ದೆಹಲಿಯಲ್ಲಿ ಭೀಕರ ಚಳಿ, ಜನವರಿ 15ರ ವರೆಗೆ ಖಾಸಗಿ ಶಾಲೆಗಳಿಗೆ ರಜೆ ಘೋಷಣೆ

ನವದೆಹಲಿ: ಚಳಿಗೆದೆಹಲಿ ತತ್ತರಿಸಿ ಹೋಗಿದೆ. ಭಾನುವಾರ (ಜನವರಿ 8) ದೆಹಲಿಯ ಸಫ್ದರ್‍ಜಂಗ್‍ನಲ್ಲಿ ಕನಿಷ್ಠ ತಾಪಮಾನ 1.9 ಡಿಗ್ರಿ ಸೆಲ್ಸಿಯಸ್​ಗೆ ಕುಸಿದಿದೆ. ಈ ಹಿನ್ನೆಲೆಯಲ್ಲಿ ಜನವರಿ 15ರ ವರೆಗೆ ದೆಹಲಿಯಲ್ಲಿ ಎಲ್ಲಾ ಖಾಸಗಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಈ ಬಗ್ಗೆ ದೆಹಲಿ ಸರ್ಕಾರದ ಸೂಚನೆಯಂತೆ ಶಿಕ್ಷಣ ನಿರ್ದೇಶನಾಲಯ ಸುತ್ತೋಲೆ ಹೊರಡಿಸಿದೆ.
9ನೇ ತರಗತಿಯಿಂದ 12ನೇ ತರಗತಿಯ ವಿದ್ಯಾರ್ಥಿಗಳಿಗೆ ಪರ್ಯಾಯ ತರಗತಿಗಳು ನಡೆಯಲಿವೆ ಎಂದು ದೆಹಲಿ ಶಿಕ್ಷಣ ನಿರ್ದೇಶನಾಲಯ ತಿಳಿಸಿದೆ.
ಭಾನುವಾರ ಬೆಳಗ್ಗೆ ದೆಹಲಿ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ದಟ್ಟವಾದ ಮಂಜು ಆವರಿಸಿರುವುದರಿಂದ ಜನ ತೀವ್ರ ಚಳಿಯಿಂದ ತತ್ತರಿಸಿ ಹೋಗಿದ್ದಾರೆ. ಮನೆಯಿಂದ ಯಾರೂ ಹೊರಬರುತ್ತಿಲ್ಲ. ಪ್ರತಿಕೂಲ ಹವಾಮಾನ ಮತ್ತು ಇತರ ಕಾರ್ಯಾಚರಣೆಯ ಸಮಸ್ಯೆಗಳಿಂದಾಗಿ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಸುಮಾರು 20 ವಿಮಾನಗಳ ಹಾರಾಟದಲ್ಲಿ ವ್ಯತ್ಯವಾಗಿತ್ತು,
ಅಲ್ಲದೆ, ಮಂಜು ಕವಿದ ವಾತಾವರಣದಿಂದಾಗಿ 42 ರೈಲುಗಳು ಸಂಚಾರದಲ್ಲೂ ವ್ಯತ್ಯಯವಾಗಿದೆ ಎಂದು ಉತ್ತರ ರೈಲ್ವೆ ವಕ್ತಾರರು ತಿಳಿಸಿದ್ದಾರೆ. ಚಳಿ ಹೆಚ್ಚಾಗುತ್ತಲೆ ಇದ್ದು ಇನ್ನು ಎರಡು ದಿನಗಳವರೆಗೆ ಪರಿಸ್ಥಿತಿ ವಿಕೋಪಕ್ಕೆ ತೆರಳುವ ಸಾಧ್ಯತೆ ಇರುವುದರಿಂದ ಜನ ಎಚ್ಚರವಹಿಸಬೇಕು ಎಂದು ಸರ್ಕಾರ ಮನವಿ ಮಾಡಿಕೊಂಡಿದೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಇಂದಿನ ಪ್ರಮುಖ ಸುದ್ದಿ :-   ಭಾರತದಲ್ಲಿ ಪಾಕಿಸ್ತಾನ ಸರ್ಕಾರದ ಟ್ವಿಟರ್ ಹ್ಯಾಂಡಲ್ ತಡೆಹಿಡಿದ ಸರ್ಕಾರ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

5 / 5. ಒಟ್ಟು ವೋಟುಗಳು 1

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement