ಮಂಗಳೂರಿನಲ್ಲಿ ಗಾಂಜಾ ದಂಧೆ ; ಎಂಬಿಬಿಎಸ್ ವಿದ್ಯಾರ್ಥಿಗಳು, ವೈದ್ಯರು ಸೇರಿ 10 ಮಂದಿ ಬಂಧನ

ಮಂಗಳೂರು: ನಗರದಲ್ಲಿ ಗಾಂಜಾ ದಂಧೆ ಆರೋಪದ ಮೇರೆಗೆ 9 ಎಂಬಿಬಿಎಸ್ ವಿದ್ಯಾರ್ಥಿಗಳು ಸೇರಿದಂತೆ ಹತ್ತು ಮಂದಿಯನ್ನು ಬುಧವಾರ (ಜನವರಿ 11) ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಐವರು ಯುವಕರು ಮತ್ತು ನಾಲ್ವರು ಯುವತಿಯರನ್ನು ಬಂಧಿಸಲಾಗಿದ್ದು, ಅದರಲ್ಲಿ ಒಬ್ಬರು ತಮಿಳುನಾಡು ಮತ್ತು ಆಂಧ್ರಪ್ರದೇಶದವರು, ಇಬ್ಬರು ಕೇರಳ, ಪಂಜಾಬ್ ಮತ್ತು ದೆಹಲಿಯಿಂದ ಬಂದವರಾಗಿದ್ದು, ಒಬ್ಬರು ಸ್ಥಳೀಯರಾಗಿದ್ದಾರೆ.
ಬಂಧಿತ ಒಂಬತ್ತು ಮಂದಿಯಲ್ಲಿ ವೈದ್ಯ ವಿದ್ಯಾರ್ಥಿಗಳು, ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕಾಲೇಜುಗಳ ವೈದ್ಯರು ಇದ್ದಾರೆ. ನಾಲ್ವರು ಯುವತಿಯರು ಎಂಬಿಬಿಎಸ್ ಮತ್ತು ಬಿಡಿಎಸ್ ಅಂತಿಮ ವರ್ಷ ವ್ಯಾಸಂಗ ಮಾಡುತ್ತಿದ್ದು, ಐವರು ಪುರುಷರಲ್ಲಿ ಇಬ್ಬರು ವೈದ್ಯಕೀಯ ಅಧಿಕಾರಿಗಳು ಮತ್ತು ಮೂವರು ಎಂಬಿಬಿಎಸ್ ಮತ್ತು ಬಿಡಿಎಸ್ ಓದುತ್ತಿರುವ ವಿದ್ಯಾರ್ಥಿಗಳು.
ಇದಕ್ಕೂ ಮೊದಲು ಜನವರಿ 8 ರಂದು ನೀಲ್ ಕಿಶೋರಿಲಾಲ ರಾಮಜಿ ಶಾ (35) ಎಂಬ ಆರೋಪಿಯನ್ನು ಹಾಸ್ಟೆಲ್‌ನಿಂದ ಬಂಧಿಸಲಾಗಿದ್ದು, ಆತ ತನ್ನ ಫ್ಲಾಟ್‌ನಲ್ಲಿ ಗಾಂಜಾವನ್ನು ಹೊಂದಿದ್ದು ಅದನ್ನು ಸ್ಥಳೀಯರು ಮತ್ತು ವಿದ್ಯಾರ್ಥಿಗಳಿಗೆ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ. ಆತನಿಂದ 50,000 ಮೌಲ್ಯದ 2 ಕೆಜಿ ಗಾಂಜಾ, ಎರಡು ಮೊಬೈಲ್ ಫೋನ್ ಮತ್ತು 7,000 ರೂ ನಗದು ಸೇರಿ 78,000 ರೂ. ವಶಪಡಿಸಿಕೊಂಡಿದ್ದರು.
ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ಮಾತನಾಡಿ, ನೀಲ್ ಕಿಶೋರಿಲಾಲ್ ರಾಮ್ ಜಿ ಶಾ ಎಂಬಾತನನ್ನು ಮೊದಲು ಬಂಧಿಸಲಾಗಿದ್ದು, ಈತ ಬ್ರಿಟನ್‌ ಪ್ರಜೆಯಾಗಿದ್ದು, ಎನ್ ಆರ್ ಐ ಕೋಟಾದಲ್ಲಿ ಡೆಂಟಲ್ ವಿದ್ಯಾರ್ಥಿಯಾಗಿದ್ದು ಕಳೆದ ಹದಿನೈದು ವರ್ಷಗಳಿಂದಲೂ ವಿದ್ಯಾಭ್ಯಾಸ ಮಾಡುತ್ತಿದ್ದು, ಆತನಿಗೆ ಶಿಕ್ಷಣ ಇನ್ನೂ ಪೂರ್ಣ ಗೊಳಿಸಲು ಸಾಧ್ಯವಾಗಿಲ್ಲ. ಗಾಂಜಾ ಪೆಡ್ಲರ್ ಆಗಿ ಕೆಲಸ ಮಾಡುತ್ತಿದ್ದ ಎಂದು ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಲೋಕಸಭಾ ಚುನಾವಣೆ 2024: ಕರ್ನಾಟಕದ 14 ಕ್ಷೇತ್ರಗಳಿಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭ

ಒಂಬತ್ತು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಅವರನ್ನು ಎರಡು ದಿನಗಳ ಪೊಲೀಸ್ ಕಸ್ಟಡಿಗೆ ಕಳುಹಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಬಂಧಿತರನ್ನು ಕೇರಳ ಮೂಲದ ಡಾ.ಸಮೀರ್ (32), ಕೇರಳದ ಡಾ.ನಾಡಿಯಾ ಸಿರಾಜ್ (24), ತಮಿಳುನಾಡಿನ ಡಾ.ಮಣಿಮಾರನ್ ಮುತ್ತು (28), ಆಂಧ್ರಪ್ರದೇಶದ ಡಾ.ವರ್ಷಿಣಿ ಪ್ರತಿ (26), ಡಾ.ಭಾನು ದಹಿಯಾ (27), ಚಂಡೀಗಢ, ಚಂಡೀಗಢದ ಡಾ. ರಿಯಾ ಚಡ್ಡಾ (22), ದೆಹಲಿಯ ಡಾ ಕ್ಷಿತಿಜ್ ಗುಪ್ತಾ (25), ಮಹಾರಾಷ್ಟ್ರದ ಡಾ ಇರಾ ಬೇಸಿನ್ (23), ನೀಲ್ ಕಿಶೋರಿಲಾಲ್ ರಾಮಜಿ ಶಾ ಮತ್ತು ಬಂಟ್ವಾಳದ ಮಾರಿಪಳ್ಳದ ಮೊಹಮ್ಮದ್ ರೌಫ್ ಗೌಸ್ (34) ಎಂದು ಗುರುತಿಸಲಾಗಿದೆ ಎಂದರು.
ಪೊಲೀಸ್ ಕಮಿಷನರ್ ಶಶಿಕುಮಾರ್ ಎನ್ ಐಪಿಎಸ್ ಅವರ ನಿರ್ದೇಶನದಂತೆ ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ಅಂಶುಕುಮಾರ್ ಮತ್ತು ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ದಿನೇಶ್ ಕುಮಾರ್ ಅವರ ಸಮರ್ಥ ಮಾರ್ಗದರ್ಶನದಲ್ಲಿ ಸಿಸಿಬಿ ಇನ್ಸ್ ಪೆಕ್ಟರ್ ಶ್ಯಾಮ್ ಸುಂದರ್ ಮತ್ತು ತಂಡದ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಯಿತು.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement