ಜೂನ್ 2024ರ ವರೆಗೆ ಬಿಜೆಪಿ ಅಧ್ಯಕ್ಷರಾಗಿ ಜೆ.ಪಿ. ನಡ್ಡಾ ಅಧಿಕಾರಾವಧಿ ವಿಸ್ತರಣೆ

ನವದೆಹಲಿ: ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಜೆ.ಪಿ. ನಡ್ಡಾ ಅವರ ಅಧಿಕಾರಾವಧಿಯನ್ನು ಮಂಗಳವಾರ ವಿಸ್ತರಿಸಲಾಗಿದೆ. 2024ರ ಲೋಕಸಭೆ ಚುನಾವಣೆಗೆ ಜೆಪಿ ನಡ್ಡಾ ಬಿಜೆಪಿ ಮುಖ್ಯಸ್ಥರಾಗಿ ಮುಂದುವರಿಯಲಿದ್ದಾರೆ.
ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಜೆ.ಪಿ. ನಡ್ಡಾ ಅವರ ಅಧಿಕಾರಾವಧಿಯನ್ನು ಜೂನ್ 2024ರ ವರೆಗೆ ವಿಸ್ತರಿಸಲಾಗಿದೆ” ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಘೋಷಣೆ ಮಾಡಿದರು.
ಜೆ.ಪಿ. ನಡ್ಡಾ ಅವರ ನಾಯಕತ್ವದಲ್ಲಿ, ನಾವು ಬಿಹಾರದಲ್ಲಿ ಅತಿ ಹೆಚ್ಚು ಸ್ಟ್ರೈಕ್ ರೇಟ್ ಹೊಂದಿದ್ದೇವೆ. ಎನ್‌ಡಿಎ ಮಹಾರಾಷ್ಟ್ರದಲ್ಲಿ ಬಹುಮತ ಗಳಿಸಿತು, ಉತ್ತರ ಪ್ರದೇಶದಲ್ಲಿ ಗೆದ್ದಿತು ಮತ್ತು ಪಶ್ಚಿಮ ಬಂಗಾಳದಲ್ಲಿ ನಮ್ಮ ಸಂಖ್ಯೆ ಹೆಚ್ಚಾಯಿತು. ನಾವು ಗುಜರಾತ್‌ನಲ್ಲೂ ಭರ್ಜರಿ ಗೆಲುವು ದಾಖಲಿಸಿದ್ದೇವೆ ಎಂದು ಅಮಿತ್ ಶಾ ಹೇಳಿದರು.
ಮುಂದಿನ ವರ್ಷ ನಡೆಯಲಿರುವ ಸಾರ್ವತ್ರಿಕ ಚುನಾವಣೆಗಳ ಕುರಿತು ಮಾತನಾಡಿದ ಅಮಿತ್ ಶಾ, “ಮೋದಿ ಅವರ ನಾಯಕತ್ವದಲ್ಲಿ ಮತ್ತು ನಡ್ಡಾ ಅವರ ಜೊತೆಯಲ್ಲಿ ನಾವು 2024 ರ ಚುನಾವಣೆಯಲ್ಲಿ 2019 ಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ನನಗೆ ಖಾತ್ರಿಯಿದೆ” ಎಂದು ಹೇಳಿದರು.
ದೆಹಲಿಯಲ್ಲಿ ನಡೆಯುತ್ತಿರುವ ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯ ಎರಡನೇ ಮತ್ತು ಮುಕ್ತಾಯದ ದಿನದಂದು ಈ ಘೋಷಣೆ ಹೊರಬಿದ್ದಿದೆ.

ಪ್ರಮುಖ ಸುದ್ದಿ :-   ವೀಡಿಯೊ...| ಬೈಕ್​ಗೆ ಡಿಕ್ಕಿ ಹೊಡೆದ ನಂತ್ರ ದೂರ ಎಳೆದೊಯ್ದ ಲಾರಿ..: ಟ್ರಕ್‌ ಹಿಡಿದುಕೊಂಡು ನೇತಾಡುತ್ತಿದ್ದ ಸವಾರ

ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಬಿಜೆಪಿ ಮುಖ್ಯಮಂತ್ರಿಗಳು ಸೇರಿದಂತೆ ಇತರ ಪ್ರಮುಖ ನಾಯಕರು ರಾಷ್ಟ್ರೀಯ ಕಾರ್ಯಕಾರಿಣಿಯ ಮಹತ್ವದ ಸಭೆಯಲ್ಲಿ ಭಾಗವಹಿಸುತ್ತಿದ್ದಾರೆ.
ಬಿಜೆಪಿ ಮುಖ್ಯಸ್ಥರಾಗಿ ಜೆಪಿ ನಡ್ಡಾ ಅಧಿಕಾರಾವಧಿ
ಜೆ.ಪಿ. ನಡ್ಡಾ 2019 ರಲ್ಲಿ ಅಂದಿನ ಪಕ್ಷದ ಮುಖ್ಯಸ್ಥ ಅಮಿತ್ ಶಾ ಕೇಂದ್ರ ಸಚಿವರಾದಾಗ ಬಿಜೆಪಿ ಕಾರ್ಯಾಧ್ಯಕ್ಷರಾಗಿ ಪ್ರಾರಂಭಿಸಿದರು. ನಡ್ಡಾ ಅವರು 2020 ರಲ್ಲಿ ಪೂರ್ಣ ಸಮಯದ ಅಧ್ಯಕ್ಷರಾಗಿ ಆಯ್ಕೆಯಾದರು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಅವರ ಅಧಿಕಾರಾವಧಿ ವಿಸ್ತರಣೆಯನ್ನು ನಿರೀಕ್ಷಿಸಲಾಗಿತ್ತು.
ಬಿಜೆಪಿ ಮುಖ್ಯಸ್ಥರಾಗಿರುವ ನಡ್ಡಾ ಅವರ ಅಧಿಕಾರಾವಧಿಯನ್ನು ಜೂನ್ 2024 ರವರೆಗೆ ವಿಸ್ತರಿಸಲಾಗಿದೆ. ಮುಂದಿನ ಸಾರ್ವತ್ರಿಕ ಚುನಾವಣೆಯ ಸಮಯದಲ್ಲಿ ಜೆ.ಪಿ. ನಡ್ಡಾ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿರುತ್ತಾರೆ, ಲೋಕಸಭೆ ಚುನಾವಣೆ ಮೇ, 2024 ರಲ್ಲಿ ನಡೆಯಲಿದೆ ಎಂದು ನಿರೀಕ್ಷಿಸಲಾಗಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement