ಧಾರವಾಡ: ರಾಷ್ಟ್ರೀಯ ಯುವಜನೋತ್ಸವ ಉದ್ಘಾಟನೆ ಕಾರ್ಯಕ್ರಮ ಹುಬ್ಬಳ್ಳಿ ನಗರದ ರೈಲ್ವೆ ಮೈದಾನದಲ್ಲಿ ಜನವರಿ 12ರಂದು ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮ ಉದ್ಘಾಟನೆಗೆ ಆಗಮಿಸುತ್ತಿದ್ದಾರೆ.
ಈ ವೇಳೆ ಜನದಟ್ಟಣೆ ಹೆಚ್ಚಾಗುತ್ತದೆ. ಈ ಹಿನ್ನೆಲೆಯಲ್ಲಿ ಶಾಲಾ ಮಕ್ಕಳಿಗೆ ತೊಂದರೆ ಆಗದಂತೆ ಮುಂಜಾಗ್ರತಾ ಕ್ರಮವಾಗಿ ಹುಬ್ಬಳ್ಳಿ ನಗರದ 1 ರಿಂದ 10 ನೇ ತರಗತಿ ವರೆಗಿನ ಎಲ್ಲ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಜನವರಿ 12ರ ಗುರುವಾರ ಮಾತ್ರ ಒಂದು ದಿನ ರಜೆ ಘೋಸಲಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಜಿಲ್ಲೆಯ ಪದವಿ ಪೂರ್ವ ಮತ್ತು ಪದವಿ ಕಾಲೇಜುಗಳಿಗೆ ಯಾವುದೇ ರಜೆ ನೀಡಿಲ್ಲ, ಎಂದಿನಂತೆ ಪಿಯುಸಿ ಮತ್ತು ಪದವಿ ಕಾಲೇಜುಗಳ ತರಗತಿಗಳು ನಡೆಯುತ್ತವೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
advertisement
ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು
ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189
ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ | |
ಟೆಲಿಗ್ರಾಮ್ ಚಾನೆಲ್ ಸೇರಿ | |
ಫೇಸ್ ಬುಕ್ ಫಾಲೋ ಮಾಡಿ | |
ಗೂಗಲ್ ನ್ಯೂಸ್ ನಲ್ಲಿ ಸೇರಿ | |
ಟ್ವಿಟರ್ ನಲ್ಲಿ ಫಾಲೋ ಮಾಡಿ |
ನಿಮ್ಮ ಕಾಮೆಂಟ್ ಬರೆಯಿರಿ