ಸ್ಯಾಂಟ್ರೋ ರವಿಗೆ 14 ದಿನ ನ್ಯಾಯಾಂಗ ಬಂಧನ

ಮೈಸೂರು: ಮಾನವ ಕಳ್ಳಸಾಗಣೆ, ಅನೈತಿಕ ದಂಧೆ ಹಾಗೂ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಕೆ.ಎಸ್.ಮಂಜುನಾಥ ಅಲಿಯಾಸ್ ಸ್ಯಾಂಟ್ರೋ ರವಿಯನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಮೈಸೂರಿನ ಜೆಎಂಎಫ್​ಸಿ ಕೋರ್ಟ್ ಆದೇಶಿಸಿದೆ.
ಎರಡನೇ ಶನಿವಾರ ಆಗಿದ್ದರಿಂದ ನ್ಯಾಯಾಲಯಕ್ಕೆ ಹಿನ್ನಲೆಯಲ್ಲಿ ಶುಕ್ರವಾರ ಗುಜರಾತ್ ನಲ್ಲಿ ಬಂಧನಕ್ಕೊಳಗಾಗಿದ್ದ ಸ್ಯಾಂಟ್ರೋ ರವಿಯನ್ನು ಪೊಲೀಸರು ಇಂದು (ಜ.14) ಮೈಸೂರಿನ ವಿವಿ ಮೊಹಲ್ಲಾದಲ್ಲಿರುವ ನಿವಾಸದಲ್ಲಿ ನ್ಯಾಯಾಧೀಶ ನ್ಯಾಯಾಧೀಶರಾದ ಗುರುರಾಜ್‌ ಸೋಮಕ್ಕಲವರ ಮುಂದೆ ಸ್ಯಾಂಟ್ರೋ ರವಿಯನ್ನು ಹಾಜರುಪಡಿಸಲಾಯಿತು. ವಿಚಾರಣೆ ನಡೆಸಿದ ಅವರು ಆರೋಪಿಯ 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶಿಸಿದರು.
ಕಳೆದ 11 ದಿನಗಳಿಂದ ತಲೆಮರೆಸಿಕೊಂಡಿದ್ದ ಸ್ಯಾಂಟ್ರೋ ರವಿಗಾಗಿ ಬಲೆ ಬೀಸಿದ ಮೈಸೂರು ಪೊಲೀಸರು ನಿನ್ನೆ ಗುಜರಾತ್ ನಲ್ಲಿ ಬಂಧಿಸಿದ್ದರು.

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಲೋಕಸಭಾ ಚುನಾವಣೆ ವೇಳೆ ಬಿಜೆಪಿಗೆ ಶಾಕ್ : ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಿಜೆಪಿ ಸದಸ್ಯ ಕೆ.ಪಿ.ನಂಜುಂಡಿ

ನಿಮ್ಮ ಕಾಮೆಂಟ್ ಬರೆಯಿರಿ

advertisement