ತಲೆಮರೆಸಿಕೊಂಡಿದ್ದ ಸ್ಯಾಂಟ್ರೋ ರವಿ ಗುಜರಾತ್‌ನಲ್ಲಿ ಬಂಧನ

ಬೆಂಗಳೂರು : ಅನೈತಿಕ ದಂಧೆ ಹಾಗೂ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಸ್ಯಾಂಟ್ರೋ ರವಿ ಅಲಿಯಾಸ್ ಮಂಜುನಾಥನನ್ನು ಪೊಲೀಸರು ಗುಜರಾತಿನಲ್ಲಿ ಬಂಧಿಸಿದ್ದಾರೆ.
ಕಳೆದ 11 ದಿನಗಳಿಂದ ಮೈಸೂರು ಪೊಲೀಸರು ಸ್ಯಾಂಟ್ರೋ ರವಿಗಾಗಿಹುಡುಕಾಟ ನಡೆಸಿದ್ದರು. ರಾಜ್ಯದಿಂದ ಪರಾರಿಯಾಗಿ ಗುಜರಾತ್‌ನಲ್ಲಿ ತಲೆಮರೆಸಿಕೊಂಡಿದ್ದ ಸ್ಯಾಂಟ್ರೋ ರವಿಯನ್ನು ಮೈಸೂರು ಪೊಲೀಸರು ಕೊನೆಗೂ ಬಂಧಿಸಿದ್ದಾರೆ.
ಸ್ವಂತ ಫೋನ್‌ ಬಳಸದೆ ಪೊಲೀಸರಿಂದ ತಪ್ಪಿಸಿಕೊಂಡಿದ್ದ ಸ್ಯಾಂಟ್ರೋ ರವಿಯ ಚಲನವಲನಗಳನ್ನು ಪತ್ತೆ ಮಾಡಲು ಪೊಲೀಸರು ಸೈಬರ್‌ ತಂತ್ರಜ್ಞಾನ ಸಹ ಬಳಸಿಕೊಂಡಿದ್ದರು. ರವಿ ಫೋನ್ ಹಾಗೂ ಸ್ಯಾಟಲೈಟ್ ಮಾಹಿತಿ ಆಧಾರದ ಮೇಲೆ ಮೈಸೂರು ಪೊಲೀಸರು ಉಡುಪಿ ಸೇರಿದಂತೆ ರಾಜ್ಯದ ವಿವಿಧ ಪ್ರದೇಶಗಳಿಗೆ ತೆರಳಿ ಹುಡುಕಾಟ ನಡೆಸಿದ್ದರು. ಆದರೆ ಸ್ಯಾಂಟ್ರೋ ರವಿ ಪತ್ತೆಯಾಗಿರಲಿಲ್ಲ. ತನ್ನ ಸ್ವಂತ ಫೋನ್‌ನ್ನು ಮೈಸೂರಲ್ಲೇ ಸ್ವಿಚ್ ಮಾಡಿದ್ದ ಸ್ಯಾಂಟ್ರೋ ರವಿ ಬೇರೆಬೇರೆ ಫೋನ್‌ಗಳನ್ನು ಬಳಸುತ್ತಿದ್ದ.

ಸ್ಯಾಂಟ್ರೋ ರವಿಯ 2ನೇ ಪತ್ನಿ ನೀಡಿದ ದೂರಿನ ಆಧಾರದಲ್ಲಿ ಮೈಸೂರು ಪೊಲೀಸರು ತನಿಖೆ ಆರಂಭಿಸಿದ್ದ ಪರಾರಿಯಾಗಿದ್ದ ಆತನನ್ನು ಬಂಧಿಸಲು ಮೈಸೂರು ಪೊಲೀಸರು 6 ತಂಡಗಳನ್ನು ರಚಿಸಿದ್ದರು. ಆತನ ಸಂಪರ್ಕದಲ್ಲಿದ್ದವರ ವಿಚಾರಣೆ ಸಹ ನಡೆಸಲಾಗಿತ್ತು. ರಾಜ್ಯದ ವಿವಿಧ ಭಾಗಗಳಲ್ಲದೆ ರಾಜ್ಯಕ್ಕೆ ಹೊಂದಿಕೊಂಡಿರುವ ಮಹಾರಾಷ್ಟ್ರ , ಕೇರಳದ ಗಡಿ ಪ್ರದೇಶಗಳಲ್ಲಿ ಪೊಲೀಸರು ಕಾರ್ಯಚರಣೆ ನಡೆಸಿದ್ದರು.
ಆದರೆ ಮೈಸೂರಿನಲ್ಲಿ ತನ್ನ ಫೋನ್ ಸ್ವಿಚ್ ಆಫ್ ಮಾಡಿ ತಲೆಮರೆಸಿಕೊಂಡಿದ್ದ ರವಿ ಜಾಡು ಹಿಡಿದ ಮೈಸೂರು ಪೊಲೀಸರು ಗುಜರಾತ್‌ಗೆ ತೆರಳಿದ್ದರು. ಕೊನೆಗೂ ಸ್ಯಾಂಟ್ರೋ ರವಿಯನ್ನು ಬಂಧಿಸಿದ್ದು, ಬೆಂಗಳೂರಿಗೆ ಕರೆತರುತ್ತಿದ್ದಾರೆ.
ಸ್ಯಾಂಟ್ರೊ ರವಿ ವಿರುದ್ಧ ಮೈಸೂರಿನ ವಿಜಯನಗರ ಠಾಣೆಯಲ್ಲಿ ಅತ್ಯಾಚಾರ ಮತ್ತು ಪರಿಶಿಷ್ಟರ ಮೇಲಿನ ದೌರ್ಜನ್ಯ ನಿಯಂತ್ರಣ ಕಾಯ್ದೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಮುಖ ಸುದ್ದಿ :-   ಯಕ್ಷಗಾನದ ಖ್ಯಾತ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement