ಬೆಳಗಾವಿಯಲ್ಲಿ ಕಾಂಗ್ರೆಸ್‌ ಪ್ರಜಾಧ್ವನಿ ಯಾತ್ರೆಗೆ ಚಾಲನೆ: ರಾಜ್ಯದ ಪ್ರತಿ ಮನೆಗೂ 200 ಯುನಿಟ್ ಉಚಿತ ವಿದ್ಯುತ್ ನೀಡುವ ಭರವಸೆ

posted in: ರಾಜ್ಯ | 0

ಬೆಳಗಾವಿ: ಕರ್ನಾಟಕದಲ್ಲಿ ಕಾಂಗ್ರೆಸ್ ತನ್ನ ಬಸ್ ಯಾತ್ರೆ ‘ಪ್ರಜಾಧ್ವನಿ’ಗೆ ಇಂದು ಬುಧವಾರ ಬೆಳಗಾವಿಯಿಂದ ಚಾಲನೆ ನೀಡಿದ್ದು, ರಾಜ್ಯದ ಮನೆಗಳಿಗೆ 200 ಯೂನಿಟ್ ಉಚಿತ ವಿದ್ಯುತ್ ನೀಡುವುದಾಗಿ ಭರವಸೆ ನೀಡಿದೆ.
ಕರ್ನಾಟಕದಲ್ಲಿ ಬಿಜೆಪಿ ಸರ್ಕಾರದ ವೈಫಲ್ಯಗಳನ್ನು ಬಹಿರಂಗಪಡಿಸುವ ಮತ್ತು 2023 ರ ವಿಧಾನಸಭಾ ಚುನಾವಣೆಯಲ್ಲಿ ಅಧಿಕಾರಕ್ಕೆ ಬರುವ ಅಭಿಯಾನದ ಭಾಗವಾಗಿ, ಹಿರಿಯ ಕಾಂಗ್ರೆಸ್ ನಾಯಕರು ಬಸ್‌ನಲ್ಲಿ ಪ್ರಯಾಣಿಸಲಿದ್ದಾರೆ ಮತ್ತು 20 ಜಿಲ್ಲೆಗಳಲ್ಲಿ ಸಂಚರಿಸಲಿದ್ದಾರೆ.
ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಯೋಜನೆಯನ್ನು ಅಳವಡಿಸಿಕೊಂಡ ಕಾಂಗ್ರೆಸ್, 2023 ರಲ್ಲಿ ಅಧಿಕಾರಕ್ಕೆ ಬಂದಾಗ ಕರ್ನಾಟಕದ ಪ್ರತಿ ಮನೆಗೆ ಪ್ರತಿ ತಿಂಗಳು 200 ಯೂನಿಟ್ ಉಚಿತ ವಿದ್ಯುತ್ ನೀಡುವುದಾಗಿ ಘೋಷಿಸಿತು.
ಕಾರ್ಯಕ್ರಮಕ್ಕೆ ‘ಗೃಹ ಜ್ಯೋತಿ ಯೋಜನೆ’ ಎಂದು ನಾಮಕರಣ ಮಾಡಿದ ಕಾಂಗ್ರೆಸ್ ನಾಯಕರು, ಅಗತ್ಯ ವಸ್ತುಗಳ ಬೆಲೆ ಏರಿಕೆ ಮತ್ತು ನಿರುದ್ಯೋಗ ಸಮಸ್ಯೆಯ ಸಂದರ್ಭದಲ್ಲಿ ಕರ್ನಾಟಕವು ಸಾರ್ವಜನಿಕ ಕಲ್ಯಾಣ ಮತ್ತು ಯೋಗಕ್ಷೇಮದ ಬಗ್ಗೆ ಯೋಚಿಸುವ ಸರ್ಕಾರಕ್ಕೆ ಬೆಂಬಲಿಸಬೇಕು ಎಂದು ಜನರಿಗೆ ಮನವಿ ಮಾಡಿದರು.
ಒಗ್ಗಟ್ಟಿನ ಪ್ರದರ್ಶನದಲ್ಲಿ ಎಐಸಿಸಿ ರಾಜ್ಯ ಉಸ್ತುವಾರಿ ರಣದೀಪ ಸುರ್ಜೇವಾಲಾ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ, ವಿಧಾನಸಭೆ ವಿಪಕ್ಷದ ನಾಯಕ ಸಿದ್ದರಾಮಯ್ಯ ವೀರಸೌಧದ ಸ್ಮಾರಕದಿಂದ ಹೊರಟ ಬಸ್ ಯಾತ್ರೆಯಲ್ಲಿ ಪಾಲ್ಗೊಂಡಿದ್ದರು. ಈ ಕಾರ್ಯಕ್ರಮವು 1924 ರಲ್ಲಿ ಇಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಸ್ಥಳದಿಂದಲೇ ಹೊರಟಿತು.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಇಂದಿನ ಪ್ರಮುಖ ಸುದ್ದಿ :-   ಚುನಾವಣಾ ಅಕ್ರಮ: ಜೆಡಿಎಸ್‌ ಶಾಸಕ ಗೌರಿಶಂಕರ ಆಯ್ಕೆ ಅಸಿಂಧುಗೊಳಿಸಿದ ಹೈಕೋರ್ಟ್‌

ಈ ವರ್ಷದ ಮೊದಲಾರ್ಧದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಕರ್ನಾಟಕದಲ್ಲಿ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ ರಾಜ್ಯದ ಕಾಂಗ್ರೆಸ್ ನಾಯಕರು ತಮ್ಮ ಹೋರಾಟವನ್ನು ತೀವ್ರಗೊಳಿಸಿದ್ದಾರೆ.
ಬಿಜೆಪಿ ಸರ್ಕಾರ ತನ್ನ ಮೂರೂವರೆ ವರ್ಷಗಳ ಅಧಿಕಾರಾವಧಿಯಲ್ಲಿ ಕರ್ನಾಟಕದ ಇಮೇಜ್ ಅನ್ನು ಹಾಳು ಮಾಡಿದೆ. ಈ ಸರ್ಕಾರವನ್ನು ಕಿತ್ತೊಗೆಯಲು ಸಹಾಯ ಮಾಡುವಂತೆ ನಾವು ಜನರಲ್ಲಿ ಕೇಳುತ್ತಿದ್ದೇವೆ ಎಂದು ಡಿ.ಕೆ. ಶಿವಕುಮಾರ ಹೇಳಿದರು.

ಕಾಂಗ್ರೆಸ್‌ನ ಬಸ್ ಯಾತ್ರೆಯು ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆಯ ಭಾಗವಾಗಿ ಕರ್ನಾಟಕದ ಮೂಲಕ ಇತ್ತೀಚಿನ ಪಾದಯಾತ್ರೆಯ ನೆರಳಿನಲ್ಲೇ ಬಂದಿದೆ.
ಬಿಜೆಪಿ ಸರ್ಕಾರದ ತಪ್ಪುಗಳನ್ನು ಹಾಗೂ ಭ್ರಷ್ಟಾಚಾರಗಳನ್ನು ಬಯಲಿಗೆಳೆಯುವ ಉದ್ದೇಶವನ್ನು ಈ ರ್ಯಾಲಿ ಹೊಂದಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ. ಕೇಂದ್ರ ಮತ್ತು ರಾಜ್ಯದಲ್ಲಿನ ಬಿಜೆಪಿ ಸರ್ಕಾರಗಳ ಬಗ್ಗೆ ಜನರು ಅತೃಪ್ತರಾಗಿದ್ದಾರೆ. ನಾವು ಅವರ ಭಾವನೆಗಳಿಗೆ ಮಾತ್ರ ಧ್ವನಿ ನೀಡುತ್ತೇವೆ ಎಂದು ಅವರು ಹೇಳಿದರು.
ರ್ಯಾಲಿ ಚಿಕ್ಕೋಡಿ ಮೂಲಕ ಸಂಚರಿಸಲಿದ್ದು, ಸಂಜೆ ಬೆಳಗಾವಿಗೆ ಮರಳಲಿದೆ. ಬಳಿಕ ಬುಧವಾರ ರಾತ್ರಿಯೇ ಬಸ್‌ಗಳು ಇತರೆ ಜಿಲ್ಲೆಗಳಿಗೆ ತೆರಳಲಿವೆ.

ಇಂದಿನ ಪ್ರಮುಖ ಸುದ್ದಿ :-   ಹಿರಿಯ ನಟ ಶರತ್ ಬಾಬು ಆಸ್ಪತ್ರೆಗೆ ದಾಖಲು

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

4 / 5. ಒಟ್ಟು ವೋಟುಗಳು 1

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement