ಭಾರತ ಜೋಡೋ ಯಾತ್ರೆ ವೇಳೆ ಜಲಂಧರ್‌ ಕಾಂಗ್ರೆಸ್ ಸಂಸದ ನಿಧನ

ಜಲಂಧರ್‌ : ಪಂಜಾಬ್‌ನ ಫಿಲ್ಲೌರ್‌ನಲ್ಲಿ ಶನಿವಾರ ಬೆಳಗ್ಗೆ ಭಾರತ ಜೋಡೋ ಯಾತ್ರೆಯ ವೇಳೆ ಜಲಂಧರ್‌ನ ಕಾಂಗ್ರೆಸ್ ಸಂಸದ ಚೌಧರಿ ಸಂತೋಖ್ ಸಿಂಗ್ ನಿಧನರಾಗಿದ್ದಾರೆ.
ಯಾತ್ರೆಯಲ್ಲಿ ರಾಹುಲ್ ಗಾಂಧಿ ಜೊತೆಗೆ ನಡೆದುಕೊಂಡು ಹೋಗುತ್ತಿದ್ದಾಗ ಅವರಿಗೆ ಹೃದಯ ಬಡಿತ ಹೆಚ್ಚಾಗಿ ಇದ್ದಕ್ಕಿದ್ದಂತೆ ಅಸ್ವಸ್ಥರಾದರು. ತಕ್ಷಣವೇ
ಕಾಂಗ್ರೆಸ್ ನಾಯಕನನ್ನು ಫಗ್ವಾರದ ವಿರ್ಕ್ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಲಾಯಿತು. ಸುದ್ದಿ ತಿಳಿದ ರಾಹುಲ್ ಗಾಂಧಿ ಭಾರತ ಜೋಡೋ ಯಾತ್ರೆಯಿಂದ ಹೊರಟು ಆಸ್ಪತ್ರೆ ತಲುಪಿದರು. ದಿನದ ಮಟ್ಟಿಗೆ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ.
ಜಲಂಧರ್ ಜಿಲ್ಲೆಯ ಫಿಲ್ಲೌರ್ ಪ್ರದೇಶದ ಮೂಲಕ ಯಾತ್ರೆ ಸಾಗುತ್ತಿದ್ದಾಗ ದುರಂತ ಸಂಭವಿಸಿದೆ. ಫಿಲೌರ್ ವಿಧಾನಸಭಾ ಕ್ಷೇತ್ರವನ್ನು ಸಂತೋಷ್ ಸಿಂಗ್ ಚೌಧರಿ ಅವರ ಪುತ್ರ ವಿಕ್ರಮಜಿತ್ ಚೌಧರಿ ಪ್ರತಿನಿಧಿಸುತ್ತಿದ್ದಾರೆ. 2014 ಮತ್ತು 2019ರಲ್ಲಿ ಎರಡು ಬಾರಿ ಲೋಕಸಭೆ ಚುನಾವಣೆಯಲ್ಲಿ ಸಂತೋಷ್ ಸಿಂಗ್ ಗೆದ್ದಿದ್ದರು.

ಮೃತ ಸಂಸದರು ರಾಹುಲ್ ಅವರೊಂದಿಗೆ ಕುಶ್ತ್ ಆಶ್ರಮದಿಂದ ಹೊರಬಂದಾಗ ಕುಸಿದು ಬಿದ್ದಿದ್ದಾರೆ ಎಂದು ತಿಳಿದುಬಂದಿದೆ. ತಕ್ಷಣ ಅವರನ್ನು ಆಂಬ್ಯುಲೆನ್ಸ್‌ನಲ್ಲಿ ವಿರ್ಕ್ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಆದರೆ ಅಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಲಾಯಿತು..
ಭಾರತ ಜೋಡೋ ಯಾತ್ರೆ ಕಳೆದ ವರ್ಷ ಸೆಪ್ಟೆಂಬರ್ 7 ರಂದು ಕನ್ಯಾಕುಮಾರಿಯಿಂದ ಪ್ರಾರಂಭವಾಯಿತು ಮತ್ತು ಜನವರಿ 30 ರಂದು ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಮುಕ್ತಾಯಗೊಳ್ಳಲಿದೆ.
ಪಂಜಾಬಿನಲ್ಲಿ ಕಾಂಗ್ರೆಸ್ ಸಂಸದರ ನಿಧನಕ್ಕೆ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಟ್ವಿಟರಿನಲ್ಲಿ ಸಂತಾಪ ಸೂಚಿಸಿದ್ದಾರೆ. ಪಂಜಾಬ್‌ನ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಕೂಡ ಸಂತಾಪ ವ್ಯಕ್ತಪಡಿಸಿದ್ದಾರೆ.. ಸಂತೋಖ್ ಸಿಂಗ್ ಚೌಧರಿ ಅವರ ನಿಧನಕ್ಕೆ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಸಂತಾಪ ಸೂಚಿಸಿದ್ದಾರೆ.
ಇತ್ತೀಚಿನ ನವೀಕರಣದ ಪ್ರಕಾರ, ಕಾಂಗ್ರೆಸ್ ಸಂಸದ ಸಂತೋಖ್ ಸಿಂಗ್ ಚೌಧರಿ ಅವರ ಅಂತ್ಯಕ್ರಿಯೆಯನ್ನು ಅವರ ಗ್ರಾಮದಲ್ಲಿ ನಾಳೆ (ಭಾನುವಾರ) ನೆರವೇರಿಸಲಾಗುತ್ತದೆ.

ಪ್ರಮುಖ ಸುದ್ದಿ :-   ನಾಳೆ ಫಿಲಿಪ್ಪೀನ್ಸ್‌ಗೆ ʼಬ್ರಹ್ಮೋಸ್ ಕ್ಷಿಪಣಿʼಗಳ ಮೊದಲ ಸೆಟ್ ನೀಡಲಿದೆ ಭಾರತ

4 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement