ಬಸ್-ಟ್ರಕ್ ಡಿಕ್ಕಿ: 10 ಜನರು ಸಾವು, 30ಕ್ಕೂ ಹೆಚ್ಚು ಜನರಿಗೆ ಗಾಯ

ನಾಸಿಕ್‌: ಮಹಾರಾಷ್ಟ್ರದ ನಾಸಿಕ್-ಶಿರಡಿ ಹೆದ್ದಾರಿಯಲ್ಲಿ ಶುಕ್ರವಾರ ಟ್ರಕ್‌ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಸೇರಿದಂತೆ 10 ಜನರು ಮೃತಪಟ್ಟಿದ್ದಾರೆ ಮತ್ತು 34 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ
ಪತ್ತಾರೆ ಗ್ರಾಮದ ಬಳಿ ಅಪಘಾತ ಸಂಭವಿಸಿದೆ. ವರದಿಗಳ ಪ್ರಕಾರ, ಖಾಸಗಿ ಐಷಾರಾಮಿ ಬಸ್ ಥಾಣೆ ಜಿಲ್ಲೆಯ ಅಂಬರನಾಥದಿಂದ ಹೊರಟಿತ್ತು. ನಾಸಿಕ್-ಶಿರಡಿ ಹೆದ್ದಾರಿಯ ಪಥರೆ ಶಿವಾರ್ ಬಳಿ ಬೆಳಗ್ಗೆ 7 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ.ಶಿರಡಿ ಸಾಯಿಬಾಬಾ ದೇವಸ್ಥಾನಕ್ಕೆ ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ ಮತ್ತು ಟ್ರಕ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ 10 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಖಾಸಗಿ ಲಕ್ಸುರಿ ಬಸ್ಸಿನಲ್ಲಿದ್ದ ಬಹುತೇಕ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದು, ಥಾಣೆಯಿಂದ 50 ಪ್ರಯಾಣಿಕರು ಬಸ್ ಹತ್ತಿದ್ದಾರೆ. ಉಲ್ಲಾಸನಗರದಿಂದ ಸಾಯಿ ದರ್ಶನಕ್ಕೆ ಹೊರಟಿದ್ದ 15 ಬಸ್‌ಗಳಲ್ಲಿ ಇದೂ ಒಂದು ಎಂದು ಪೊಲೀಸರು ತಿಳಿಸಿದ್ದಾರೆ.
ಮೃತ 10 ಮಂದಿಯಲ್ಲಿ ಐವರು ಮಹಿಳೆಯರು, ಮೂವರು ಪುರುಷರು ಮತ್ತು ಇಬ್ಬರು ಮಕ್ಕಳು ಸೇರಿದ್ದಾರೆ. ಗಾಯಗೊಂಡ 34 ಮಂದಿಯನ್ನು ನಾಸಿಕ್ ಜಿಲ್ಲಾ ಆಸ್ಪತ್ರೆ, ಖಾಸಗಿ ಆಸ್ಪತ್ರೆ ಮತ್ತು ಸಿನ್ನಾರ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರು ಹೇಳಿದ್ದು, ಪೊಲೀಸರು ಹೆದ್ದಾರಿಯನ್ನು ತೆರವುಗೊಳಿಸಿ ತನಿಖೆ ನಡೆಸುತ್ತಿದ್ದಾರೆ.

ಇಂದಿನ ಪ್ರಮುಖ ಸುದ್ದಿ :-   ಪಾಕಿಸ್ತಾನದ ಜನರಲ್ಲಿ ಅತೃಪ್ತಿ ಇದೆ, ಅವರೀಗ ವಿಭಜನೆ "ತಪ್ಪು" ಎಂದು ನಂಬುತ್ತಾರೆ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ ಭಾಗವತ್‌

ಸಿಎಂ ಶಿಂಧೆ ಪರಿಹಾರ ಘೋಷಣೆ
ನಾಸಿಕ್-ಶಿರಡಿ ಹೆದ್ದಾರಿಯಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ಸಂಭವಿಸಿದ ಜೀವಹಾನಿಗೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಸಂತಾಪ ವ್ಯಕ್ತಪಡಿಸಿದ್ದು, ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಘಟನೆ ಕುರಿತು ತನಿಖೆ ನಡೆಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಅವರು ಆದೇಶ ನೀಡಿದ್ದಾರೆ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

3 / 5. ಒಟ್ಟು ವೋಟುಗಳು 1

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement