ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ನಾಳೆ ಸೋಮವಾರ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಉಭಯ ನಾಯಕರ ಭೇಟಿ ಕುತೂಹಲ ಮೂಡಿಸಿದೆ.
ದೆಹಲಿಯಲ್ಲಿ ಪಕ್ಷದ ರಾಷ್ಟ್ರೀಯ ಕಚೇರಿಯಲ್ಲಿ ಸೋಮವಾರ ಹಾಗೂ ಮಂಗಳವಾರ ನಡೆಯಲಿರುವ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಅವರು ಪಾಲ್ಗೊಳ್ಳಲಿದ್ದಾರೆ.
ಮುಖ್ಯಮಂತ್ರಿ ಬೊಮ್ಮಾಯಿ ಹುಬ್ಬಳ್ಳಿಯಿಂದ ಹಾಗೂ ಯಡಿಯೂರಪ್ಪ ಬೆಂಗಳೂರಿನಿಂದ ತೆರಳಲಿದ್ದು, ಎರಡು ದಿನಗಳ ಸಭೆ ಬಹಳ ಮಹತ್ವ ಪಡೆದುಕೊಂಡಿದೆ. ಇವರಲ್ಲದೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಮತ್ತಿತರರು ಭಾಗಿಯಾಗಲಿದ್ದಾರೆ, ಈ ಎರಡು ದಿನಗಳ ದೆಹಲಿ ಭೇಟಿ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟ ವಿಸ್ತರಣೆ ಕುರಿತು ಚರ್ಚೆ ನಡೆಸಬಹುದು ಎಂದು ಹೇಳಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ