ಪಂಚಮಸಾಲಿ ಲಿಂಗಾಯತ, ಒಕ್ಕಲಿಗ ಹೊಸ ಮೀಸಲಾತಿಗೆ ಹೈಕೋರ್ಟ್ ಬ್ರೇಕ್, ಯಥಾಸ್ಥಿತಿ ಕಾಪಾಡಲು ಆದೇಶ

posted in: ರಾಜ್ಯ | 0

ಬೆಂಗಳೂರು: ಪಂಚಮಸಾಲಿ ಲಿಂಗಾಯತ ಮತ್ತು ಒಕ್ಕಲಿಗ ಸಮುದಾಯಕ್ಕೆ ಪ್ರತ್ಯೇಕ ಪ್ರವರ್ಗ ಸೃಷ್ಟಿಸಿ ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ ನೀಡುವ ರಾಜ್ಯ ಸರ್ಕಾರದ ತೀರ್ಮಾನದ ವಿಚಾರಣೆ ನಡೆಸಿದ ಹೈಕೋರ್ಟ್ ಗುರುವಾರ ಮೀಸಲಾತಿ ಸಂಬಂಧ ಯಥಾಸ್ಥಿತಿ ಕಾಪಾಡುವಂತೆ ಆದೇಶ ನೀಡಿದೆ.
ಪಂಚಮಸಾಲಿ ಸೇರಿದಂತೆ ವೀರಶೈವ ಲಿಂಗಾಯತ ಸಮುದಾಯಕ್ಕೆ 2ಡಿ ಮತ್ತು ಒಕ್ಕಲಿಗರಿಗೆ 2ಸಿ ಮೀಸಲಾತಿ ನೀಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸಚಿವ ಸಂಪುಟ ಒಪ್ಪಿಗೆ ನೀಡಿತ್ತು. ಬೊಮ್ಮಾಯಿ ಸಂಪುಟದ ತೀರ್ಮಾನ ಪ್ರಶ್ನಿಸಿ ರಾಘವೇಂದ್ರ ಎಂಬವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ಯಥಾಸ್ಥಿತಿ ಕಾಪಾಡಲು ರಾಜ್ಯ ಸರ್ಕಾರಕ್ಕೆ ಗುರುವಾರ ಆದೇಶಿಸಿದೆ.
ಬೆಂಗಳೂರಿನ ಡಿ.ಜಿ.ರಾಘವೇಂದ್ರ ಅವರು ಹಿಂದುಳಿದ ವರ್ಗಗಳ ಪಟ್ಟಿಯ ಪರಿಷ್ಕರಣೆ ನಡೆಸಲು ರಾಜ್ಯ ಸರ್ಕಾರಕ್ಕೆ ಆದೇಶಿಸಬೇಕು ಎಂದು ಕೋರಿರುವ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಅಶೋಕ್‌ ಎಸ್‌.ಕಿಣಗಿ ಅವರ ನೇತೃತ್ವದ ವಿಭಾಗೀಯ ಪೀಠವು ನಡೆಸಿತು.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಅರ್ಜಿದಾರರನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಪ್ರೊ ರವಿವರ್ಮ ಕುಮಾರ್‌ ಅವರು “ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಈಚೆಗೆ ಸಲ್ಲಿಸಿರುವ ಮಧ್ಯಂತರ ವರದಿಯನ್ನು ನಮಗೆ ನೀಡಲಾಗಿಲ್ಲ. ಅಸಾಂವಿಧಾನಿಕ ಬೇಡಿಕೆ ಈಡೇರಿಸಲು ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರಲಾಗುತ್ತಿದೆ. ಅಲ್ಲಿಯವರೆಗೆ ಯಥಾಸ್ಥಿತಿ ಕಾಪಾಡಲು ಆದೇಶಿಸಬೇಕು” ಎಂದು ಕೋರಿದರು.
ರಾಜ್ಯ ಸರ್ಕಾರವನ್ನು ಪ್ರತಿನಿಧಿಸಿದ್ದ ಅಡ್ವೊಕೇಟ್‌ ಜನರಲ್‌ ಪ್ರಭುಲಿಂಗ ನಾವದಗಿ ಅವರು “ವರದಿ ನೀಡಲು ಸ್ವಲ್ಪ ಕಾಲಾವಕಾಶ ನೀಡಬೇಕು. ಹೀಗಾಗಿ ವಿಚಾರಣೆ ಮುಂದೂಡಬೇಕು” ಎಂದು ಮನವಿ ಮಾಡಿದರು. ಇದನ್ನು ನ್ಯಾಯಾಲಯವು ಪುರಸ್ಕರಿಸಿತು. ಹಾಗೂ ಮೀಸಲಾತಿ ವಿಚಾರದಲ್ಲಿ ಯಥಾಸ್ಥಿತಿ ಕಾಯ್ದುಕೊಂಡು ಈಗಿರುವ ಮೀಸಲಾತಿಯನ್ನೇ ಮುಂದುವರಿಸಬೇಕು. ಈ ಬಗ್ಗೆ ಪೂರ್ಣ ವಿಚಾರಣೆ ನಡೆಸಿದ ನಂತರ ಮುಂದಿನ ತೀರ್ಪನ್ನಾಧರಿಸಿ ಸರ್ಕಾರ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಹೈಕೋರ್ಟ್ ಹೇಳಿತು. ಹಾಗೂ ಅರ್ಜಿ ವಿಚಾರಣೆಯನ್ನು ಜನವರಿ 30ಕ್ಕೆ ಮುಂದೂಡಿತು.

ಇಂದಿನ ಪ್ರಮುಖ ಸುದ್ದಿ :-   ರಾಜ್ಯದಲ್ಲಿ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನ ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

3.5 / 5. ಒಟ್ಟು ವೋಟುಗಳು 2

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement