ಫೆಬ್ರವರಿ 4ರಿಂದ ಹುಬ್ಬಳ್ಳಿಯಿಂದ ಪುಣೆಗೆ ನೇರ ವಿಮಾನ ಸೇವೆ ಆರಂಭ

ಹುಬ್ಬಳ್ಳಿ : ಫೆಬ್ರವರಿ 4ರಿಂದ ಹುಬ್ಬಳ್ಳಿಯಿಂದ ಪುಣೆಗೆ ನೇರ ವಿಮಾನ ಸೇವೆ ಆರಂಭವಾಗಲಿದೆ. ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಇಂದು, ಬುಧವಾರ ಇಂಡಿಗೋ ಅಧಿಕಾರಿಗಳೊಂದಿಗೆ ಈ ಸೇವೆ ಆರಂಭಿಸುವ ಕುರಿತು ಚರ್ಚೆ ನಡೆಸಿದ ನಂತರ ಈ ನಿರ್ಣಯ ಕೈಗೊಳ್ಳಲಾಗಿದೆ.
ವಾರಕ್ಕೆ ಎರಡು ಬಾರಿ ಈ ಸೇವೆ ಲಭ್ಯವಿರಲಿದ್ದು, ಪ್ರತಿ ಶನಿವಾರ ಹಾಗೂ ಭಾನುವಾರ ಈ ಕೆಳಗಿನಂತೆ ವಿಮಾನ ಹಾರಾಟ ನಡೆಸಲಿವೆ.
6E 7727 HBX PNQ 18:30 19:40 (Sat, Sun)
6E 7716 PNQ HBX 20:00 21:10(Sat, Sun)
ಸಚಿವ ಜೋಶಿಯವರು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧ್ಯಾ ಅವರಿಗೆ ಧನ್ಯವಾದ ತಿಳಿಸಿದ್ದಾರೆ. ಈ ಸೇವೆಯಿಂದ ಹುಬ್ಬಳ್ಳಿ – ಧಾರವಾಡದಿಂದ ಪುಣೆಗೆ ಪ್ರಯಾಣಿಸುವ ಪ್ರಯಾಣಿಕರಿಗೆ ಸಾಕಷ್ಟು ಅನುಕೂಲವಾಗಲಿದೆ ಎಂದು ಅವರು ಹೇಳಿದ್ದಾರೆ.

4 / 5. 3

ನಿಮ್ಮ ಕಾಮೆಂಟ್ ಬರೆಯಿರಿ

advertisement