ಬೆಂಗಳೂರು: ಬೆಂಗಳೂರಿನ ನಾಗವಾರ ಬಳಿ ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ಮಂಗಳವಾರ ಕುಸಿದುಬಿದ್ದಿದ್ದು, ಅದರ ಕೆಳಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ತಾಯಿ ಹಾಗೂ ಮಗು ಮೃತಪಟ್ಟಿದ್ದಾರೆಂದು ವರದಿಯಾಗಿದೆ.
ಮೃತರನ್ನು ತೇಜಸ್ವಿನಿ (35) ಹಾಗೂ ವಿಹಾನ್ (2 ವರ್ಷ 6 ತಿಂಗಳು) ಎಂದು ಗುರುತಿಸಲಾಗಿದೆ. ನಾಗವಾರ ರಿಂಗ್ ರೋಡ್‍ನ ಎಚ್‍ಬಿಆರ್ ಲೇಔಟ್ ಬಳಿ ಮೆಟ್ರೋ ಕಾಮಗಾರಿ ನಡೆಯುತ್ತಿತ್ತು. ಕಾಮಗಾರಿ ವೇಳೆ ಪಿಲ್ಲರ್‌ಗೆ ನಿಲ್ಲಿಸಿದಂತಹ ರಾಡ್‌ಗಳು ಏಕಾಏಕಿ ರಸ್ತೆಗೆ ಕುಸಿದು ಬಿದ್ದಿದೆ. ಬೆಂಗಳೂರಿನ ನಾಗವಾರ ಪ್ರದೇಶದಲ್ಲಿ ಇಂದು, ಮಂಗಳವಾರ ಬೆಳಗ್ಗೆ ನಿರ್ಮಾಣ ಹಂತದ ಮೆಟ್ರೋ ಕುಸಿದು ಒಂದೇ ಕುಟುಂಬದ ನಾಲ್ವರು ಗಾಯಗೊಂಡಿದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತಾಯಿ ಮಗು ತೇಜಸ್ವಿನಿ ಹಾಗೂ ಎರಡೂವರೆ ವರ್ಷದ ಮಗ ವಿಹಾನ್ ಮೃತಪಟ್ಟಿದ್ದಾರೆ. ಗಾಯಗೊಂಡಿರುವ ಮಗಳು ಮತ್ತು ತಂದೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155
ಗಂಭೀರವಾಗಿ ಗಾಯಗೊಂಡಿದ್ದ ತಾಯಿ ಹಾಗೂ ಮಗನನ್ನು ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಬ್ಬರೂ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ತಂದೆ ಹಾಗೂ ಮಗಳು ಪ್ರಾಣಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಪೊಲೀಸರು ಹಾಗೂ ಸಿಬ್ಬಂದಿಗಳು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.
ಸಿಲ್ಕ್ ಬೋರ್ಡ್‌ನಿಂದ ಏರ್ಪೋರ್ಟ್ ವರೆಗಿನ ನಿರ್ಮಾಣ ಹಂತದ ಮೆಟ್ರೋ ಮಾರ್ಗದಲ್ಲಿ ಮೆಟ್ರೋ ಪಿಲ್ಲರ್ ನಿರ್ಮಾಣಕ್ಕೆ ಕಬ್ಬಿಣದ ರಾಡ್‌ಗಳನ್ನು ನಿಲ್ಲಿಸಲಾಗಿತ್ತು. ಈ ಪಿಲ್ಲರ್ ರಾಡ್‌ಗಳು ಕುಸಿದ ಸಮಯದಲ್ಲಿ ಕೆಆರ್ ಪುರಂನಿಂದ ಹೆಬ್ಬಾಳಕ್ಕೆ ದಂಪತಿ ತಮ್ಮ ಇಬ್ಬರು ಪುಟ್ಟ ಮಕ್ಕಳ ಜೊತೆ ಬೈಕ್‌ನಲ್ಲಿ ಹೋಗುತ್ತಿದ್ದರು. ಈ ಕುಟುಂಬದ ಮೇಲೆ ಪಿಲ್ಲರ್ ರಾಡ್‌ಗಳು ಬಿದ್ದು ದುರ್ಘಟನೆ ಸಂಭವಿಸಿದೆ.
ಮೃತಪಟ್ಟ ತಾಯಿ ಹಾಗೂ ಎರಡು ವರ್ಷದ ಮಗುವಿನ ಕುಟುಂಬಸ್ಥರಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ತಲಾ 10 ಲಕ್ಷ ರೂಪಾಯಿ ಹಾಗೂ ಬಿಎಂಆರ್‌ಸಿಎಲ್‌ನಿಂದ 20 ಲಕ್ಷ ರೂ. ಪರಿಹಾರವನ್ನು ಪ್ರಕಟಿಸಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ