ಹೋರಿ ಬೆದರಿಸುವ ಸ್ಪರ್ಧೆ ವೇಳೆ ಹೋರಿ ತಿವಿದು ಇಬ್ಬರು ಸಾವು

ಶಿವಮೊಗ್ಗ: ವರ್ಷದ ಮೊದಲ ಹಬ್ಬ ಮಕರ ಸಂಕ್ರಾಂತಿಯ ಹಿನ್ನಲೆಯಲ್ಲಿ ಆಯೋಜಿಸಿದ್ದ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಹೋರಿ ತಿವಿದು ಇಬ್ಬರು ಮೃತಪಟ್ಟ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಸಂಕ್ರಾಂತಿ ಹಬ್ಬದ ನಿಮಿತ್ತ ಹೋರಿ ಬೆದರಿಸುವ ಸ್ಪರ್ಧೆ ಆಯೋಜಿಸಲಾಗಿತ್ತು.ಎರಡು ಪ್ರತ್ಯೇಕ ಪ್ರಕರಣದಲ್ಲಿ ಹೋರಿ ತಿವಿದು ಇಬ್ಬರು ಮೃತಪಟ್ಟಿದ್ದಾರೆ.
ಜ.೧೪ ರಂದು ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪದ ಬಳಿಯ ಮಾಳೂರು ಗ್ರಾಮದಲ್ಲಿ ಹೋರಿ ಬೆದರಿಸುವ ಸ್ಪರ್ಧೆ ವೇಳೆ ರಂಗನಾಥ (೨೪) ಎಂಬವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿ ಆಗದೆ ಇಂದು, ಸೋಮವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ.
ಮತ್ತೊಂದು ಘಟನೆಯಲ್ಲಿ ಕೊನಗನವಳ್ಳಿಯಲ್ಲಿ ನಡೆದ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಎದೆಗೆ ಹೋರಿ ತಿವಿದ ಪರಿಣಾಮ ಲೋಕೇಶ ( ೩೨) ಎಂಬವರು ತೀವ್ರವಾಗಿ ಗಾಯಗೊಂಡಿದ್ದರು. ನೋಡಲು ಹೋಗಿದ್ದ ಆಲ್ಕೊಳದ ನಿವಾಸಿಗೆ ಹೋರಿ ಎದೆಗೆ ತಿವಿದಿತ್ತು. ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಘಟನೆಯಲ್ಲಿ ೬ ಜನರಿಗೆ ಗಾಯಗಳಾಗಿವೆ. ಮೃತ ಲೋಕೇಶ್ ರೈತಾಪಿ ವರ್ಗದವರಾಗಿದ್ದು, ಅವರಿಗೆ ಮೂರು ಮಕ್ಕಳಿದ್ದಾರೆ. ಕೊನಗವಳ್ಳಿಯ ಹೋರಿ ಹಬ್ಬದ ಆಯೋಜಕರ ವಿರುದ್ಧ ದೂರು ದಾಖಲಾಗಿದೆ. ಕುಂಸಿ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಪ್ರಮುಖ ಸುದ್ದಿ :-   ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ದೊಡ್ಡ ಟ್ವಿಸ್ಟ್‌: ವೀಡಿಯೊ ನೀಡಿದ್ದು ನಾನೇ ಎಂದಿದ್ದ ಮಾಜಿ ಕಾರು ಚಾಲಕ ಕಾರ್ತಿಕ್ ನಾಪತ್ತೆ...!?

4 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement