ಫೆಬ್ರವರಿ ಎರಡನೇ ವಾರದಲ್ಲಿ ರಾಜ್ಯ ಬಜೆಟ್ ಮಂಡನೆ: ಸಿಎಂ ಬೊಮ್ಮಾಯಿ

ದಾವಣಗೆರೆ: ಫೆಬ್ರವರಿ ಎರಡನೇ ವಾರದಲ್ಲಿ ರಾಜ್ಯದ ಬಜೆಟ್ ಮಂಡನೆಯಾಗಲಿದೆ ಎಂದು ಹಣಕಾಸು ಖಾತೆಯನ್ನೂ ಹೊಂದಿರುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ದಾವಣಗೆರೆಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಜೆಟ್ ತಯಾರಿ ಸಂಬಂಧ ಸರಣಿ ಸಭೆಗಳನ್ನು ನಡೆಸಲಾಗುತ್ತಿದೆ. ‌ಡಿಸೆಂಬರ್ ಅಂತ್ಯದವರೆಗೆ ರಾಜ್ಯದ ತೆರಿಗೆ ಸಂಗ್ರಹ ಗುರಿ ಮೀರಿ ಆಗಿದೆ ಎಂದು ತಿಳಿಸಿದರು.
ತೆರಿಗೆ ಸಂಗ್ರಹಕ್ಕೆ ಅನುಗುಣವಾಗಿ ಬಜೆಟ್ ತಯಾರಿ ಮಾಡಲಾಗುತ್ತಿದೆ. ಬೇರೆ ಬೇರೆ ಇಲಾಖೆಗಳ ಜೊತೆ ಸಭೆಗಳನ್ನು ನಡೆಸಿ ಫೆಬ್ರವರಿ ಎರಡನೇ ವಾರದಲ್ಲಿ ಜನಪರವಾದ ಬಜೆಟ್ ಮಂಡಿಸಲಾಗುವುದು ಎಂದು ಹೇಳಿದರು.
ರಾಜ್ಯದಲ್ಲಿ 25 ಜವಳಿ ಪಾರ್ಕ್ ಗಳನ್ನು ಆರಂಭಿಸುವ ಚಿಂತನೆ ಇದೆ. ಹತ್ತಿ ಉತ್ಪಾದನೆ ಹೆಚ್ಚಾಗಿದೆ ಆದರೆ ಅದರ ಉತ್ಪನ್ನಗಳ ತಯಾರಿಕೆ ಕಡಿಮೆ ಇದೆ ಈ ಹಿನ್ನೆಲೆಯಲ್ಲಿ ರಾಜ್ಯದಲ್ಕಿ 25 ಜವಳಿ ಪಾರ್ಕ್ ಗಳನ್ನು ಆರಂಭಿಸುವ ಉದ್ದೇಶವಿದ್ದು, ಈ ಬಾರಿಯ ಬಜೆಟ್‌ನಲ್ಲಿ ಪ್ರಸ್ತಾಪ ಮಾಡಲಾಗುವುದು ಎಂದರು.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement