ಹೊಸಪೇಟೆ: ಕಲುಷಿತ ನೀರು ಸೇವಿಸಿ ಓರ್ವ ಮಹಿಳೆ ಸಾವು, ಹಲವರು ಅಸ್ವಸ್ಥ

ಹೊಸಪೇಟೆ (ವಿಜಯನಗರ): ನಗರದಲ್ಲಿ ಕಲುಷಿತ ನೀರಿನ ಸೇವನೆಯಿಂದ ಮಹಿಳೆಯೊಬ್ಬರು ಮಂಗಳವಾರ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ನಗರದ ರಾಣಿಪೇಟೆಯ 12ನೇ ಕ್ರಾಸ್‌ ನಿವಾಸಿ ಲಕ್ಷ್ಮಿದೇವಿ (50) ಮೃತ ಮಹಿಳೆಯಾಗಿದ್ದಾರೆ. 40 ಕ್ಕೂ ಹೆಚ್ಚು ಜನರು ಕಲುಷಿತ ನೀರು ಸೇವನೆಯಿಂದ ಅಸ್ವಸ್ಥರಾಗಿದ್ದಾರೆ ಎನ್ನಲಾಗಿದೆ. ಬಡಾವಣೆಯಲ್ಲಿ ಆರೋಗ್ಯ ಇಲಾಖೆಯವರು ಬೀಡು ಬಿಟ್ಟಿದ್ದು, ಜನರಿಗೆ ವಾಂತಿ, ಭೇದಿ ಪ್ರಕರಣಗಳು ನಿಲ್ಲುವ ಲಕ್ಷಣಗಳು ಕಂಡು ಬರುತ್ತಿಲ್ಲ.
ಹೊಸಪೇಟೆ ನಗರದ ರಾಣಿಪೇಟೆ, ಚಲುವಾದಿಕೇರಿ ಸೇರಿದಂತೆ ನಾನಾ ಕಡೆ ಕುಡಿವ ನೀರಿನ ಪೈಪ್ ಲೈನ್ ಕಾಮಗಾರಿ ನಡೆಯುತ್ತಿದೆ. ಇದರಿಂದ ನೀರು ಕಲುಷಿತಗೊಂಡಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. 40 ಕ್ಕೂ ಹೆಚ್ಚು ಜನರು ಕಲುಷಿತ ನೀರು ಕುಡಿದು ಅಸ್ವಸ್ಥರಾಗಿದ್ದಾರೆ ಎಂದು ಹೇಳಲಾಗಿದೆ. ಕಲುಷಿತ ನೀರು ಸೇವಿಸಿ ಅಸ್ವಸ್ಥರಾದವರು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದು ಮನೆಗಳಿಗೆ ತೆರಳಿದ್ದಾರೆ.

3.5 / 5. 2

ನಿಮ್ಮ ಕಾಮೆಂಟ್ ಬರೆಯಿರಿ

advertisement