ಕುಮಟಾ: ಬೆಟ್ಕುಳಿ ಬಳಿ ಅಪರಿಚಿತ ವಾಹನ ಡಿಕ್ಕಿಯಾಗಿ ಚಿರತೆ ಸಾವು | ವೀಕ್ಷಿಸಿ

ಕುಮಟಾ : ಅಪರಿಚಿತ ವಾಹನ ಬಡಿದು ಚಿರತೆಯೊಂದು ಮೃತ ಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಹೀರೆಗುತ್ತಿ ವಲಯ ಅರಣ್ಯ ವ್ಯಾಪ್ತಿಯ ಬೆಟ್ಕುಳಿ ಬಳಿ ಸಂಭವಿಸಿದೆ.
ಶುಕ್ರವಾರ ಬೆಳಿಗ್ಗಿನ ಜಾವ ರಾಷ್ಟ್ರೀಯ ಹೆದ್ದಾರಿ 66 ರ ಪಕ್ಕದಲ್ಲಿ ಚಿರತೆಯ ಮೃತ ದೇಹ ಕಂಡು ಬಂದಿದ್ದು ಅದನ್ನು ನೋಡಿದ ಸ್ಥಳೀಯರು ತಕ್ಷಣವೇ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಚಿರತೆ ಶವ ರಸ್ತೆಯಂಚಿಗೆ ಬಿದ್ದಿತ್ತು. ಗುರುವಾರ ಮಧ್ಯರಾತ್ರಿ ಅಥವಾ ಶುಕ್ರವಾರ ಬೆಳಿಗ್ಗಿನ ಜಾವ ಕಾಡಂಚಿನಿಂದ ರಾಷ್ಟ್ರೀಯ ಹೆದ್ದಾರಿ ದಾಟುವಾಗ ಅಪರಿಚಿತ ವಾಹನ ಡಿಕ್ಕಿ ಹೊಡೆದು ಚಿರತೆ ಮೃತಪಟ್ಟಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದೆ.

ಚಿರತೆಯ ಹೊಟ್ಟೆಯ ಭಾಗಕ್ಕೆ ತೀವ್ರ ಸ್ವರೂಪದ ಪೆಟ್ಟು ಬಿದ್ದಿರುವುದು ಕಂಡುಬಂದಿದ್ದು ಪರೀಕ್ಷೆಗಾಗಿ ಕುಮಟಾ ಪಶು ವೈದ್ಯಕೀಯ ಆಸ್ಪತ್ರೆಗೆ ಸಾಗಿಸಲಾಗಿದೆ.  ವಾಹನ ಸವಾರರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ಸ್ಥಳಕ್ಕಾಗಮಿಸಿದ ಸಿಬ್ಬಂದಿ, ಪರಿಶೀಲನೆ ನಡೆಸಿ ಕಳೇಬರವನ್ನು ಮರಣೋತ್ತರ ಪರೀಕ್ಷೆಗಾಗಿ ಕುಮಟಾಕ್ಕೆ ಕಳುಹಿಸಿದ್ದಾರೆ.

ಇದಕ್ಕೂ ಮುನ್ನ, ಮೃತ ಚಿರತೆ ನೋಡಲು ಜನರು ಮುಗಿಬಿದ್ದು ಫೋಟೋ ಕ್ಲಿಕ್ಕಿಸಿಕೊಂಡರು.
ಈ ಭಾಗದಲ್ಲಿ ಸಾಮಾನ್ಯವಾಗಿ ಚಿರತೆಗಳ ಓಡಾಟ ಇದೆ ಎನ್ನಲಾಗುತ್ತಿದ್ದು ವಾಹನ ಬಡಿದು ಚಿರತೆ ಮೃತ ಪಟ್ಟಿರುವ ಸುದ್ದಿ ತಿಳಿಯುತ್ತಿದ್ದಂತೆ ಸುತ್ತ ಮುತ್ತಲಿನ ನೂರಾರು ಜನರು ಸ್ಥಳದಲ್ಲಿ ಜಮಾಯಿಸಿದ್ದರು.

ಪ್ರಮುಖ ಸುದ್ದಿ :-   ವೀಡಿಯೊ...| ಹೆಗಲ ಮೇಲೆ ಕೈಹಾಕಿದ ಕಾಂಗ್ರೆಸ್​ ಮುಖಂಡನಿಗೆ ಕಪಾಳಕ್ಕೆ ಹೊಡೆದ ಡಿಸಿಎಂ ಡಿ.ಕೆ.ಶಿವಕುಮಾರ

3.5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement