ದೆಹಲಿ ವಿಮಾನ ನಿಲ್ದಾಣದಲ್ಲಿ ಫ್ಲೈಟ್ ಗೇಟ್‌ನಲ್ಲಿ ಸಾರ್ವಜನಿಕರೆದುರೇ ಮೂತ್ರ ಮಾಡಿದ ಸೌದಿ ಅರೇಬಿಯಾಕ್ಕೆ ಹೊರಟಿದ್ದ ವ್ಯಕ್ತಿ

ನವದೆಹಲಿ: ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-3 ರ ನಿರ್ಗಮನ ಪ್ರದೇಶದ ಗೇಟ್‌ನಲ್ಲಿ 39 ವರ್ಷದ ಕುಡುಕ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಭಾನುವಾರ ಸಂಜೆ ನಡೆದ ಘಟನೆಯ ನಂತರ ಬಂಧಿತನಾಗಿದ್ದ ಬಿಹಾರದ ನಿವಾಸಿ ಜೌಹರ್ ಅಲಿ ಖಾನ್ ಅವರನ್ನು ಅದೇ ದಿನ ಜಾಮೀನು ಬಾಂಡ್ ಮೇಲೆ ಬಿಡುಗಡೆ ಮಾಡಲಾಯಿತು ಎಂದು ಅವರು ಹೇಳಿದ್ದಾರೆ.
ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-3ರ ನಿರ್ಗಮನ ಪ್ರದೇಶದ ಗೇಟ್ ಸಂಖ್ಯೆ -6ರಲ್ಲಿ ವ್ಯಕ್ತಿಯೊಬ್ಬರು ಸಾರ್ವಜನಿಕವಾಗಿ ಮೂತ್ರ ವಿಸರ್ಜನೆ ಮಾಡಿದ್ದಾರೆ ಎಂದು ಭಾನುವಾರ ಸಂಜೆ 5:30 ರ ಸುಮಾರಿಗೆ ನಮಗೆ ಮಾಹಿತಿ ಬಂದಿತ್ತು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪೊಲೀಸರ ಪ್ರಕಾರ, ಖಾನ್ ಕುಡಿದ ಸ್ಥಿತಿಯಲ್ಲಿದ್ದಂತೆ ತೋರುತ್ತಿತ್ತು, ಅವರು ಸಾರ್ವಜನಿಕ ಸ್ಥಳದಲ್ಲಿ ಕಿರುಚುವ ಮತ್ತು ಇತರರನ್ನು ನಿಂದಿಸುವ ಮೂಲಕ ಉಪದ್ರವ ನೀಡಿದರು ಹಾಗೂ ಗೊಂದಲ ಸೃಷ್ಟಿಸಿದರು.ಆತ ಸೌದಿ ಅರೇಬಿಯಾದ ದಮಾಮ್‌ಗೆ ತೆರಳಬೇಕಿತ್ತು ಎಂದು ಪೊಲೀಸ್‌ ಅಧಿಕಾರಿ ಹೇಳಿದ್ದಾರೆ.

ಖಾನ್ ಅವರನ್ನು ಸಫ್ದರ್‌ಜಂಗ್ ಆಸ್ಪತ್ರೆಯಲ್ಲಿ ಪರೀಕ್ಷಿಸಲಾಯಿತು ಮತ್ತು ಆತ ಮದ್ಯ ಸೇವಿಸಿರುವುದು ಕಂಡುಬಂದಿದೆ ಎಂದು ಪೊಲೀಸ್ ಉಪ ಆಯುಕ್ತ (ವಿಮಾನ ನಿಲ್ದಾಣ) ರವಿಕುಮಾರ್ ಸಿಂಗ್ ಹೇಳಿದ್ದಾರೆ.
ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 294 (ಅಶ್ಲೀಲ ಕೃತ್ಯಗಳು) ಮತ್ತು 510 (ಕುಡಿತದ ವ್ಯಕ್ತಿಯಿಂದ ಸಾರ್ವಜನಿಕವಾಗಿ ದುರ್ವರ್ತನೆ) ಅಡಿಯಲ್ಲಿ ಪ್ರಕರಣವನ್ನು ಐಜಿಐ ವಿಮಾನ ನಿಲ್ದಾಣದಲ್ಲಿ ದಾಖಲಿಸಲಾಗಿದೆ ಮತ್ತು ಖಾನ್‌ನನ್ನು ಬಂಧಿಸಲಾಗಿದೆ. ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ಡಿಸಿಪಿ ತಿಳಿಸಿದ್ದಾರೆ.
ಇದಕ್ಕೂ ಮುನ್ನ, ಕಳೆದ ವರ್ಷ ನವೆಂಬರ್ 26 ರಂದು ನ್ಯೂಯಾರ್ಕ್‌ನಿಂದ ದೆಹಲಿಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನದ ಬಿಸಿನೆಸ್ ಕ್ಲಾಸ್‌ನಲ್ಲಿ ಮದ್ಯದ ಅಮಲಿನಲ್ಲಿ ಮಹಿಳಾ ಪ್ರಯಾಣಿಕಳ ಮೇಲೆ ಕುಡಿದ ವ್ಯಕ್ತಿಯೊಬ್ಬ ಮೂತ್ರ ವಿಸರ್ಜನೆ ಮಾಡಿದ್ದ ಘಟನೆ ನಡೆದಿತ್ತು.
ಮಹಿಳೆ ಏರ್ ಇಂಡಿಯಾಕ್ಕೆ ನೀಡಿದ ದೂರಿನ ಮೇರೆಗೆ ದೆಹಲಿ ಪೊಲೀಸರು ಜನವರಿ 4 ರಂದು ಆತನ ವಿರುದ್ಧ ಎಫ್‌ಐಆರ್ ದಾಖಲಿಸಿ ಶನಿವಾರ ಬೆಂಗಳೂರಿನಿಂದ ಬಂಧಿಸಿದ್ದರು. ನಂತರ ನ್ಯಾಯಾಲಯವು ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿತು.

ಪ್ರಮುಖ ಸುದ್ದಿ :-   ಮಳೆಯಲ್ಲಿ ಆಟವಾಡುತ್ತೇನೆಂದು ಹಠ ಮಾಡಿದ್ದಕ್ಕೆ 10 ವರ್ಷದ ಬಾಲಕನನ್ನು ಚಾಕುವಿನಿಂದ ಇರಿದು ಕೊಂದ ತಂದೆ...!

3.5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement