ಕಾಶ್ಮೀರದ ಬುದ್ಗಾಮ್‌ನಲ್ಲಿ ಇಬ್ಬರು ಎಲ್‌ಇಟಿ ಭಯೋತ್ಪಾದಕರನ್ನು ಹೊಡೆದುರುಳಿಸಿದ ಭದ್ರತಾ ಪಡೆಗಳು

ಶ್ರೀನಗರ: “ಕಾಶ್ಮೀರದ ಬುದ್ಗಾಮ್‌ನಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿದ್ದು, ಅವರು ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಭಯೋತ್ಪಾದಕರೊಂದಿಗೆ ಸಂಬಂಧ ಹೊಂದಿದ್ದರು” ಎಂದು ಕಾಶ್ಮೀರದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ವಿಜಯಕುಮಾರ ಮಂಗಳವಾರ ತಿಳಿಸಿದ್ದಾರೆ.
ಈ ಪ್ರದೇಶದಲ್ಲಿ ಭಯೋತ್ಪಾದಕರ ಚಲನವಲನದ ಬಗ್ಗೆ ಮಾಹಿತಿ ಪಡೆದ ನಂತರ ಸೈನಿಕರು ಬುದ್ಗಾಮ್‌ನಲ್ಲಿ ಮೊಬೈಲ್ ವಾಹನ ತಪಾಸಣಾ ಕೇಂದ್ರವನ್ನು ಸ್ಥಾಪಿಸಿದ್ದಾರೆ ಎಂದು ಸೇನಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. “ತಪಾಸಣೆಗಾಗಿ ಕ್ಯಾಬ್ ಅನ್ನು ನಿಲ್ಲಿಸಲು ಸೂಚಿಸಲಾಯಿತು ಆದರೆ ಒಳಗಿದ್ದ ಭಯೋತ್ಪಾದಕರು ಭದ್ರತಾ ಪಡೆಗಳ ಮೇಲೆ ಗುಂಡು ಹಾರಿಸಿದರು, ಆಗ ಪ್ರತಿದಾಳಿ ನಡೆಸಲಾಯಿತು ಎಂದು ಅಧಿಕಾರಿ ಹೇಳಿದರು.

ಘಟನೆಯನ್ನು ದೃಢೀಕರಿಸಿ, ಕಾಶ್ಮೀರ ವಲಯ ಪೊಲೀಸರು ಟ್ವೀಟ್ ಮಾಡಿದ್ದಾರೆ, “ನಿರ್ದಿಷ್ಟ ಮಾಹಿತಿಯ ಮೇರೆಗೆ, ಸೇನೆ ಮತ್ತು ಪೊಲೀಸರ ಜಂಟಿ ಪಡೆ ಒಂದು ಶಂಕಿತ ವಾಹನವನ್ನು ತಡೆಯಲು ಪ್ರಯತ್ನಿಸಿತು, ಆಗ ಅದರಲ್ಲಿದ್ದ ಭಯೋತ್ಪಾದಕರು ಗುಂಡು ಹಾರಿಸಿದರು ಮತ್ತು ಪ್ರತಿಯಾಗಿ ಸೇನೆ ಗುಂಡು ಹಾರಿಸಿದಾಗ ಇಬ್ಬರು ಭಯೋತ್ಪಾದಕರು ಕೊಲ್ಲಲ್ಪಟ್ಟರು. ಶಸ್ತ್ರಾಸ್ತ್ರಗಳು ಹಾಗೂ ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಇಬ್ಬರೂ ಕೊಲ್ಲಲ್ಪಟ್ಟ ಭಯೋತ್ಪಾದಕರನ್ನು ಪುಲ್ವಾಮಾದ ಅರ್ಬಾಜ್ ಮೀರ್ ಮತ್ತು ಶಾಹಿದ್ ಶೇಖ್ ಎಂದು ಗುರುತಿಸಲಾಗಿದೆ, ನಿಷೇಧಿತ ಭಯೋತ್ಪಾದಕ ಸಂಘಟನೆ ಎಲ್ಇಟಿಯೊಂದಿಗೆ ಸಂಪರ್ಕ ಹೊಂದಿದ್ದರು. ಈ ಭಯೋತ್ಪಾದಕರು ಈ ಹಿಂದೆ ಎನ್‌ಕೌಂಟರ್‌ನಿಂದ ತಪ್ಪಿಸಿಕೊಂಡಿದ್ದರು ಎಂದು ಕಾಶ್ಮೀರದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ವಿಜಯಕುಮಾರ ಹೇಳಿದರು.

ಪ್ರಮುಖ ಸುದ್ದಿ :-   ಲೋಕಸಭೆ ಚುನಾವಣೆ 2024 : 2ನೇ ಹಂತದ 88 ಕ್ಷೇತ್ರಗಳಲ್ಲಿ 63% ಮತದಾನ

4 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement