ಕಾರು ಚಾಲಕನ ಸಾವು ಪ್ರಕರಣ: ಸಿಬಿಐ ತನಿಖೆಗೆ ಆಗ್ರಹಿಸಿ ಸಿಎಂ ಬೊಮ್ಮಾಯಿಗೆ ಯತ್ನಾಳ ಪತ್ರ

ವಿಜಯಪುರ: ಸಚಿವ ಮುರುಗೇಶ ನಿರಾಣಿ ಹಾಗೂ ಶಾಸಕ ಬಸನಗೌಡ ಪಾಟೀಲ ಯತ್ನಾಳ ನಡುವಿನ ವಾಗ್ಯುದ್ಧ ಮುಂದುವರೆದಿದ್ದು, ಕಾರು ಚಾಲಕನ ಹತ್ಯೆ ಪ್ರಕರಣದ ಆರೋಪಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ನಡೆಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಯತ್ನಾಳ ಅವರು ಪತ್ರ ಬರೆದು ಒತ್ತಾಯಿಸಿದ್ದಾರೆ.
ಸಚಿವ ಮುರುಗೇಶ ನಿರಾಣಿ ನಿನ್ನೆ, ಶನಿವಾರ ವಿಜಯಪುರದ ಕಾರು ಚಾಲಕನ ಹತ್ಯೆಯಾಗಿತ್ತು. ಆತ ಯಾರು? ಏನು? ಹತ್ಯೆಯ ಬಗ್ಗೆ ಮಾಧ್ಯಮಗಳು ತನಿಖೆ ನಡೆಸಲಿ ಎಂದು ಯತ್ನಾಳ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದರು. ಇದಕ್ಕೆ ಪ್ರತಿಯಾಗಿ ಶಾಸಕ ಬಸವನಗೌಡ ಪಾಟೀಲ್‌ ಯತ್ನಾಳ ಅವರು ಈಗ ಮುಖ್ಯಮಂತ್ರಿಗೆ ಪತ್ರ ಬರೆದು, ಆರೋಪದ ಬಗ್ಗೆ ಸಿಬಿಐ ತನಿಖೆಗೆ ವಹಿಸಬೇಕು ಎಂದು ಒತ್ತಾಯಿಸಿದ್ದಾರೆ.
ವಿಜಯಪುರದ ಕಾರು ಚಾಲಕನೊಬ್ಬನ ಕೊಲೆ ಬಗ್ಗೆ ಕ್ಯಾಬಿನೆಟ್ ದರ್ಜೆಯ ಸಚಿವರೊಬ್ಬರು ಮಾಧ್ಯಮದ ಮುಂದೆ ಗಂಭೀರ ಆರೋಪ ಮಾಡಿದ್ದು, ಜನತೆಗೆ ತಪ್ಪು ಸಂದೇಶ ರವಾನೆಯಾಗುತ್ತದೆ. ಜನತೆಗೆ ಎಲ್ಲ ಸತ್ಯಾಸತ್ಯತೆ ಗೊತ್ತಾಗಬೇಕು. ಹೀಗಾಗಿ ತಕ್ಷಣ 24 ಗಂಟೆಯಲ್ಲಿಯೇ ಈ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಕೇಂದ್ರಕ್ಕೆ ಶಿಫಾರಸ್ಸು ಮಾಡಬೇಕೆಂದು ಯತ್ನಾಳ ಅವರು ಪತ್ರದಲ್ಲಿ ಒತ್ತಾಯಿಸಿದ್ದಾರೆ.
ಅಷ್ಟೇ ಅಲ್ಲದೆ, ಸುಳ್ಳು ಆರೋಪ ಮಾಡಿ, ಜನತೆಗೆ ತಪ್ಪು ಸಂದೇಶ ನೀಡುವ ತಪಿತಸ್ಥರ ಮೇಲೆ ಕ್ರಮ ಕೈಗೊಳ್ಳಬೇಕು, ಇಲ್ಲವಾದಲ್ಲಿ ಸುಳ್ಳು ಆರೋಪ ಮಾಡಿದ ಸಚಿವರನ್ನು ಸಂಪುಟದಿಂದ ವಜಾಗೊಳಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಪ್ರಮುಖ ಸುದ್ದಿ :-   ಬಿಜೆಪಿ ಅಭ್ಯರ್ಥಿಗಳ 7ನೇ ಪಟ್ಟಿ ಪ್ರಕಟ : ಚಿತ್ರದುರ್ಗದಲ್ಲಿ ಹಾಲಿ ಸಂಸದರಿಗೆ ಕೊಕ್, ಯಡಿಯೂರಪ್ಪ ಆಪ್ತನಿಗೆ ಟಿಕೆಟ್‌

 

4 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement