ತೀವ್ರ ಆಕ್ರೋಶದ ನಂತರ ದೆಹಲಿ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಕರ್ನಾಟಕದ ಸ್ತಬ್ಧಚಿತ್ರಕ್ಕೆ ಅವಕಾಶ

ಬೆಂಗಳೂರು: ದೆಹಲಿಯಲ್ಲಿ ಜನವರಿ 26ರಂದು ನಡೆಯಲಿರುವ ಗಣರಾಜ್ಯೋತ್ಸವ ಪರೇಡ್‌ ನಲ್ಲಿ ರಾಜ್ಯದ ಸ್ತಬ್ಧಚಿತ್ರಕ್ಕೆ ಅವಕಾಶ ನೀಡಲಾಗಿದೆ. ಕೊನೆ ಕ್ಷಣದಲ್ಲಿ ಕರ್ನಾಟಕ ಸ್ತಬ್ಧಚಿತ್ರ ನಾರಿಶಕ್ತಿ ಗಣರಾಜ್ಯೋತ್ಸವ ಪರೇಡ್‌ಗೆ ಸೇರ್ಪಡೆಯಾಗಿದೆ.
ಈ ಮೊದಲು ರಾಜ್ಯದ ಸ್ತಬ್ಧಚಿತ್ರಕ್ಕೆ ಅವಕಾಶ ನಿರಾಕರಿಸಲಾಗಿತ್ತು. ಬೇರೆ ರಾಜ್ಯಗಳಿಗೂ ಅವಕಾಶ ಕೊಡವ ಹಿನ್ನೆಲೆಯಲ್ಲಿ ಕರ್ನಾಟಕಕ್ಕೆ ಈ ಬಾರಿ ಅವಕಾಶ ನಿರಾಕರಿಸಲಾಗಿದೆ ಎಂದು ಹೇಳಲಾಗಿತ್ತು. ಇದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿತ್ತು. ಆದರೆ ಈಗ ಕೇಂದ್ರ ಸರ್ಕಾರ ಕರ್ನಾಟಕದ ನಾರಿಶಕ್ತಿ ಸ್ತಬ್ಧ ಚಿತ್ರಕ್ಕೆ ಅವಕಾಶ ನೀಡಿದೆ.
ಪದ್ಮಶ್ರೀ ಪುರಸ್ಕೃತ ಮಹಿಳಾ ಸಾಧಕರ ಸಾಧನೆ ಅನಾವರಣಗೊಳಿಸಲು ಕರ್ನಾಟಕವು ನಾರಿ ಶಕ್ತಿ ಕಲ್ಪನೆಯಲ್ಲಿ ಸ್ತಬ್ಧಚಿತ್ರಕ್ಕೆ ಸಿದ್ಧತೆ ಮಾಡಿಕೊಂಡಿದೆ. ಸಾಲುಮರದ ತಿಮ್ಮಕ್ಕ, ಸೂಲಗಿತ್ತಿ ನರಸಮ್ಮ, ತುಳಿಸಿಗೌಡ ಇವರ ಸಾಧನೆ ಅನಾವರಣಗೊಳ್ಳಲಿದೆ.
ಕಳೆದ ವರ್ಷ ದೆಹಲಿಯ ರಾಜಪಥ್‍ನಲ್ಲಿ 73ನೇ ಗಣರಾಜ್ಯೋತ್ಸವ ದಿನಾಚರಣೆಯ ಪರೇಡ್‍ನಲ್ಲಿ ಭಾಗವಹಿಸಿದ್ದ ಕರ್ನಾಟಕ ಪಾರಂಪರಿಕ ಕರಕುಶಲ ವಸ್ತುಗಳಗಳ ತೊಟ್ಟಿಲು ಸ್ತಬ್ಧಚಿತ್ರಕ್ಕೆ ದ್ವಿತೀಯ ಸ್ಥಾನ ಸಿಕ್ಕಿತ್ತು. ಸತತ 13 ವರ್ಷಗಳಿಂದ ಪ್ರದರ್ಶನಗೊಳ್ಳುತ್ತ ಬಂದಿದ್ದ ಕರ್ನಾಟಕದ ಸ್ತಬ್ಧ ಚಿತ್ರಕ್ಕೆ ಈ ವರ್ಷವೂ ಅವಕಾಶ ಸಿಕ್ಕಿದೆ. ಸತತ 14ನೇ ಬಾರಿ ರಾಜ್ಯದ ಸ್ಥಬ್ದ ಚಿತ್ರ ಪ್ರದರ್ಶನಗೊಳ್ಳಲಿದ್ದು, ಕರ್ತವ್ಯವ ಪಥದಲ್ಲಿ ಸಾಗಲಿದೆ.

ಪ್ರಮುಖ ಸುದ್ದಿ :-   ಬೆಂಗಳೂರು: ರಸ್ತೆ ದಾಟುತ್ತಿದ್ದಾಗ ಬೈಕ್ ಡಿಕ್ಕಿ ; ಅಂಧ ದಂಪತಿ ಸಾವು

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement