ಹುಬ್ಬಳ್ಳಿ-ಧಾರವಾಡಕ್ಕೆ ರಾಷ್ಟ್ರೀಯ ವಿಧಿವಿಜ್ಞಾನ ವಿಶ್ವವಿದ್ಯಾಲಯ : ಕೇಂದ್ರ ಸಚಿವ ಪ್ರಹ್ಲಾದ ಜೋಶಿ

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡದಲ್ಲಿ ರಾಷ್ಟ್ರೀಯ ವಿಧಿವಿಜ್ಞಾನ ವಿಶ್ವವಿದ್ಯಾಲಯ (ಎನ್‌ಎಫ್‌ಎಸ್‌ಯು) ಸ್ಥಾಪನೆಗೆ ಭಾರತ ಸರ್ಕಾರದ ಗೃಹ ಸಚಿವಾಲಯವು ತಾತ್ವಿಕ ಅನುಮೋದನೆ ನೀಡಿದೆ.
ಈ ಕುರಿತು ಟ್ವಿಟರ್‌ನಲ್ಲಿ ಸುದ್ದಿ ಹಂಚಿಕೊಂಡಿರುವ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು, ಹುಬ್ಬಳ್ಳಿ_ಧಾರವಾಡ ಅವಳಿ ನಗರಕ್ಕೆ ರಾಷ್ಟ್ರೀಯ ಪ್ರಾಮುಖ್ಯತೆಯ ಮತ್ತೊಂದು ಸಂಸ್ಥೆಯನ್ನು ಕೇಂದ್ರ ಸರ್ಕಾರ ಮಂಜೂರು ಮಾಡಿದೆ ಎಂದು ತಿಳಿಸಿದ್ದಾರೆ.
ನ್ಯಾಷನಲ್ ಫಾರೆನ್ಸಿಕ್ ಸೈನ್ಸ್ (ವಿಧಿವಿಜ್ಞಾನ) ಯೂನಿವರ್ಸಿಟಯ ಆಫ್ ಕ್ಯಾಂಪಸ್ (ಶಾಖೆ) ಯನ್ನು ಹುಬ್ಬಳ್ಳಿಯಲ್ಲಿ ಸ್ಥಾಪಿಸುವಂತೆ ಕೇಂದ್ರ ಸರಕಾರ ಪತ್ರದ ಮೂಲಕ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ. ಯೋಜನೆಯ ಡಿಪಿಆರ್ ಪ್ರಸ್ತುತಪಡಿಸಿದ ನಂತರ ಮುಂದಿನ ಕಾರ್ಯ ಚಟುವಟಿಕೆಗಳು ಆರಂಭವಾಗಲಿವೆ ಎಂದು ಅವರು ಹೇಳಿದ್ದಾರೆ. ಈ ವಿಶ್ವವಿದ್ಯಾಲಯ ಸ್ಥಾಪನೆಗೆ ಅನುಮೋದನೆ ನೀಡಿದ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ ಶಾ ಅವರಿಗೆ ಧನ್ಯವಾದಗಳನ್ನು ಜೋಶಿ ತಿಳಿಸಿದ್ದಾರೆ.

ಕಳೆದ 2-3 ತಿಂಗಳ ಹಿಂದೆ ಕೇಂದ್ರ ಗೃಹ ಸಚಿವರಿಗೆ ಈ ಕುರಿತು ವಿವರವಾಗಿ ಪತ್ರ ಬರೆದು ಈ ಭಾಗದಲ್ಲಿ ಈ ವಿಶ್ವವಿದ್ಯಾಲಯ ಕ್ಯಾಂಪಸ್‌ ಸ್ಥಾಪನೆಯ ಅಗತ್ಯತೆ ಬಗ್ಗೆ ಮನವರಿಕೆ ಮಾಡಲಾಗಿತ್ತು. ನಂತರ ನಿರಂತರವಾಗಿ ಗೃಹ ಸಚಿವ ಅಮಿತ್‌ ಶಾ ಅವರೊಂದಿಗೆ ಸಂಪರ್ಕದಲ್ಲಿದ್ದು ಚರ್ಚೆ ನಡೆಸಿದ್ದೆ. ಇದರ ಪರಿಣಾಮವಾಗಿ ಮಹಾನಗರಕ್ಕೆ ಇಂತಹ ಉನ್ನತ ಶೈಕ್ಷಣಿಕ ಸಂಸ್ಥೆ ದೊರೆಯುತ್ತಿದೆ ಎಂದು ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಬಿಜೆಪಿ ವಿರುದ್ಧ 40 ಪರ್ಸೆಂಟ್‌ ಕಮಿಷನ್‌ ಜಾಹೀರಾತು: ಸಿಎಂ ಸಿದ್ದರಾಮಯ್ಯ, ಡಿಸಿಎಂಗೆ ಡಿಕೆಶಿಗೆ ಸಮನ್ಸ್‌ ಮರು ಜಾರಿ

ಎನ್‌ಎಫ್‌ಎಸ್‌ಯು ಅಪರಾಧ ತನಿಖಾ ಕ್ಷೇತ್ರದಲ್ಲಿ ನುರಿತ ಮಾನವಶಕ್ತಿಯನ್ನು ಸೃಷ್ಟಿಸುತ್ತದೆ ಮತ್ತು ತನಿಖೆ, ತಡೆಗಟ್ಟುವಿಕೆ ಮತ್ತು ಅಪರಾಧಗಳ ಪತ್ತೆಗೆ ಸಂಬಂಧಿಸಿದ ಹೊಸ ವಿಧಾನಗಳನ್ನು ಅಭಿವೃದ್ಧಿಪಡಿಸಲು ನವೀನ ಪ್ರಯೋಗಗಳನ್ನು ನಡೆಸುತ್ತದೆ. ರಾಷ್ಟ್ರೀಯ ವಿಧಿ ವಿಜ್ಞಾನ ವಿಶ್ವವಿದ್ಯಾಲಯವು ಹುಬ್ಬಳ್ಳಿಯಲ್ಲಿ ಕ್ಯಾಂಪಸ್ ಅನ್ನು ಹೊಂದಿರುತ್ತದೆ. ಸದ್ಯಕ್ಕೆ, ಭಾರತದಾದ್ಯಂತ ಎನ್‌ಎಫ್‌ಎಸ್‌ಯುದ 8 ಆಫ್-ಕ್ಯಾಂಪಸ್‌ಗಳಿವೆ. ಅವುಗಳಲ್ಲಿ ಗುಜರಾತ್, ದೆಹಲಿ, ಗೋವಾ, ತ್ರಿಪುರಾ, ಭೋಪಾಲ್, ಪುಣೆ, ಗುವಾಹತಿ ಮತ್ತು ಮಣಿಪುರ ಸೇರಿದೆ.

ಪ್ರಮುಖ ಸುದ್ದಿ :-   ಬೆಂಗಳೂರು ರಾಮೇಶ್ವರಂ ಕೆಫೆ ಬಾಂಬ್​ ಬ್ಲಾಸ್ಟ್​ ಪ್ರಕರಣ : ಪ್ರಮುಖ ಆರೋಪಿ ಬಂಧನ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement