ಸಚಿವರಾದ ಮುರುಗೇಶ್ ನಿರಾಣಿ, ಅರೆಬೈಲು ಶಿವರಾಮ ಹೆಬ್ಬಾರ, ಸಂಸದ ಶಿವಕುಮಾರ ಉದಾಸಿ, ಶಾಸಕರು ಹಾಗೂ ಜನಪ್ರತಿನಿಧಿಗಳು ಉಪಸ್ಥಿತಿರಿದ್ದರು. ಸ್ವಾಗತ ಸಮಿತಿ ಅಧ್ಯಕ್ಷ ,ಶಾಸಕ ನೆಹರು ಓಲೇಕಾರ ಸ್ವಾಗತಿಸಿದರು,ಕಸಾಪ ಅಧ್ಯಕ್ಷ ಡಾ.ಮಹೇಶ ಜೋಶಿ ಆಶಯ ಮಾತುಗಳನ್ನಾಡಿದರು.

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಇಂದಿನ ಪ್ರಮುಖ ಸುದ್ದಿ :-   ಅಂಬಲಿ ಹಳಸೀತು ಕಂಬಳಿ ಬೀಸಿತಲೇ ಪರಾಕ್’; ಕಾರಣಿಕ ವಾಣಿ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

4 / 5. ಒಟ್ಟು ವೋಟುಗಳು 1

ನಿಮ್ಮ ಕಾಮೆಂಟ್ ಬರೆಯಿರಿ

advertisement