ನಿರ್ಮಾಣ ಹಂತದ ಕಟ್ಟಡದ ನೀರಿನ ಸಂಪಿಗೆ ಬಿದ್ದು ಇಬ್ಬರು ಪುಟಾಣಿಗಳು ಸಾವು

posted in: ರಾಜ್ಯ | 0

ಬೆಳಗಾವಿ: ಸವದತ್ತಿ ನಗರದ ಗುರ್ಲಹೊಸೂರ ವಾರ್ಡಿನಲ್ಲಿ ಭೀಕರ ದುರಂತ ಸಂಭವಿಸಿದೆ. ನಿರ್ಮಾಣ ಹಂತದಲ್ಲಿರುವ ಕಟ್ಟಡದ ನೀರಿನ ಸಂಪಿಗೆ ಬಿದ್ದು ಎರಡು ಮಕ್ಕಳು ಮೃತಪಟ್ಟಿದ್ದಾರೆ. ಎರಡು ಮಕ್ಕಳು ನಾಲ್ಕು ವರ್ಷದವರಾಗಿದ್ದಾರೆ.
ಆಟವಾಡಲು ಹೋಗಿದ್ದ ಇಬ್ಬರು ಬಾಲಕರು ನಿರ್ಮಾಣ ಹಂತದಲ್ಲಿರುವ ಕಟ್ಟಡವೊಂದರ ಸಂಪ್‌ನಲ್ಲಿ ಆಕಸ್ಮಿಕವಾಗಿ ಬಿದ್ದು ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.
ಮೃತ ಮಕ್ಕಳನ್ನು ಶ್ಲೋಕ ಶಂಭುಲಿಂಗಪ್ಪ ಗುಡಿ (4) ಮತ್ತು ಚಿದಾನಂದ ಪ್ರಕಾಶ ಸಾಲುಂಕೆ (4) ಎಂದು ಗುರುತಿಸಲಾಗಿದೆ. ಆಟವಾಡುತ್ತ ಗುರ್ಲಹೊಸೂರ ಗ್ರಾಮದಲ್ಲಿ ನಿರ್ಮಾಣವಾಗುತ್ತಿದ್ದ ಕಟ್ಟಡ ಏರಿದ್ದ ಈ ಮಕ್ಕಳು ಕಾಲು ಜಾರಿ ನೀರು ತುಂಬಿರುವ ಸಂಪ್​ನಲ್ಲಿ ಬಿದ್ದಿದ್ದಾರೆ. ಘಟನಾ ಸ್ಥಳಕ್ಕೆ ಬಂದ ಸವದತ್ತಿ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮಕ್ಕಳು ಕಾಣದೇ ಇದ್ದಾಗ ಪೋಷಕರು ಹುಡುಕುತ್ತಾ ಬಂದಿದ್ದಾರೆ. ಕೊನೆಗೆ ಸಂಪ್​ ಗಮನಿಸಿದಾಗ ಮಕ್ಕಳು ಶವ ಪತ್ತೆಯಾಗಿದೆ. ಮಕ್ಕಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

ಇಂದಿನ ಪ್ರಮುಖ ಸುದ್ದಿ :-   ಯಾವುದೇ ಸಮಯದಲ್ಲಿ ಕರ್ನಾಟಕ ವಿಧಾನಸಭೆಗೆ ಚುನಾವಣೆ ಘೋಷಣೆ ಸಾಧ್ಯತೆ: ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿಗಳಿಗೆ ಚುನಾವಣಾ ಆಯೋಗದ ಸೂಚನೆ

3 / 5. ಒಟ್ಟು ವೋಟುಗಳು 1

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement