ಸಿದ್ದು ನಿಜ ಕನಸುಗಳು ಪುಸ್ತಕ ಬಿಡುಗಡೆಗೆ ಮಧ್ಯಂತರ ತಡೆಯಾಜ್ಞೆ ನೀಡಿದ ಕೋರ್ಟ್

posted in: ರಾಜ್ಯ | 0

ಬೆಂಗಳೂರು: ಸಿದ್ದು ನಿಜ ಕನಸುಗಳು” ಪುಸ್ತಕ ಬಿಡುಗಡೆಗೆ ಸಿಟಿ ಸಿವಿಲ್ ಕೋರ್ಟ್ ಮಧ್ಯಂತರ ತಡೆ ನೀಡಿದೆ. ”
ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ವಿಪಕ್ಷ ನಾಯಕ ಸಿದ್ದರಾಮಯ್ಯರನ್ನು (Siddaramaiah) ಗುರಿಯಾಗಿಸಿಕೊಂಡು ‘ಸಿದ್ದು ನಿಜ ಕನಸುಗಳು’ ಪುಸ್ತಕ ಬಿಡುಗಡೆ ಮಾಡಲು ಬಿಜೆಪಿ ಮುಂದಾಗಿತ್ತು. ಆದರೆ ಬಿಜೆಪಿಯ ‘ಸಿದ್ದು ನಿಜ ಕನಸುಗಳು’ ಪುಸ್ತಕ ಬಿಡುಗಡೆಗೆ ಬೆಂಗಳೂರಿನ 60ನೇ ಸಿಸಿಹೆಚ್​ ನ್ಯಾಯಾಲಯ ಮಧ್ಯಂತರ ತಡೆಯಾಜ್ಞೆ ನೀಡಿದೆ. ಅಲ್ಲದೆ, ಸಚಿವ ಡಾ.ಅಶ್ವತ್ಥ ನಾರಾಯಣ ಮತ್ತಿತರರಿಗೆ ಕೋರ್ಟ್ ನೋಟಿಸ್ ನೀಡಿದೆ.
ಪುಸ್ತಕ ಬಿಡುಗಡೆಗೆ ತಡೆ ಕೋರಿ ಸಿದ್ದರಾಮಯ್ಯ ಅವರ ಪುತ್ರ, ವರುಣಾ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಕೋರ್ಟ್ ಮಧ್ಯಂತರ​ ತಡೆಯಾಜ್ಞೆ ಹಿನ್ನೆಲೆಯಲ್ಲಿಬೆಂಗಳೂರಿನ ಟೌನ್​ಹಾಲ್​ನಲ್ಲಿ ಸಿನಾಗ್ ಬುಕ್ಸ್ ಆಯೋಜಿಸಿದ್ದ ‘ಸಿದ್ದು ನಿಜ ಕನಸುಗಳು’ ಪುಸ್ತಕ ಬಿಡುಗಡೆ ಕಾರ್ಯಕ್ರಮ ಪುಸ್ತಕ ಬಿಡುಗಡೆ ಕಾರ್ಯಕ್ರಮವನ್ನು ಆಯೋಜಕರು ರದ್ದು ಮಾಡಿದ್ದಾರೆ.
ಈ ಸಂಬಂಧ ಡಾ. ಯತೀಂದ್ರ ಸಿದ್ದರಾಮಯ್ಯ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ನಗರದ 60ನೇ ಸಿಸಿಹೆಚ್ ನ್ಯಾಯಾಲಯ ಪುಸ್ತಕ ಬಿಡುಗಡೆಗೆ ಮಧ್ಯಂತರ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದೆ. ಪ್ರತಿವಾದಿಗಳಾಗಿಸಿದ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಮತ್ತಿತರರಿಗೆ ನೋಟಿಸ್ ಜಾರಿಗೊಳಿಸಿದೆ.
“ಸಿದ್ದು ನಿಜ ಕನಸುಗಳು ಪುಸ್ತಕವನ್ನು ಇಂದು, ಮಂಗಳವಾರ ನಗರದ ಟೌನ್ ಹಾಲ್ ನಲ್ಲಿ ಬಿಡುಗಡೆ ಮಾಡಲು ಬಿಜೆಪಿ ಸಿದ್ಧತೆ ನಡೆಸಿತ್ತು. ಇದಕ್ಕೆ ಕಾಂಗ್ರೆಸ್ ತೀವ್ರ ವಿರೋಧ ವ್ಯಕ್ತಪಡಿಸಿತ್ತು. ಆದರೆ ಈಗ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಕಾರ್ಯಕ್ರಮ ರದ್ದುಗೊಳಿಸುವಂತೆ ಆಯೋಜಕರಿಗೆ ಸಚಿವ ಡಾ. ಅಶ್ವತ್ಥನಾರಾಯಣ ಸೂಚಿಸಿದ ನಂತರ ಆಯೋಜಕರು ಕಾರ್ಯಕ್ರಮ ರದ್ದುಗೊಳಿಸಿದ್ದಾರೆ.

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಇಂದಿನ ಪ್ರಮುಖ ಸುದ್ದಿ :-   ಅಂಬಲಿ ಹಳಸೀತು ಕಂಬಳಿ ಬೀಸಿತಲೇ ಪರಾಕ್’; ಕಾರಣಿಕ ವಾಣಿ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

2 / 5. ಒಟ್ಟು ವೋಟುಗಳು 1

ನಿಮ್ಮ ಕಾಮೆಂಟ್ ಬರೆಯಿರಿ

advertisement