ಪಾಣೆಮಂಗಳೂರು ನೇತ್ರಾವತಿ ನದಿಯಲ್ಲಿ ಕಲ್ಲಡ್ಕ ಬಜರಂಗದಳ ಮುಖಂಡನ ಶವ ಪತ್ತೆ

ಮಂಗಳೂರು : ನೇತ್ರಾವತಿ ನದಿಯಲ್ಲಿ ಬಜರಂಗದಳದ ಮುಖಂಡನೊಬ್ಬನ ಮೃತದೇಹ ಪತ್ತೆಯಾಗಿದ್ದು, ಸದ್ಯ ಸಾವಿನ ಬಗ್ಗೆ ಅನುಮಾನಗಳು ವ್ಯಕ್ತವಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ನೇತ್ರಾವತಿ ನದಿಯ ಹಳೆಯ ಸೇತುವೆ ಬಳಿ ನೇತ್ರಾವತಿ ನದಿಯಲ್ಲಿ ಬಜರಂಗದಳ ಕಲ್ಲಡ್ಕ ಪ್ರಖಂಡದ ಗೋ ರಕ್ಷಾ ಪ್ರಮುಖ ರಾಜೇಶ್ ಪೂಜಾರಿ (26) ಎಂಬವರ ಮೃತದೇಹ ಪತ್ತೆಯಾಗಿದೆ.
ಹಿಂದುಪರ ಸಂಘಟನೆಗಳ ಮುಖಂಡ ರಾಜೇಶ್ ಸುವರ್ಣ ಅವರ ದ್ವಿಚಕ್ರವಾಹನ ಪಾಣೆಮಂಗಳೂರು ಹಳೆಯ ಸೇತುವೆಯಲ್ಲಿ ಇಂದು, ಗುರುವಾರ ಬೆಳಗ್ಗೆ ಅನಾಥ ಸ್ಥಿತಿಯಲ್ಲಿ ಬಿದ್ದುಕೊಂಡಿತ್ತು. ಈ ಬಗ್ಗೆ ಸಂಶಯಗೊಂಡ ಸಾರ್ವಜನಿಕರು ಬಂಟ್ವಾಳ ನಗರ ಪೋಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಅಗ್ನಿಶಾಮಕ ದಳವನ್ನು ಕರೆಸಿದರು. ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಸ್ಥಳೀಯ ಮುಳುಗು ತಜ್ಞರು ನದಿಯಲ್ಲಿ ಹುಡುಕಾಟ ನಡೆಸಿದಾಗ ರಾಜೇಶ್ ಪೂಜಾರಿಯ‌ ಮೃತದೇಹ ಪತ್ತೆಯಾಗಿದೆ. ರಾಜೇಶ ಪೂಜಾರಿ ಸಾವಿನ ಬಗ್ಗೆ ಸ್ಥಳೀಯವಾಗಿ ಅನುಮಾನ ವ್ಯಕ್ತವಾಗಿದ್ದು, ಇದು ಆತ್ಮಹತ್ಯೆ ಅಥವಾ ಅಪಘಾತವೋ ಎಂಬ ಬಗ್ಗೆ ಶಂಕೆ ಇದೆ. ಅವರ ಸಾವಿಗೆ ಸ್ಪಷ್ಟವಾದ ಕಾರಣ ತಿಳಿದು ಬರಬೇಕಿದೆ.
ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ. ರಾಜೇಶ್ ಸಜೀಪದ ಮನೆಯಿಂದ ಬರುತ್ತಿದ್ದ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಅವರು ಕಳೆದ ರಾತ್ರಿ ತನ್ನ ದ್ವಿಚಕ್ರ ವಾಹನದಲ್ಲಿ ಸಂಚರಿಸುತ್ತಿದ್ದ ವೇಳೆ ಸೇತುವೆಯಲ್ಲಿ ರಾಜೇಶ್ ಬಜರಂಗದಳದ ಜವಾಬ್ದಾರಿ ಹೊಂದಿದ್ದ ಮುಖಂಡನಾಗಿದ್ದು, ಹಲವು ಸಾಮಾಜಿಕ ‌ಮತ್ತು ಧಾರ್ಮಿಕ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು.

ಪ್ರಮುಖ ಸುದ್ದಿ :-   ಸಚಿವ ದಿನೇಶ ಗುಂಡೂರಾವ್ ಮನೆಯಲ್ಲಿ ಅರ್ಧ ಪಾಕಿಸ್ತಾನ' ಹೇಳಿಕೆ : ಬಿಜೆಪಿ ಶಾಸಕ ಯತ್ನಾಳ ವಿರುದ್ಧದ ತನಿಖೆಗೆ ಹೈಕೋರ್ಟ್ ತಡೆ

4.5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement