ಕೋಲಾರದಿಂದ ಸ್ಪರ್ಧಿಸುತ್ತೇನೆ : ಸಿದ್ದರಾಮಯ್ಯ ಘೋಷಣೆ

posted in: ರಾಜ್ಯ | 0

ಕೋಲಾರ: ವಿಧಾನಸಭಾ ಚುನಾವಣೆಯಲ್ಲಿ ಕೋಲಾರದಿಂದಲೇ ನಾನು ಸ್ಪರ್ಧಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.
ಸೋಮವಾರ ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ನನಗೆ ಯಾವುದೇ ಕ್ಷೇತ್ರ ಇಲ್ಲ, ಇನ್ನು ಕೂಡಾ ಕ್ಷೇತ್ರಕ್ಕಾಗಿ ಹುಡುಕಾಟ ಮಾಡುತ್ತಿರುವುದಾಗಿ ಹೇಳಿ ವ್ಯಂಗ್ಯ ಮಾಡುತ್ತಿದ್ದಾರೆ. ಆದರೆ ನನಗೆ ವರುಣಾ ಕ್ಷೇತ್ರದಲ್ಲಿ ಬೇಡಿಕೆ ಇದ್ದರೂ ಕೋಲಾರದಲ್ಲಿ ಶಾಸಕ ಶ್ರೀನಿವಾಸ್ ಗೌಡ ಕ್ಷೇತ್ರ ಬಿಟ್ಟುಕೊಡಲು ತಯಾರಿದ್ದಾರೆ. ಹೀಗಾಗಿ ನಾನು ಇಲ್ಲಿಂದ ಸ್ಪರ್ಧಿಸಲು ನಿರ್ಧರಿಸಿದ್ದೇನೆ. ಆದರೆ ಪಕ್ಷದ ನಿರ್ಧಾರ ಅಂತಿಮ ಎಂದು ತಿಳಿಸಿದ್ದಾರೆ.
ನೀವು ಯಾವುದೇ ಕಾರಣಕ್ಕೂ ಸಂಶಯ ಪಡಬೇಡಿ. ಸಿದ್ದರಾಮಯ್ಯ ಬರುವುದಿಲ್ಲ, ಜನರ ಕಷ್ಟ ಸುಖ ಕೇಳುವುದಿಲ್ಲ. ಸಿದ್ದರಾಮಯ್ಯ ಹೊರಗಿನವರು ಎಂದು ಅಪಪ್ರಚಾರ ಮಾಡ್ತಾರೆ. ಆದರೆ ಈಗ ಮಾತು ಕೊಡುತ್ತೇನೆ, ಪ್ರತಿ ವಾರ ಕ್ಷೇತ್ರಕ್ಕೆ ಭೇಟಿ ನೀಡುತ್ತೇನೆ. ಸಾಮಾನ್ಯರಲ್ಲಿ ಸಾಮಾನ್ಯ ವ್ಯಕ್ತಿ ಕೂಡ ನನ್ನನ್ನು ಭೇಟಿ ಮಾಡಬಹುದು ಎಂದು ಹೇಳಿದ್ದಾರೆ.
ಕಳೆದ ಬಾರಿ ಜಯಗಳಿಸಿದ್ದ ಬಾದಾಮಿ , ಪುತ್ರ ಡಾ.ಯತೀಂದ್ರ ಜಯಗಳಿಸಿರುವ ವರುಣ ಮತ್ತು ಕೋಲಾರ ಪೈಕಿ ಯಾವ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಸ್ಪರ್ಧಿಸುತ್ತಾರೆ ಎನ್ನುವ ಕುತೂಹಲ ಇತ್ತು. ಈಗ ಸಿದ್ದರಾಮಯ್ಯ ವರುಣಾವನ್ನು ಪುತ್ರನಿಗೆ ತ್ಯಾಗ ಮಾಡಿ ಮೊದಲ ಬಾರಿಗೆ ಕೋಲಾರದಲ್ಲಿ ಸ್ಪರ್ಧಿಸಲು ಮುಂದಾಗಿದ್ದಾರೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಇಂದಿನ ಪ್ರಮುಖ ಸುದ್ದಿ :-   ಇಂದು ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

2.5 / 5. ಒಟ್ಟು ವೋಟುಗಳು 2

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement