ಕೊನೆಗೂ ಮುಹೂರ್ತ ಫಿಕ್ಸ್ : ಜನವರಿ 29ರಂದು ವಿಷ್ಣು ಸ್ಮಾರಕ ಉದ್ಘಾಟನೆ

ಬೆಂಗಳೂರು: ಮೈಸೂರಿನಲ್ಲಿ ಸಾಹಸ ಸಿಂಹ ಡಾ.ವಿಷ್ಣುವರ್ಧನ್ ಅವರ ಸ್ಮಾರಕ ಜನವರಿ 29 ರಂದು ಲೋಕಾರ್ಪಣೆಗೊಳ್ಳಲಿದೆ.
ವಿಷ್ಣುವರ್ಧನ್ ಇಹಲೋಕ ತ್ಯಜಿಸಿದ ಸರಿ ಸುಮಾರು 14 ವರ್ಷದ ನಂತರ ಸ್ಮಾರಕ ಉದ್ಘಾಟನೆಯಾಗುತ್ತಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದಿನಾಂಕ ನಿಗದಿ ಪಡಿಸಿದ್ದಾರೆ.
ಈ ಕುರಿತು ಮಾಹಿತಿ ಹಂಚಿಕೊಂಡಿರುವ ನಟ ಹಾಗು ವಿಷ್ಣುವರ್ಧನ್ ಅವರ ಅಳಿಯ ಅನಿರುದ್ಧ ಅವರು, ಇದೇ 29 ರಂದು ಸ್ಮಾರಕ ಉದ್ಘಾಟನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದಿನಾಂಕ ನಿಗದಿ ಮಾಡಿದ್ದಾರೆ ಹಾಗೂ ಅವರೇ ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ಸಾಹಸ ಸಿಂಹ ಡಾ.ವಿಷ್ಣುವರ್ಧನ್ ಅವರ ಅಪಾರ ಸಂಖ್ಯೆ ಅಭಿಮಾನಿಗಳು ವಿಷ್ಣುವರ್ದನ್ ಅವರ ಸ್ಮಾರಕ ಉದ್ಟಾಟನೆ ವೇಳೆ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.
ಮೈಸೂರಿನ ಎಚ್ಡಿ ಕೋಟೆಯ ಅಲ್ಲಾಳು ಗ್ರಾಮದಲ್ಲಿ ಐದು ಎಕರೆ ಜಾಗದಲ್ಲಿ ಸ್ಮಾರಕವನ್ನು ನಿರ್ಮಾಣ ಮಾಡಲಾಗಿದೆ.
ವಿಷ್ಣುವರ್ಧನ್ ಅವರಿಗೆ ಸಂಬಂಧಿಸಿದ ಗ್ಯಾಲರಿ, ಆಡಿಟೋರಿಯಂ, ವಿಷ್ಣು ಅವರ ಪುತ್ಥಳಿ, ಕ್ಲಾಸ್ ರೂಮ್ ಹೀಗೆ ಈ ಸ್ಮಾರಕದಲ್ಲಿ ಹತ್ತು ಹಲವು ವಿಶೇಷತೆಗಳಿವೆ ಎಂದು ಹೇಳಲಾಗಿದೆ.
ಹಲವು ವರ್ಷಗಳ ಬಳಿಕ ಸ್ಮಾರಕ ಉದ್ಘಾಟನೆ ಆಗಿರುವುದು ವಿಷ್ಣುವರ್ಧನ್ ಅವರ ಕುಟುಂಬದ ಸದಸ್ಯರಲ್ಲಿ ಹಾಗೂ ಅಭಿಮಾನಿಗಳಲ್ಲಿ ಸಂತಸ ಮೂಡಿದೆ.

ಪ್ರಮುಖ ಸುದ್ದಿ :-   ಬೆಂಗಳೂರು ರಾಮೇಶ್ವರಂ ಕೆಫೆ ಬಾಂಬ್​ ಬ್ಲಾಸ್ಟ್​ ಪ್ರಕರಣ : ಪ್ರಮುಖ ಆರೋಪಿ ಬಂಧನ

 

3.5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement